Get Updates
Get notified of breaking news, exclusive insights, and must-see stories!

ಮಂಡ್ಯ: ಸಿದ್ದಗಂಗಾಶ್ರೀ ಉದ್ಯಾನವನದಲ್ಲಿ ದಾಸೋಹ ಹುಣ್ಣಿಮೆ ಆಚರಣೆ

ಮಂಡ್ಯ, ಅಕ್ಟೋಬರ್‌ 18: ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಪರಮಪೂಜ್ಯ ಡಾ.ಶ್ರೀಶ್ರೀ ಶಿವಕುಮಾರಸ್ವಾಮೀಜಿಯವರ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್ ಹಾಗೂ ಸಿದ್ದಗಂಗಾಶ್ರೀ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ದಾಸೋಹಹುಣ್ಣಿಮೆ' ಯನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಅವರು, ಹನ್ನೆರಡನೇ ಶತಮಾನದಲ್ಲೇ ಮಹಿಳೆ ಮತ್ತು ಪುರುಷರು ಎಂಬ ಭೇದ ಭಾವ ಬದಿಗೊತ್ತಿ ಪ್ರತಿಯೊಬ್ಬರು ಕಾಯಕ ಮಾಡಿ, ಜೀವನ ನಡೆಸಬೇಕು ಎನ್ನುವ ಬಸವಣ್ಣನವರ ಕಾಯಕ ಮತ್ತು ದಾಸೋಹದ ಪರಿಕಲ್ಪನೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.

Dasoha Hunnime Celebration At Mandya Siddaganga Shree Park

900 ವರ್ಷಗಳ ಹಿಂದೆ ತಾಂಡವವಾಡುತ್ತಿದ್ದ ಸಾಮಾಜಿಕ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಬಸವಣ್ಣನವರ ಸಾರಥ್ಯದಲ್ಲಿ ಶರಣರು ಮಾಡಿದ ಸಾಮಾಜಿಕ ಕ್ರಾಂತಿ ಅದ್ಬುತ. ಪ್ರತಿಯೊಬ್ಬರು ತಾವು ದುಡಿದು ಇತರರಿಗೂ ನೀಡಬೇಕು ಎಂಬುದು ಬಸವಣ್ಣನವರ ಕನಸಾಗಿತ್ತು. ದುಡಿದು ತಿನ್ನುವ ಕಾಯಕ ಹಾಗೂ ಹಂಚಿ ಬದುಕುವ ದಾಸೋಹದ ಪರಿಕಲ್ಪನೆಯ ಕುರಿತು ಜಾಗೃತಿ ಮೂಡಿಸಿದ ಶರಣರ ಆದರ್ಶ ಅನುಕರಣೀಯ ಎಂದರು.

ಪ್ರತಿತಿಂಗಳ ಹುಣ್ಣಿಮೆಯಂದು ಉದ್ಯಾನವನದಲ್ಲಿ ದಾಸೋಹ ಹುಣ್ಣಿಮೆ' ಮೂಲಕ ಶರಣರ ಆಶಯಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಸಿದ್ದಗಂಗಾಶ್ರೀಗಳ ಆಶಯದಂತೆ ಹಸಿದು ಬಂದವರಿಗೆ ಅನ್ನ ನೀಡುವುದೇ ಧರ್ಮ ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರೂ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ನಗರಸಭೆ ಸದಸ್ಯ ಸುಮನ್ ಕ್ರಿಸ್ಟೋಫರ್ ಮಾತನಾಡಿ, ಅನ್ನ, ಅರಿವು, ಆಸರೆ ಪ್ರತಿಯೊಬ್ಬರ ಹಕ್ಕು ಎಂಬುದನ್ನು ವಿಶ್ವಕ್ಕೆ ಸಾರಿ ತಮ್ಮ ೧೧೧ವರ್ಷಗಳ ಸುದೀರ್ಘ ಕಾಲ ಬಡಮಕ್ಕಳ ಸೇವೆಯನ್ನು ಮಾಡಿದ ಮಹಾನ್ ಸಂತ ಸಿದ್ದಗಂಗಾಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕೆಂದು ಆಗ್ರಹಿಸಿದರು.

ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ ಮಾತನಾಡಿ, ಲಿಂಗಾಯತ ಧರ್ಮದ ಸಂಸ್ಥಾಪಕರಾದ ಬಸವಣ್ಣನವರು 12ನೇ ಶತಮಾನದಲ್ಲೆ ಸಾಮಾಜಿಕ ಅಸಮಾನತೆ, ಜಾತೀಯತೆ ಹೋಗಲಾಡಿಸಲು ಮುಂದಾದ ಒಬ್ಬ ಮಹಾನ್ ಮಾನವತಾವಾದಿ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಸವಣ್ಣ ಬೋಧಿಸಿದ ಸಮಾನತೆಯ ಅಂಶಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಎಲ್ಲರೂ ಸಮಾನರು ಎಂದು ಬೋಧಿಸಿದ ಬಸವಣ್ಣನವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದರು.

ನಗರಸಭೆ ಸದಸ್ಯೆ ಕೆ.ವಿದ್ಯಾಮಂಜುನಾಥ್ ಮಾತನಾಡಿ, ಪ್ರತಿ ತಿಂಗಳ ಹುಣ್ಣಿಮೆಯ ದಿನದಂದು ನೂರಾರು ಮಂದಿಗೆ ದಾಸೋಹ' ಸೇವೆ ಮಾಡುವ ಮೂಲಕ ಕೋಟ್ಯಾಂತರ ಭಕ್ತರ ಭಾವಕೋಶದಲ್ಲಿ ನೆಲೆಯಾಗಿರುವ ಮಹಾದಾಸೋಹಿ ಸಿದ್ದಗಂಗಾಶ್ರೀಗಳ ಸ್ಮರಣೆ ಮಾಡಿಕೊಳ್ಳುತ್ತಿರುವುದು ನಮ್ಮೆಲ್ಲರ ಪುಣ್ಯದ ಕೆಲಸವಾಗಿದೆ. ಇಂತಹ ಕಾಯಕದಲ್ಲಿ ನಿರತವಾಗಿರುವ ಕಾಯಕಯೋಗಿ ಫೌಂಡೇಶನ್ ಸಂಸ್ಥೆಯ ಸಮಾಜಮುಖಿ ಕೆಲಸ ಶ್ಲಾಘನೀಯ ಎಂದರು. ಈ ವೇಳೆ ಸಿದ್ದಗಂಗಾಶ್ರೀ ಸೇವಾ ಸಮಿತಿ ಅಧ್ಯಕ್ಷ ಎಂ.ಆರ್.ಮಂಜುನಾಥ್, ಕಾಂಗ್ರೆಸ್ ಮುಖಂಡ ಸೋಮಶೇಖರ್, ಸಮಾಜ ಸೇವಕ ರವಿತೇಜ್, ಬಿಜೆಪಿ ಮುಖಂಡ ಜಗದೀಶ್, ಆಟೋ ರಾಜಣ್ಣ, ಬೆಳ್ಳಪ್ಪ, ಬಸವಲಿಂಗು ಅವ್ವೇರಹಳ್ಳಿ, ತಬ್ರೇಸ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+