Cauvery Aarti: ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿ ಮಾದರಿಯಲ್ಲಿ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ಸಲ್ಲಿಸುವ ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮೊದಲಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಈ ಆರತಿ ಕಾರ್ಯಕ್ರಮವನ್ನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ನೆರವೇರಿಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಇಂದು ಈ ಕಾರ್ಯಕ್ರಮ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಮಳೆಗಾಲದ ಆರಂಭದಲ್ಲೇ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕಾವೇರಿ ಕೂಡ ಉಕ್ಕಿ ಹರಿಯುತ್ತಿದ್ದಾಳೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಹಾಗಾಗಿ ಡ್ಯಾಂಗಳಿಂದ ನೀರು ಹೊರಬಿಡಲಾಗುತ್ತಿದೆ. ಇದೇ ಹೊತ್ತಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಸಭೆ ನಡೆಸಿದ್ದೇನೆ. ಇದು ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ. ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನುಕೂಲವಾಗಲಿದ್ದು ಎಲ್ಲರನ್ನೂ ಸಮಾನವಾಗಿ ಪೊರೆಯುವ ಕಾವೇರಿ ಮಾತೆಗೆ ನಾವೆಲ್ಲರೂ ಪ್ರಾರ್ಥನೆ ಸಲ್ಲಿಸಲಿದ್ದೇವೆ. ಪ್ರಯತ್ನ ವಿಫಲವಾಗಬಹುದು. ಆದರೆ, ಪ್ರಾರ್ಥನೆ ವಿಫಲವಾಗುವುದಿಲ್ಲ. ಮನಸ್ಸಿದ್ದಲ್ಲಿ ಮಾರ್ಗವಿದೆ. ಭಕ್ತಿ ಇದ್ದಲ್ಲಿ ಭಗವಂತನಿರುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆ ಇಲ್ಲ
ರೈತರಿಗಿದ್ದ ಎಲ್ಲ ಗೊಂದಲಗಳನ್ನ ಬಗೆಹರಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಸ್ಥಳೀಯ ಪ್ರತಿನಿಧಿಗಳೂ ನಮಗೆ ಬೆಂಬಲವಾಗಿ ನಿಂತಿದ್ದಾರೆ. ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆಯಾಗುವುದಿಲ್ಲ. ವಿವಿಧ ಸಂಸ್ಕೃತಿಗಳ ಅನಾವರಣ, ಸಾವಿರಾರು ಉದ್ಯೋಗಗಳ ಸೃಷ್ಟಿ, ಪ್ರವಾಸೋದ್ಯಮದ ಅಭಿವೃದ್ಧಿ, ವ್ಯಾಪಾರ-ವಹಿವಾಟುಗಳ ವೃದ್ಧಿಯಾಗಲಿದೆ. ಕಾವೇರಿ ಮಾತೆಗೆ ನಾವೆಲ್ಲರೂ ಒಗ್ಗಟ್ಟಾಗಿ ದಸರಾ ಸಂದರ್ಭದಲ್ಲಿ ವಿಜೃಂಭಣೆಯ ಆರತಿಯನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ನಡೆದ ಕಾವೇರಿ ಆರತಿಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ವಿವಿಧ ಇಲಾಖೆಗಳ ಸಮನ್ವಯತೆ ಹಾಗೂ ಅನುದಾನದೊಂದಿಗೆ ಕೆಆರ್‌ಎಸ್‌ನಲ್ಲಿ ವೈಭವದ ಆರತಿಯನ್ನು ಮಾಡಲಿದ್ದೇವೆ. ಇದಕ್ಕಾಗಿ ಅಧ್ಯಯನ ತಂಡವೊಂದು ಉತ್ತರ ಭಾರತದ ಪ್ರವಾಸ ಮಾಡಿ ಗಂಗಾ ಆರತಿಯನ್ನು ವೀಕ್ಷಿಸಿ ನಮಗೆ ವರದಿಯನ್ನೂ ನೀಡಿದ್ದಾರೆ. ಆ ವರದಿಯನ್ವಯ ಕಾವೇರಿ ಆರತಿಯ ಕುರಿತಂತೆ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications