ಕೆಇಎಯಿಂದ ಅ. 28, 29ರಂದು ವಿವಿಧ ಹುದ್ದೆಗಳ ಭರ್ತಿಗೆ ಪರೀಕ್ಷೆ: ಡ್ರೆಸ್‌ಕೋಡ್ ಮಾರ್ಗಸೂಚಿ ಹೀಗಿದೆ
ಮಂಡ್ಯ, ಅಕ್ಟೋಬರ್, 26: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 28, 29ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿಯಾಗಿದ್ದು, ಹಿಜಾಬ್ ಧರಿಸಿಕೊಂಡು ಹಾಜರಾಗುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಗೆ ಬರುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಸ್. ನಾಗರಾಜು ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ.ಇ.ಎ. ಪರೀಕ್ಷೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಪುರುಷರು ಮತ್ತು ಸ್ತ್ರೀಯರಿಗೆ ಪ್ರತ್ಯೇಕ ವಸ್ತ್ರ ಸಂಹಿತೆ ಜಾರಿಯಾಗಿದ್ದು, ಕೆಇಎ ನಿಯಮಾನುಸಾರ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸಿ ಕೊಠಡಿಗೆ ತೆರಳಲು ಅನುಮತಿಸಲಾಗುತ್ತದೆ ಎಂದು ಹೇಳಿದರು.

ಅಕ್ಟೋಬರ್ 28ರಂದು ಆಪ್ತ ಕಾರ್ಯದರ್ಶಿ, ಹಿರಿಯ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಸೇಲ್ಸ್ ಮೇಲ್ವಿಚಾರಕರು ಸೇರಿದಂತೆ ಮುಂತಾದ ಸಮನಾದ ಹುದ್ದೆಗಳಿಗೆ ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಟೋಬರ್ 29ರಂದು ದ್ವಿತೀಯ ದರ್ಜೆ ಸಹಾಯಕ/ಕಿರಿಯ ಸಹಾಯಕ ಸೇರಿದಂತೆ ಸಮನಾದ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 27 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಅಕ್ಟೋಬರ್ 28ರಂದು 17 ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಅಕ್ಟೋಬರ್ 29ರಂದು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.
ಅಕ್ಟೋಬರ್ 28ರಂದು ಬೆಳಗ್ಗೆ 10:30ಕ್ಕೆ ನಡೆಯಲಿರುವ ಪರೀಕ್ಷೆಗೆ 4,162 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಪರೀಕ್ಷೆಗೆ 4,199 ಅಭ್ಯರ್ಥಿಗಳು, ಅಕ್ಟೋಬರ್ 29ರಂದು ಬೆಳಗ್ಗೆ 10:30ಕ್ಕೆ ನಡೆಯಲಿರುವ ಪರೀಕ್ಷೆಗೆ 10,643 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಪರೀಕ್ಷೆಗೆ 10,697 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ತಿಳಿಸಿದರು.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಕ್ಯಾಲ್ಯೂಲೇಟರ್‌ಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೆಲಸಕ್ಕೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಬೈಲ್ ಉಪಯೋಗಿಸದಂತೆ ತಾಕೀತು ಮಾಡಿದರು.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲ. ಆದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು, ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ, ಪೈಜಾಮನ್ನು ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿ ಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೊಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಥ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತ ಮತ್ತು ಕೆ.ಇ.ಎ. ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿನ್ನುಡಿಯ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಹಿಜಾಬ್ ಧರಿಸುವ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ತಪಾಸಣೆಗೆ ಒಳಗಾಗಬೇಕು. ಮಾಂಗಲ್ಯ ಸರ ಮತ್ತು ಮೂಗುತಿ ಹೊರತು ಪಡಿಸಿ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋ ಫೋನ್‌ಗಳು, ಬ್ಲೂಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್‌ಗಳು ಮತ್ತು ಲಾಗ್‌ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ಬ್ಲೂಟೂತ್ ಸಾಧನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸಿವುದನ್ನು, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು/ಸಾಧನವನ್ನು ಧರಿಸುವುದನ್ನು ನಿಷೇಧೀಸಿದೆ. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.
ಪರೀಕ್ಷೆಯ ದಿನದಂದು ಪ್ರವೇಶ ಪತ್ರ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು, ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋವನ್ನು ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಎಂ. ಬಾಬು, ಡಿ.ಡಿ.ಪಿ.ಯು ಸಿ.ಚೆಲುವಯ್ಯ, ಡಯಟ್ ಪ್ರಾಂಶುಪಾಲ ಪುರುಷೋತ್ತಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications