ಶಾಸಕ ಸಿಟಿ ರವಿ ಕಾರು ಅಪಘಾತ ಪ್ರಕರಣ, ಮೃತರ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ

ಮಂಡ್ಯ, ಫೆಬ್ರವರಿ 27: ಶಾಸಕ ಸಿಟಿ ರವಿ ಇದ್ದ ಕಾರು ಅಪಘಾತಕ್ಕೀಡಾಗಿ ಒಬ್ಬರು ಯುವಕರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ ಪರಿಹಾರ ನೀಡಿದ್ದಾರೆ.

ಮಂಡ್ಯದ ಎಎಸ್‌ಪಿ ಎ.ಆರ್.ಬಲರಾಮೇಗೌಡರ ಮನೆಯಲ್ಲಿ ಮೃತರ ಕುಟುಂಬ ಸದಸ್ಯರ ಜತೆ ನಡೆದ ಮಾತುಕತೆ ಬಳಿಕ ತಲಾ 3 ಲಕ್ಷ ರೂ.ಗಳನ್ನು ಶಾಸಕ ರವಿ ನೀಡಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ರಸ್ತೆಯಲ್ಲಿ ನಿಂತಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾದ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿತ್ತು.

CT Ravi visited the demise family of youth who dies in accident

ಪ್ರಕರಣದಲ್ಲಿ ಕನಕಪುರ ತಾಲೂಕಿನ ಸೂರನಹಳ್ಳಿಯ ಶಶಿಕುಮಾರ್, ಸುನಿಲ್ ಗೌಡ ಮೃತಪಟ್ಟಿದ್ದರು. ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪದ ಊರ್ಕೇನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ.

ಪ್ರವಾಸಕ್ಕೆಂದು ತೆರಳಿದ್ದ ಸುಮಾರು 12 ಯುವಕರು, ಊರ್ಕೇನಹಳ್ಳಿ ಬಳಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಮೂವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರು ಮೃತರಾದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದರು.

ಪ್ರಕರಣ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ನೆರವು ಮಾತ್ರ, ಅಪಘಾತ ಪ್ರಕರಣ ಕೋರ್ಟ್‌ನಲ್ಲಿ ಮುಂದುವರಿಯಲಿದೆ ಎಂದ ಶಾಸಕ ಸಿಟಿ ರವಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+