ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ ಮಂಡ್ಯ ರಾಜಕೀಯ!
ಮಂಡ್ಯ, ಮಾರ್ಚ್ 17 : ನಿಖಿಲ್ ಎಲ್ಲಿದ್ದೀಯಪ್ಪಾ ವಿಡಿಯೋ, ಸುಮಲತಾ ಅಂಬರೀಶ್ ಜನರ ಭೇಟಿ, ನಿಖಿಲ್ ಕುಮಾರಸ್ವಾಮಿ ಪ್ರಚಾರ, ಬಿಜೆಪಿಯ ಮೌನ ದಿನದಿಂದ ದಿನಕ್ಕೆ ಮಂಡ್ಯದ ರಾಜಕಾರಣ ಕುತೂಹಲಕ್ಕೆ ಕಾರಣವಾಗಿದೆ.
ಏಪ್ರಿಲ್ 18ರಂದು ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಮತದಾನ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿ ಯಾರು?, ಸುಮಲತಾ ಅಂಬರೀಶ್ ಕಣಕ್ಕಿಳಿಯಲಿದ್ದಾರೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ.
ನಿಖಿಲ್ ಕುಮಾರಸ್ವಾಮಿ ಅವರು ಭರ್ಜರಿಯಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಜಿ.ಮಾದೇಗೌಡ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಅಥವ ಪಕ್ಷ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ವಿವಿಧ ಕಾರಣಗಳಿಗಾಗಿ ಮಂಡ್ಯದ ಚುನಾವಣೆ ಈ ಬಾರಿ ರಾಜ್ಯದ ಗಮನ ಸೆಳೆದಿದೆ....

ನಿಖಿಲ್ ಕುಮಾರಸ್ವಾಮಿ ಪ್ರಚಾರ
ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಸಚಿವರು, ನೂರಾರು ಕಾರ್ಯಕರ್ತರು ಅವರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಯ ಹೊರತಾಗಿಯೂ ಅವರಿಗೆ ಜನರ ಬೆಂಬಲ ಸಿಗುತ್ತಿದೆ. ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಗನ ಜೊತೆ ಪ್ರಚಾರದಲ್ಲಿ ತೊಡಗಿದ್ದಾರೆ.

ಹಲವು ನಾಯಕರ ಭೇಟಿ
ನಿಖಿಲ್ ಕುಮಾರಸ್ವಾಮಿ ಅವರು ಜಿ.ಮಾದೇವೇಗೌಡ, ಹಿರಿಯ ನಾಯಕ ಕೆ.ಆರ್.ಪೇಟೆ ಕೃಷ್ಣ ಅವರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಹಲವು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.

ಮಾ.18ರಂದು ನಿರ್ಧಾರ ಪ್ರಕಟ
ಸುಮಲತಾ ಅಂಬರೀಶ್ ಅವರು ಮಾ.18ರ ಸೋಮವಾರ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಆದರೆ, ಅವರು ಮಂಡ್ಯ, ಶ್ರೀರಂಗಪಟ್ಟಣ ಸೇರಿದಂತೆ ವಿವಿಧ ತಾಲೂಕುಗಳನ್ನು ಜನರನ್ನು ಭೇಟಿಯಾಗಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಎಸ್.ಎಂ.ಕೃಷ್ಣ, ಯಡಿಯೂರಪ್ಪ ಭೇಟಿ
ಮತ್ತೊಂದು ಕಡೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸುಮಲತಾ ಅವರು ಕೃಷ್ಣ ಅವರನ್ನು ಭೇಟಿಯಾದ ಬಳಿಕ ಯಡಿಯೂರಪ್ಪ ಭೇಟಿಯಾಗಿದ್ದು, ಮಂಡ್ಯದ ಬಿಜೆಪಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ.












Click it and Unblock the Notifications