• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಡಿ ವಿಚಾರಣೆಗೆ ಇಂದು ಹಾಜರಾಗಲು ಡಿ.ಕೆ. ಶಿವಕುಮಾರ್ ನಿರ್ಧಾರ

|
Google Oneindia Kannada News

ಮಂಡ್ಯ, ಅ. 07: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಭಾರತ ಐಕ್ಯತಾ ಯಾತ್ರೆಯನ್ನು ಬಿಟ್ಟು ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷದ 'ಭಾರತ್ ಜೋಡೋ ಯಾತ್ರೆ'ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಒಬ್ಬರಾಗಿದ್ದಾರೆ.

Breaking: ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಮತ್ತೆ ಡಿಕೆ ಸಹೋದರರಿಗೆ ಸಮನ್ಸ್Breaking: ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಮತ್ತೆ ಡಿಕೆ ಸಹೋದರರಿಗೆ ಸಮನ್ಸ್

ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿಕೆ ಸುರೇಶ್ ಅವರು ಏಜೆನ್ಸಿಯ ಮುಂದೆ ಹಾಜರಾಗಲು ಮುಂದಿನ ದಿನಾಂಕ ನೀಡಬೇಕು ಎಂಬ ಮನವಿಯನ್ನು ಇಡಿ ತಿರಸ್ಕರಿಸಿದ ನಂತರ ಇಂದು ಇಬ್ಬರು ವಿಚಾರಣೆಗೆ ಹಾಜರಾಗಬೇಕಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, "ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ ಐಕ್ಯತಾ ಯಾತ್ರೆಯ ಸಮಯದಲ್ಲಿ ನಾನು ಹೊಂದಿರುವ ಜವಾಬ್ದಾರಿಗಳನ್ನು ಉಲ್ಲೇಖಿಸಿ ನಾನು ಇಡಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ್ದೆ. ರಾಹುಲ್ ಗಾಂಧಿ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಇರಬೇಕೆಂದು ಬಯಸಿದ್ದೆ. ಆದರೆ ಕೇಂದ್ರ ಸರ್ಕಾರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಾನು ಕಾನೂನು ಪಾಲಿಸುವ ಪ್ರಜೆ. ಯಾತ್ರೆ ನಡೆಯುತ್ತಿರುವ ಸಮಯದಲ್ಲಿ ಇಡಿ ಅಧಿಕಾರಿಗಳು ನನ್ನನ್ನು ಏಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.

"ಕುಲದೀಪ್ ಸಿಂಗ್ ನಮ್ಮನ್ನು ಕರೆಸಿದ ಅಧಿಕಾರಿ. ಅವರು ಯಂಗ್ ಇಂಡಿಯಾ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿ. ಅಲ್ಲದೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರನ್ನು ಕರೆಸಿದ್ದರು" ಎಂದು ಮಾಹಿತಿ ನೀಡಿದ್ದಾರೆ.

DK Shivakumar to appear before ED on oct 7 Friday

"ನಾನು ನನ್ನ ಪಕ್ಷದ ನಾಯಕರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದೇನೆ. ಅವರು ನನ್ನ ಸಹೋದರ ಡಿಕೆ ಸುರೇಶ್ ಜೊತೆಗೆ ಇಡಿ ಮುಂದೆ ಹಾಜರಾಗಲು ನನಗೆ ಸಲಹೆ ನೀಡಿದ್ದಾರೆ" ಎಂದು ಹೇಳಿದ್ದಾರೆ. ಜೊತೆಗೆ ಸಮಯಾವಕಾಶ ಕೇಳಿದ ಮನವಿಗಳನ್ನು ಸಾಮಾನ್ಯವಾಗಿ ಅಧಿಕಾರಿಗಳು ಗೌರವಿಸುತ್ತಾರೆ," ಎಂದೂ ಸೇರಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, "ಭಾರತ್ ಜೋಡೋ ಯಾತ್ರೆಯ ಯಶಸ್ಸಿನಿಂದ ಬಿಜೆಪಿ ಜರ್ಜರಿತವಾಗಿದೆ ಎಂಬುದನ್ನು ಇಡಿ ಕ್ರಮ ತೋರಿಸುತ್ತದೆ. ರಾಜ್ಯದ ಹಿರಿಯ ನಾಯಕರಾದ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದರೂ ಭಾರತ್ ಜೋಡೋ ಯಾತ್ರೆ ನಿಲ್ಲುವುದಿಲ್ಲ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
KPCC president DK Shivakumar have to appear before the Enforcement Directorate (ED) in connection with the ‘National Herald’ case Friday. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X