ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ರಾಜಕಾರಣ : ಎಚ್ಡಿಕೆ ತಂತ್ರಕ್ಕೆ, ಸಿ.ಪಿ.ಯೋಗೇಶ್ವರ ಪ್ರತಿತಂತ್ರ!

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ತಂತ್ರಕ್ಕೆ ಸಿ ಪಿ ಯೋಗೇಶ್ವರ ಪ್ರತಿತಂತ್ರ | Oneindia Kannada

ಮಂಡ್ಯ, ನವೆಂಬರ್ 21 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ರಾಜಕೀಯ ರಂಗೇರುತ್ತಿದೆ. ಕೆ.ಎಸ್.ನಂಜುಂಡೇಗೌಡ ಅವರಿಗೆ ಬಿಜೆಪಿ ಸೇರುವಂತೆ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರು ಆಹ್ವಾನ ನೀಡಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ತೊರೆದಿರುವ ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೆ ಸಿ.ಪಿ.ಯೋಗೇಶ್ವರ ಅವರು ಪ್ರತಿತಂತ್ರ ರೂಪಿಸಿದ್ದಾರೆ.

ರವೀಂದ್ರ ಶ್ರೀಕಂಠಯ್ಯಗೆ ಆಹ್ವಾನ ನೀಡಿದ ಎಚ್ಡಿಕೆ!ರವೀಂದ್ರ ಶ್ರೀಕಂಠಯ್ಯಗೆ ಆಹ್ವಾನ ನೀಡಿದ ಎಚ್ಡಿಕೆ!

ಶ್ರೀರಂಗಪಟ್ಟಣ ಕ್ಷೇತ್ರ ಸದ್ಯ ಜೆಡಿಎಸ್ ವಶದಲ್ಲಿದೆ. ಕ್ಷೇತ್ರದ ಶಾಸಕರು ರಮೇಶ ಬಂಡಿಸಿದ್ದೇಗೌಡ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಅಂಬರೀಶ್ ಜೆಡಿಎಸ್ ಸೇರುವ ಸುದ್ದಿಗೆ ತೆರೆ ಬಿತ್ತು! ಅಂಬರೀಶ್ ಜೆಡಿಎಸ್ ಸೇರುವ ಸುದ್ದಿಗೆ ತೆರೆ ಬಿತ್ತು!

ಎಚ್.ಡಿ.ಕುಮಾರಸ್ವಾಮಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಆಹ್ವಾನ ನೀಡಿದ ಬಳಿಕ ಸಿ.ಪಿ.ಯೋಗೇಶ್ವರ ಕೆ.ಎಸ್.ನಂಜುಂಡೇಗೌಡ ಅವರನ್ನು ಬಿಜೆಪಿಗೆ ಆಹ್ವಾನಿಸಿರುವುದು ತಾಲೂಕಿನ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯ ರಾಜಕಾರಣ : ವಿಧಾನಸಭೆ ಚುನಾವಣೆ ಬಗ್ಗೆ ರಮ್ಯಾ ಸ್ಪಷ್ಟನೆಮಂಡ್ಯ ರಾಜಕಾರಣ : ವಿಧಾನಸಭೆ ಚುನಾವಣೆ ಬಗ್ಗೆ ರಮ್ಯಾ ಸ್ಪಷ್ಟನೆ

ಈ ಬೆಳವಣಿಗೆ ಕುರಿತು ಮಾತನಾಡಿದ ಸಿ.ಪಿ.ಯೋಗೇಶ್ವರ ಅವರು, 'ಶ್ರೀರಂಗಪಟ್ಟಣ ಕ್ಷೇತ್ರದಿಂದ ಅವರಿಗೆ ಟಿಕೆಟ್ ಕೊಡುವ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.

ಯಾರು ನಂಜುಂಡೇಗೌಡ?

ಯಾರು ನಂಜುಂಡೇಗೌಡ?

ಕೆ.ಎಸ್.ನಂಜುಂಡೇಗೌಡರು ರೈತ ಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ. ಸತತ ಆರು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. 2018ರ ಚುನಾವಣೆಗೆ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದರು

ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದರು

ಕೆ.ಎಸ್.ನಂಜುಂಡೇಗೌಡರು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಎಚ್.ಡಿ.ದೇವೇಗೌಡರ ಜೊತೆಗೂ ಅವರು ಮಾತುಕತೆ ನಡೆಸಿದ್ದರು. ಆದರೆ, ಎಚ್.ಡಿ.ಕುಮಾರಸ್ವಾಮಿ ಅವರು ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸುವ ಮೂಲಕ ರಾಜಕೀಯ ದಾಳ ಉರುಳಿಸಿದ್ದಾರೆ.

ಬಿಜೆಪಿಗೆ ಆಹ್ವಾನಿಸಿದ ಸಿ.ಪಿ.ಯೋಗೇಶ್ವರ

ಬಿಜೆಪಿಗೆ ಆಹ್ವಾನಿಸಿದ ಸಿ.ಪಿ.ಯೋಗೇಶ್ವರ

ಬಿಜೆಪಿ ಸೇರಿರುವ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರಿಗೆ ಅಕ್ಕಪಕ್ಕದ ಜಿಲ್ಲೆಗಳ ಬಗ್ಗೆಯೂ ಗಮನಹರಿಸುವಂತೆ ಸೂಚನೆ ನೀಡಲಾಗಿದೆ. ಆದ್ದರಿಂದ, ಅವರು ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದಾಗ, ಕೆ.ಎಸ್.ನಂಜುಂಡೇಗೌಡ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ರಮೇಶ ಬಂಡಿಸಿದ್ದೇಗೌಡ ನಡೆ ಏನು?

ರಮೇಶ ಬಂಡಿಸಿದ್ದೇಗೌಡ ನಡೆ ಏನು?

ಶ್ರೀರಂಗಪಟ್ಟಣ ಕ್ಷೇತ್ರದ ಸದ್ಯದ ಶಾಸಕರು ರಮೇಶ ಬಂಡಿಸಿದ್ದೇಗೌಡ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ರವೀಂದ್ರ ಶ್ರೀಕಂಠಯ್ಯ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ. ರಮೇಶ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ.

ನಿರ್ಧಾರ ಪ್ರಕಟಿಸಿಲ್ಲ

ನಿರ್ಧಾರ ಪ್ರಕಟಿಸಿಲ್ಲ

'ಕೆ.ಎಸ್.ನಂಜುಂಡೇಗೌಡ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದೇವೆ. ಅವರು ಬೆಂಬಲಿಗರ ಜೊತೆ ಮಾತುಕತೆ ನಡೆಸಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ' ಎಂದು ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.

English summary
Channapatna MLA and BJP leader C.P.Yogeshwar invited Rajya Raitha Sangha leader K.S. Nanjunde Gowda to join BJP. K.S. Nanjunde Gowda may get Karnataka assembly elections 2018 ticket form Srirangapatna constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X