ಮಂಡ್ಯದಲ್ಲಿ ದಂಪತಿ ಬರ್ಬರ ಹತ್ಯೆ; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮಂಡ್ಯ, ಜುಲೈ 19: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್. ಪೇಟೆ ತಾಲ್ಲೂಕು ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ರಾಯಸಮುದ್ರದ ಗುಂಡಣ್ಣ (50) ಮತ್ತು ಲಲಿತಮ್ಮ (45) ಕೊಲೆಯಾದ ದಂಪತಿ. ಎರಡು ಮೂರು ದಿನಗಳಿಂದ ಇವರ ಮನೆಗೆ ಬೀಗ ಹಾಕಲಾಗಿತ್ತು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಅನುಮಾನಗೊಂಡ ಅಕ್ಕಪಕ್ಕದವರು ಕಿಟಕಿಯಲ್ಲಿ ಇಣುಕಿ ನೋಡಿದಾಗ ದಂಪತಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಪಟ್ಟಣದ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಸುಮಾರು ಆರು ದಿನಗಳ ಹಿಂದೆಯೇ ಕೊಲೆ ಮಾಡಿ ಬೀಗ ಹಾಕಿಕೊಂಡು ಹೋಗಲಾಗಿದೆ. ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

couple murdered in kr pete mandya

ಕೆ.ಆರ.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+