ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಜೂನ್ 03: ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಅನ್ನು ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭಿಸಲಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

ಕೋವಿಡ್ 19 ಟೆಸ್ಟಿಂಗ್ ಲ್ಯಾಬ್ ಉದ್ಘಾಟಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಆದಿಚುಂಚನಗಿರಿ ಶ್ರೀಗಳನ್ನು ಅಭಿನಂದಿಸಿದರು. ತೀರಾ ಅಗತ್ಯವಿರುವ ಕೋವಿಡ್ -19 ಟೆಸ್ಟಿಂಗ್ ಲ್ಯಾಬ್ ಅನ್ನು ಕೆಲವೇ ದಿನಗಳಲ್ಲಿ ನಿರ್ಮಿಸಿದ್ದಾರೆ. ಇಷ್ಟು ದಿನ ಕೊರೊನಾ ವೈರಸ್ ಪರೀಕ್ಷಾ ವರದಿಗಾಗಿ ಒಂದೆರಡು ದಿನ ಕಾಯಬೇಕಾಗುತ್ತಿತ್ತು. ಈಗ 24 ಗಂಟೆಯಲ್ಲಿ ವರದಿ ಸಿಗಲಿದೆ. ಪರೀಕ್ಷೆಗೆ ಬೇಕಾದ ಅಗತ್ಯ ಹಣವನ್ನು ಸರ್ಕಾರ ಭರಿಸಲು ಸಿದ್ಧವಿದೆ ಎಂದರು.

ಕೋವಿಡ್ - 19 ಪರೀಕ್ಷೆ; ಕರ್ನಾಟಕದಿಂದ ಮಹತ್ವದ ಆದೇಶಕೋವಿಡ್ - 19 ಪರೀಕ್ಷೆ; ಕರ್ನಾಟಕದಿಂದ ಮಹತ್ವದ ಆದೇಶ

ಇದೇ ವೇಳೆ ಜನರಿಗೆ ಕೆಲವು ಸಲಹೆಗಳನ್ನು ನೀಡಿದ ಸಚಿವರು, "ಯಾರೂ ಮದ್ಯ ಹಾಗೂ ಧೂಮಪಾನ ಮಾಡಬೇಡಿ. ಇದರಿಂದ ರೋಗನಿರೋಧಕ ಶಕ್ತಿ ಕಡಿಮೆ ಆಗತ್ತೆ. ಆರೋಗ್ಯಯುತ ಜೀವನಕ್ಕೆ ಇದು ಮಾರಕ. ಹೀಗಾಗಿ ದುಶ್ಚಟಗಳಿಂದ ದೂರವಿರಿ" ಎಂದು ಹೇಳಿದರು.

Covid 19 Testing Lab Started In Adichunchanagiri Medical College In Mandya

ಅಲ್ಲದೆ ಮೈಶುಗರ್ ಸಕ್ಕರೆ ಕಾರ್ಖಾನೆ ಕುರಿತು ಮಾತನಾಡಿ, "ಈ ಸಂಬಂಧ ಸಿಎಂ ಜೊತೆ ಮಾತನಾಡಲಾಗಿದೆ. ಖಾಸಗಿಯವರಿಗೆ ಕೊಡುವುದು ಬೇಡ ಎಂದು ಸಿಎಂ ಬಳಿ ಮನವಿ ಮಾಡಿದ್ದೆ. ಅಂತೆಯೇ ಖಾಸಗಿಗೆ ಕೊಡುವ ನಿರ್ಧಾರ ಕೈ ಬಿಡಲಾಗಿದೆ. ಸರ್ಕಾರವೇ ನಡೆಸಬೇಕಾ ಎನ್ನುವುದನ್ನು ಸಿಎಂ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಿದ್ದಾರೆ" ಎಂದು ತಿಳಿಸಿದರು.

English summary
COVID 19 testing lab has started in adi chunchanagiri medical college in mandya
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X