ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್‌ನಿಂದ ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ

By Nayana
|
Google Oneindia Kannada News

ಮಂಡ್ಯ, ಆಗಸ್ಟ್ 14: ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೃಷ್ಣರಾಜ ಜಲಾಶಯ ಭರ್ತಿಯಾಗಿದೆ. ಮಂಗಳವಾರ 1 ಲಕ್ಷ ಕ್ಯೂಸೆಕ್‌ ನೀರು ಬಿಡುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಬಸವರಾಜೇಗೌಡ ತಿಳಿಸಿದ್ದಾರೆ.

ಕೆಆರ್‌ಎಸ್‌ ಮಾದರಿಯಲ್ಲೇ ಯಗಚಿ ಜಲಾಶಯ ಅಭಿವೃದ್ಧಿಕೆಆರ್‌ಎಸ್‌ ಮಾದರಿಯಲ್ಲೇ ಯಗಚಿ ಜಲಾಶಯ ಅಭಿವೃದ್ಧಿ

ಕಳೆದ ಒಂದು ವಾರದಿಂದ ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದೆ. ಕೊಡಗು, ಮಡಿಕೇರಿ, ಕೇರಳ, ಮೈಸೂರು, ಮಂಗಳೂರು, ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೃಷ್ಣರಾಜ ಜಲಾಶಯ ತುಂಬಿದ್ದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಒಂದು ಲಕ್ಷ ಕ್ಯೂಸೆಕ್‌ ನೀರನ್ನು ಜಲಾಶಯದಿಂದ ಹೊರ ಬಿಡಲಾಗಿದೆ. ಮಂಗಳವಾರ ಮಧ್ಯಾಹ್ನದ ಒಳಗೆ 1,20,000 ಕ್ಯೂಸೆಕ್‌f ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇದೆ.

CNNL released 1 lakh cueseq of water from KRS

ನದಿ ನಂಡೆಯ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಬಸವರಾಜೇಗೌಡ ಮನವಿ ಮಾಡಿದ್ದಾರೆ. ಕೆಆರ್‌ಎಸ್‌ನಿಂದ ಒಂದು ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆಯಾಗಿದ್ದು, ಶ್ರೀರಂಗಪಟ್ಟಣ ಸುತ್ತಮುತ್ತಲಿನ ನದಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿ ಮಾಡಿದೆ.

English summary
Cauvery Niravari Nigam Limited has released one lakh cueseq of water from Krishna Raj Sagar on Tuesday as inflow of water increased heavy rainfall in catchment area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X