ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸಿಎಂ ಆಸರೆ!

By Lekhaka
|
Google Oneindia Kannada News

ಬೆಂಗಳೂರು, ಆಗಸ್ಟ್ 21: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಣೆ ಮಾಡಿದರು. ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Recommended Video

Sumalatha ಸೊಂಟಕ್ಕೆ ಕೈ ಹಾಕಿದ Yediyurappa | Onendia Kannada

ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಬಾಗಿನ ಅರ್ಪಣೆ ಕಾರ್ಯಕ್ರಮಮದಲ್ಲಿ ಭಾಗವಹಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಣೆಕಟ್ಟಿನ ಮೇಲಿಂದ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡುವಾಗ ಸಂಸದೆ ಸುಮಲತಾ ಅವರು ಕೂಡ ಪಕ್ಕದಲ್ಲಿ ನಿಂತು ಬಾಗಿನ ಅರ್ಪಣೆ ಮಾಡಿದರು.

ಈ ಬಾರಿ ನಾಡಹಬ್ಬ ದಸರಾ ಸರಳವಾಗಿ ಆಚರಣೆ: ಸಿಎಂ ಯಡಿಯೂರಪ್ಪಈ ಬಾರಿ ನಾಡಹಬ್ಬ ದಸರಾ ಸರಳವಾಗಿ ಆಚರಣೆ: ಸಿಎಂ ಯಡಿಯೂರಪ್ಪ

ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಸುಮಲತಾ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡುವಾಗ ಆಯ ತಪ್ಪಬಾರದು ಎಂಬ ಉದ್ದೇಶದಿಂದ ಆಸರೆ ಹಿಡಿದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

CM Yediyurappa Put Hand On MP Sumalatha While Offering Bagina To KRS Dam

ಸಿಎಂ ಯಡಿಯೂರಪ್ಪ ಅವರು ಆಸರೆಗೆ ಹಿಡಿದಿದ್ದು, ಅಪಾರ್ಥಕ್ಕೆ ಎಡೆಮಾಡಿಕೊಡಬಾರದು ಎಂದು ತಕ್ಷಣವೇ ಸುಮಲತಾ ಅವರು ಸಿಎಂ ಗಮನಕ್ಕೆ ತಂದರು. ಕೂಡಲೇ ಎಚ್ಚೆತ್ತುಕೊಂಡ ಸಿಎಂ, ಸುಮಲತಾ ಅವರಿಗೆ ಕೈಮುಗಿದರು. ಇದು ಅಚಾತುರ್ಯದ ಘಟನೆಯೊ, ಆಕಸ್ಮಿಕವಾದ ಘಟನೆಯೊ ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆಯ ಬಗ್ಗೆ ಒಬ್ಬರೂ ನಾಯಕರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿದೆ.

English summary
CM Yediyurappa put hand on MP Sumalatha ambareesh while offering Bagina to cauvery river at KRS dam in Mandya. Video goes viral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X