ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್‌ನಿಂದ; ನಮಗೆ ಪಾಠ ಮಾಡುವ ಅವಶ್ಯಕತೆ ಇಲ್ಲ: ಸಿ.ಟಿ. ರವಿ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮದ್ದೂರು, ಜನವರಿ, 08: ಭ್ರಷ್ಟಾಚಾರ ಹುಟ್ಟಿದ್ದೆ ಕಾಂಗ್ರೆಸ್‌ನಿಂದ, ಅವರು ನಮಗೆ ನೀತಿ ಪಾಠ ಕೇಳುವ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮದ್ದೂರಿನಲ್ಲಿ ವಾಗ್ದಾಳಿ ನಡೆಸಿದರು.

ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಛೇರಿಗೆ ಭೇಟಿ ನೀಡಿ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಪಿ.ಸ್ವಾಮಿ ಹಾಗೂ ಮುಖಂಡರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಇತ್ತೀಚೆಗೆ ಯಾರೋ ಸರ್ಕಾರಿ ಅಕಾರಿಯೊಬ್ಬರ ಬಳಿ ವಿಧಾನಸೌಧದಲ್ಲಿ 10 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದರು. ಆದರೆ ಕಾಂಗ್ರೆಸ್‌ನವರು ನಮ್ಮ ಪಕ್ಷದ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಇದೇ ವಿಧಾನಸೌಧದಲ್ಲಿ ಟಿನ್ ಕ್ಯಾರಿಯನಲ್ಲಿ ಸಚಿವರೊಬ್ಬರ ಕೊಠಡಿಯಲ್ಲೇ ಲಕ್ಷಾಂತರ ರೂಪಾಯಿ ಹಣ ಸಿಕ್ಕಿದ್ದರ ಬಗ್ಗೆ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಬಿಜೆಪಿ ಸೇರ್ಪಡೆ ವಿಚಾರ: ಮಹತ್ವದ ನಿರ್ಧಾರವನ್ನ ಬಹಿರಂಗಪಡಿಸಿದ ಸಂಸದೆ ಸುಮಲತಾಬಿಜೆಪಿ ಸೇರ್ಪಡೆ ವಿಚಾರ: ಮಹತ್ವದ ನಿರ್ಧಾರವನ್ನ ಬಹಿರಂಗಪಡಿಸಿದ ಸಂಸದೆ ಸುಮಲತಾ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಸ್ಯಾಂಟ್ರೋ ರವಿ ಜೊತೆಗೆ ಬಿಜೆಪಿ ನಾಯಕರ ನಂಟಿದೆ. ಹಾಗೂ ಈ ಬಗ್ಗೆ ದಾಖಲೆಗಳಿವೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ನಾಯಕರ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಆ ರೀತಿಯ ದಾಖಲೆಗಳಿದ್ದರೆ ಈಗಲೇ ಬಿಡುಗಡೆ ಮಾಡಲಿ. ಅದನ್ನು ಬಿಟ್ಟು ಹಾವು ಬಿಡುತ್ತೀನಿ, ಮತ್ತೆ ಬಿಡುತ್ತೀನಿ, ಆಮೇಲೆ ಬಿಡುತ್ತೀನಿ ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಲೇವಡಿ ಮಾಡಿದರು.

Corruption is birth from Congress; CT Ravi

ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ವಿಧಾನಸೌಧದ ಗೋಡೆಗಳನ್ನು ಮುಟ್ಟಿದರೇ ಹಾಗೂ ರಾಜ್ಯದ ಸರ್ಕಾರಿ ಕಛೇರಿಗಳ ಗೋಡೆಗಳು ಸಹ ಕಾಸು, ಕಾಸು ಎನ್ನುತ್ತಿವೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರದಲ್ಲಿ ಆ ರೀತಿಯ ಭ್ರಷ್ಟಾಚಾರ ಇಲ್ಲ. ಕಡಿಮೆ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿ ಅತೀ ಹೆಚ್ಚು ಶ್ರೀಮಂತ ವ್ಯಕ್ತಿ ಆಗಿರುವುದನ್ನು ಕಂಡಿದ್ದೇನೆ. ಇದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರವಾಗಿದೆ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಬಿಜೆಪಿ ಸರ್ಕಾರವನ್ನು ರೌಡಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನವರು ಆರೋಪಿಸುತ್ತಿದ್ದಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಆಗೇನಿಲ್ಲ. ಹಾಗೂ ಆ ದಿನಗಳ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ ಎಂದರು.

ನಂದಿನಿ ಹಾಗೂ ಅಮುಲ್ ವಿಲೀನ ಇಲ್ಲ

ಇತ್ತೀಚೆಗೆ ಅಮಿತ್ ಶಾ ಅವರು ಮನ್ ಮುಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕದ ನಂದಿನಿಯನ್ನು ಗುಜರಾತ್‌ನ ಅಮುಲ್ ಜೊತೆ ವಿಲೀನ ಮಾಡುವುದರ ಬಗ್ಗೆ ಹೆಚ್ಚು ಟೀಕೆಗಳು ವ್ಯಕ್ತವಾಗುತ್ತಲೇ ಇವೆ. ಹಾಗೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಂದಿನಿ ಹಾಗೂ ಅಮುಲ್ ಅನ್ನು ವಿಲೀನಗೊಳಿಸುವ ಪ್ರಸ್ತಾಪ ಇಲ್ಲ. ಬದಲಾಗಿ ಎರಡು ರಾಜ್ಯಗಳ ಮುಂದುವರೆದ ಒಕ್ಕೂಟಗಳ ಬೆಳೆವಣಿಗೆಗೆ ಪೂರಕವಾದ ವಾತಾವರಣ ಆಗಬೇಕಿದೆ ಎಂದು ಅಮಿತ್ ಶಾ ಅವರು ಹೇಳಿದ್ದಾರೆ. ಈ ವಿಷಯವಾಗಿ ವಿರೋಧ ಪಕ್ಷದವರು ಮೈಸೂರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

Corruption is birth from Congress; CT Ravi

ಈ ಸಂದರ್ಭದಲ್ಲಿ ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೃಷ್ಣೇಗೌಡ, ಗ್ರಾಮ ಪಂಚಾಯತ್‌ ಅಧ್ಯಕ್ಷ ಶಂಕರೇಗೌಡ, ಮುಖಂಡರಾದ ಚಿಕಮರಿಯಪ್ಪ, ಮನು, ಶಿವದಾಸ್ ಸತೀಶ್, ಜಗನ್ನಾಥ್, ಮಹೇಶ್, ವೀರಭದ್ರ ಸ್ವಾಮಿ, ನಗರಕೆರೆ ಪ್ರಸನ್ನ, ಮಧು, ಅಭಿ, ಶಿವು, ದ್ಯಾವಯ್ಯ ಸೇರಿದಂತೆ ಮತ್ತಿತರರು ಇದ್ದರು.

English summary
BJP National General Secretary CT Ravi said in maddur, Corruption is birth from Congress, CT Ravi outrage against congress, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X