ಕೆ.ಆರ್.ಪೇಟೆ ಬಳಿ ವಿವಾಹಿತ ಪ್ರೇಮಿಗಳಿಬ್ಬರು ನೇಣಿಗೆ ಶರಣು!
ಸಂತೇಬಾಚಹಳ್ಳಿ ಹೋಬಳಿಯ ಸಾರಂಗಿ ಗ್ರಾ.ಪಂ.ವ್ಯಾಪ್ತಿಗೆ ಸೇರಿದ ಮಲ್ಲೇನಹಳ್ಳಿ ಗ್ರಾಮದ ಶೇಖರ್(38) ಮತ್ತು ಸೌಮ್ಯ(30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಕೆ.ಆರ್.ಪೇಟೆ (ಮಂಡ್ಯ), ಮೇ 10: ವಿವಾಹಿತ ಪ್ರೇಮಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ
ಸಂತೇಬಾಚಹಳ್ಳಿ ಹೋಬಳಿಯ ಸಾರಂಗಿ ಗ್ರಾ.ಪಂ.ವ್ಯಾಪ್ತಿಗೆ ಸೇರಿದ ಮಲ್ಲೇನಹಳ್ಳಿ ಗ್ರಾಮದ ಶೇಖರ್(38) ಮತ್ತು ಸೌಮ್ಯ(30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು
ಮಲ್ಲೇನಹಳ್ಳಿ ಗ್ರಾಮದ ಸಿದ್ದೇಗೌಡ ಎಂಬುವರ ಪುತ್ರ ಶೇಖರನಿಗೆ ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿದ್ದು ಈತನಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಮತ್ತೊಂದೆಡೆ ಗ್ರಾಮದ ನಿವಾಸಿ ಶಂಕರೇಗೌಡ ಎಂಬಾತ ಸೌಮ್ಯ ಎಂಬಾಕೆಯನ್ನು ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದು ಈ ದಂಪತಿಗೆ 9 ವರ್ಷದ ಪುತ್ರನಿದ್ದಾರೆ.

ಈ ನಡುವೆ ಶೇಖರ ಮತ್ತು ಸೌಮ್ಯ ನಡುವೆ ಅನೈತಿಕ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ. ಅಲ್ಲದೆ ಇವರಿಬ್ಬರು ಸಂಸಾರವನ್ನು ಬಿಟ್ಟು ಪ್ರತ್ಯೇಕವಾಗಿ ಬದುಕುವ ಬಯಕೆ ಹೊಂದಿದ್ದರು. ಹೀಗಾಗಿ ಕಳೆದ 10 ದಿನಗಳ ಹಿಂದೆ ಇವರಿಬ್ಬರು ಮನೆಬಿಟ್ಟು ಹೊರಟು ಹೋಗಿದ್ದರು.
ಆದರೆ ಹೆಚ್ಚು ದಿನ ಇರಲಾರದೆ ಮತ್ತೆ ಊರಿಗೆ ಮರಳಿದ್ದರಾದರೂ ಮನೆಗೆ ತೆರಳಲು ಧೈರ್ಯವಿಲ್ಲದೆ, ನಿಂದನೆಗೊಳಗಾಗುವ ಭಯದಿಂದ ಮಲ್ಲೇನಹಳ್ಳಿ ಬಳಿಯ ಹೇಮಾವತಿ ಕಾಲುವೆಯ ಮೇಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಕುರಿತು ಎರಡೂ ಕುಟುಂಬದವರು ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿರುವ ಕೆ.ಆರ್.ಪೇಟೆ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಾವು ಕಚ್ಚಿ ರೈತ ಸಾವು
ಮತ್ತೊಂದು ಪ್ರಕರಣದಲ್ಲಿ ಕೃಷಿ ಪಂಪ್‍ಸೆಟ್ ಗೆ ಚಾಲನೆ ಮಾಡಲು ಹೋಗಿದ್ದ ರೈತನಿಗೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ ಸಂತೇಬಾಚಹಳ್ಳಿ ಹೋಬಳಿಯ ಬಳ್ಳೇಕೆರೆ ಗ್ರಾಮದಲ್ಲಿ ನಡೆದಿದೆ.
ಬಳ್ಳೇಕೆರೆ ಗ್ರಾಮದ ಶ್ರೀನಿವಾಸಮೂರ್ತಿ ಅವರ ಪುತ್ರ ಆನಂದ್(25) ಮೃತಪಟ್ಟ ದುರ್ದೈವಿ. ಬಳ್ಳೇಕೆರೆ ಗ್ರಾಮದಲ್ಲಿರುವ ತಮ್ಮ ಜಮೀನಿಗೆ ಕೊರೆಸಿದ್ದ ಕೊಳವೆ ಬಾವಿಯ ಪಂಪ್‍ಸೆಟ್‍ನ್ನು ಚಾಲನೆ ಮಾಡಲು ರಾತ್ರಿ ಹೋಗಿದ್ದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿದೆ.
ತಕ್ಷಣ ಅವರಿಗೆ ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications