• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ನೀಡುತ್ತಿದ್ದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸ್ಥಗಿತ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಅಕ್ಟೋಬರ್ 1: ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಇಚ್ಛಿಸುವ ಹಿಂದುಳಿದ ವರ್ಗಗಳ 100 ವಿದ್ಯಾರ್ಥಿಗಳಿಗೆ ವಾರ್ಷಿಕ ಕನಿಷ್ಠ 10 ಲಕ್ಷ ರೂಗಳಂತೆ ನೀಡಲಾಗುತ್ತಿದ್ದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನವನ್ನು ಅನುದಾನದ ಕೊರತೆಯಿಂದ ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ, ಪಿಹೆಚ್‍ಡಿ, ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಣಕಾಸಿನ ಕೊರತೆಯಿಂದ ವಿದೇಶಿ ವ್ಯಾಸಂಗಕ್ಕೆ ಆನ್‌ಲೈನ್‌ಲ್ಲಿ ಅರ್ಜಿಯನ್ನು ಆಹ್ವಾನಿಸಿಲ್ಲ. ಇದು ವಿದೇಶದಲ್ಲಿ ವ್ಯಾಸಂಗ ಮಾಡುವ ಕನಸು ಹೊತ್ತಿದ್ದ ನೂರಾರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಿರಾಸೆ ಉಂಟುಮಾಡಿದೆ.

26 ವರ್ಷಗಳಲ್ಲೇ ಹೊಸ ದಾಖಲೆ: ದಕ್ಷಿಣ ಭಾರತದ ನಾಯಕನಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ!26 ವರ್ಷಗಳಲ್ಲೇ ಹೊಸ ದಾಖಲೆ: ದಕ್ಷಿಣ ಭಾರತದ ನಾಯಕನಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ!

2015-16ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯವನ್ನು ಜಾರಿಗೊಳಿಸಿದ್ದರು. ಈ ಸೌಲಭ್ಯ ಪಡೆಯಬೇಕಾದರೆ ಪಿಹೆಚ್‍ಡಿ, ಸಂಶೋಧನೆ ಮಾಡಲಿಚ್ಚಿಸುವ 27 ವರ್ಷದೊಳಗಿನ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕ ಪಡೆದಿರಬೇಕು, ಸ್ನಾತಕೋತ್ತರ ಪದವಿ ಮಾಡಬಯಸುವ 25 ವರ್ಷದೊಳಗಿನ ವಿದ್ಯಾರ್ಥಿಗಳು ಪದವಿಯಲ್ಲಿ ಶೇ.70 ಅಂಕ ಪಡೆದಿರಬೇಕಿತ್ತು. ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ವಾರ್ಷಿಕ 6 ಲಕ್ಷ ರು. ಮೀರಿರಬಾರದಿತ್ತು.

 ಅನುದಾನ ಒದಗಿಸಿದ ನಂತರ ಕ್ರಮ

ಅನುದಾನ ಒದಗಿಸಿದ ನಂತರ ಕ್ರಮ

"2018-19ನೇ ಸಾಲಿನಲ್ಲಿ ರಾಜ್ಯದಲ್ಲಿ 64 ಮಂದಿ, 2019-20ನೇ ಸಾಲಿನಲ್ಲಿ 65 ಮಂದಿ ವಿದೇಶಿ ವಿದ್ಯಾರ್ಥಿ ವ್ಯಾಸಂಗ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ. 2021-22ನೇ ಸಾಲಿನಲ್ಲಿ ಅನುದಾನದ ಕೊರತೆ ಎದುರಾಗಿರುವುದರಿಂದ ವಿದೇಶಿ ವ್ಯಾಸಂಗಕ್ಕೆ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿರುವುದಿಲ್ಲ. 2022-23ನೇ ಸಾಲಿನಲ್ಲಿ ಸದರಿ ಯೋಜನೆಯನನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ನಿರ್ದೇಶಿಸಲಾಗಿದೆ. ಆದರೂ 10 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಅನುದಾನ ಒದಗಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು," ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 ವಿದ್ಯಾರ್ಥಿಗಳ ಕನಸು ನುಚ್ಚುನೂರು

ವಿದ್ಯಾರ್ಥಿಗಳ ಕನಸು ನುಚ್ಚುನೂರು

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆಸರೆಯಾಗಿತ್ತು. ವಿದೇಶಿ ವ್ಯಾಸಂಗ ಉಳ್ಳವರ ಶಿಕ್ಷಣವಾಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗದಲ್ಲಿದ್ದ ಬಡವಿದ್ಯಾರ್ಥಿಗಳು ಈ ಸೌಲಭ್ಯದ ಮೂಲಕ ವಿದೇಶಿ ವ್ಯಾಸಂಗ ಮಾಡುವ ಭರವಸೆ ಹೊಂದಿದ್ದರು. ಯೋಜನೆ ಸ್ಥಗಿತದಿಂದಾಗಿ ಆ ವಿದ್ಯಾರ್ಥಿಗಳ ವಿದೇಶದಲ್ಲಿ ವ್ಯಾಸಂಗ ಮಾಡುವ ಕನಸು ನುಚ್ಚುನೂರಾಗಿದೆ. ಇದು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಗೂ ಕಾರಣವಾಗಿದೆ.

 ಅರಿವು ಯೋಜನೆ

ಅರಿವು ಯೋಜನೆ

ವಿದೇಶಿ ವಿದ್ಯಾರ್ಥಿ ವೇತನ ಮಾದರಿಯಲ್ಲೇ ಅರಿವು ಯೋಜನೆಯನ್ನು ಮೂರು ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಮೆಡಿಕಲ್ ವ್ಯಾಸಂಗಕ್ಕೆ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಶುಲ್ಕ ಭರಿಸಲಾಗುತ್ತಿತ್ತು. ಯೋಜನೆಯನ್ನು ಮೂರು ವರ್ಷ ಸ್ಥಗಿತಗೊಳಿಸಿ ಈಗ ಮತ್ತೆ ಪುನಾರಂಭಿಸಿದ್ದರೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅದು ತಿಳಿದೇ ಇಲ್ಲ. ಹೀಗಾಗಿ ಸೌಲಭ್ಯ ಪಡೆಯಲು ಯಾರೂ ಮುಂದಾಗುತ್ತಿಲ್ಲ ಎಂದು ತಿಳಿದುಬಂದಿದೆ.

 ಹಣಕಾಸಿನ ಕೊರತೆ ಕಾರಣವಾಗಬಾರದು

ಹಣಕಾಸಿನ ಕೊರತೆ ಕಾರಣವಾಗಬಾರದು

"ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು. ಹಣಕಾಸಿನ ಕೊರತೆ ಮುಂದಿಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಕೊಳ್ಳಿ ಇಡುವುದು ಸರಿಯಲ್ಲ. ವಿದೇಶಿ ವ್ಯಾಸಂಗ ಮಾಡುವ ಕನಸು ಹೊತ್ತಿರುವ ಹಿಂದುಳಿದವರ್ಗಗಳ ನೂರಾರು ವಿದ್ಯಾರ್ಥಿಗಳಿಗೆ ಈ ಯೋಜನೆ ಆಸರೆಯಾಗಿದೆ. ಅದನ್ನು ಸ್ಥಗಿತಗೊಳಿಸದೆ ಅಗತ್ಯಅನುದಾನ ಕೊಟ್ಟು ಮುಂದುವರೆಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು," ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಒತ್ತಾಯಿಸಿದ್ದಾರೆ.

English summary
D. Devaraj Urs Foreign Study Scholarship has been temporarily suspended by the Government of Karnataka due to lack of funds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X