ಯಡಿಯೂರಪ್ಪ ಸಿಎಂ ಆಗಿ ಮುಂದುವರಿಕೆಗೆ ಅಭಿಮಾನಿಗಳಿಂದ ಪೂಜೆ
ಮಂಡ್ಯ, ಜೂನ್ 17: ಬಿ.ಎಸ್ ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ರೀತಿಯ ಕಂಟಕಗಳು ಎದುರಾಗದೆ ಸುಲಲಿತವಾಗಿ ಅವಧಿ ಪೂರ್ಣಗೊಳಿಸಲಿ ಎಂದು ಮಂಡ್ಯದ ಬಿಎಸ್‌ವೈ ಅಭಿಮಾನಿಗಳು ಎಂಟು ದಿಕ್ಕುಗಳಿಗೂ ಈಡುಗಾಯಿ ಒಡೆದಿದ್ದಾರೆ.
ಮಂಡ್ಯದ ಕಾಳಮ್ಮ ದೇವಸ್ಥಾನದ ಮುಂಭಾಗ ಗುರುವಾರ ಪೂಜೆ ಸಲ್ಲಿಸಿದ ಬಿಎಸ್‌ವೈ ಅಭಿಮಾನಿಗಳು ಎಂಟು ದಿಕ್ಕುಗಳಿಗೂ ಈಡುಗಾಯಿ ಒಡೆದು ಮುಂದಿನ ಎರಡು ವರ್ಷಗಳ ಕಾಲವೂ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಪ್ರಾರ್ಥನೆ ಮಾಡಿದರು
"ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಇಳಿ ವಯಸ್ಸಿನಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಎರಡು ವರ್ಷಗಳು ಅವರೇ ಮುಖ್ಯಮಂತ್ರಿಗಳಾಗಿದ್ದರೆ, ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತವೆ,'' ಎಂದು ಅಭಿಮಾನಿಗಳು ಹೇಳಿದ್ದಾರೆ.

ರಾಜ್ಯಕ್ಕೆ ಬಂದಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಭಿನ್ನರ ಬೇಡಿಕೆಗೆ ಗಮನ ಕೊಡದೆ ಬಿ.ಎಸ್ ಯಡಿಯೂರಪ್ಪರ ಬೆಂಬಲಕ್ಕೆ ನಿಂತು, ಸಚಿವರು ಮತ್ತು ಶಾಸಕರುಗಳಿಗೆ ಬಿಎಸ್‌ವೈಗೆ ಸಹಕಾರ ನೀಡುವಂತೆ ಸೂಚನೆ ನೀಡಬೇಕು. ಯಡಿಯೂರಪ್ಪ ಮೇಲೆ ಸದಾ ದೈವಾನುಗ್ರಹ ಇರಲಿ ಎಂದು ಅವರು ಪ್ರಾರ್ಥನೆ ಮಾಡಿಕೊಂಡರು.












Click it and Unblock the Notifications