Get Updates
Get notified of breaking news, exclusive insights, and must-see stories!

ಸಿಎಂ ಸಿದ್ದರಾಮಯ್ಯಗೆ ರಕ್ತರಲ್ಲಿ ಪತ್ರ ಬರೆದ ಅಭಿಮಾನಿ: ಅದರಲ್ಲೇನಿದೆ ಗೊತ್ತಾ?

ಮಂಡ್ಯ, ಸೆಪ್ಟೆಂಬರ್‌, 29: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜನಾಮೆ ನೀಡಬೇಕೆಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಸಿದ್ದು ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.

ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಲೇ ಇದ್ದಾರೆ. ಇದರ ನಡುವೆಯೆ ಅಭಿಮಾನಿಯೊಬ್ಬರು ಸಚಿನ್​ ಎಂಬುವವರಯ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬಾರದು ಎಂದು ರಕ್ತದಲ್ಲಿ ಪತ್ರ ಪಡೆದ ಘಟನೆ ಮಂಡ್ಯ ಜಿಲ್ಲೆಯ ಮೊತ್ತಹಳ್ಳಿಯಲ್ಲಿ ನಡೆದಿದೆ. ಇನ್ನೂ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Don t resign for CM Post A fan who wrote letter to Siddaramaiah at blood

ಅರಸು ಬಳಿಕ ಅತಿಹೆಚ್ಚು ಸರ್ಕಾರಿ ಯೋಜನೆಗಳನ್ನು ನೀಡಿದ್ದೀರಿ. ಬಡಜನರಿಗೆ ಅತೀ ಹೆಚ್ಚು ಯೋಜನೆ ನೀಡಿದ ಸಿಎಂ ನೀವು. ಬಡವರ, ದೀನ‌ ದಲಿತರ ಪರವಾಗಿರುವಂತಹ ಸಿಎಂ ನೀವು. ಆದ್ದರಿಂದ ರಾಜೀನಾಮೆ ನೀಡಬಾರದು ಎಂದು ರಕ್ತದಲ್ಲಿ ಬರೆದಿದ್ದಾರೆ. ಇನ್ನು ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಎಫ್‌ಐಆರ್‌ ದಾಖಲು: ಇನ್ನು ಪ್ರಕರಣದಲ್ಲಿ ಎ1 ಸಿದ್ದರಾಮಯ್ಯ, ಎ2 ಪತ್ನಿ ಪಾರ್ವತಿ ಸಿದ್ದರಾಮಯ್ಯ, ಎ3 ಬಾಮೈದ ಮಲ್ಲೊಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಎ4 ಆರೋಪಿಯಾಗಿದ್ದಾರೆ. ಎ5 ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಕಾಯ್ದೆಗಳ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯೂ ಎಫ್‌ಐಆರ್‌ ದಾಖಲಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ ಏನು ಹೇಳುತ್ತದೆ?: ಐಪಿಸಿ ಸೆಕ್ಷನ್ 120 ಬಿ-ಕ್ರಮಿನಲ್‌ ಪಿತೂರಿ ಆರೋಪ (ಜೀವಾವಧಿ ಶಿಕ್ಷೆ, 166-ಸರ್ಕಾರಿ ಸೇವಕನಿಂದ ಕಾನೂನು ಉಲ್ಲಂಘನೆ, 403-ಅಪ್ರಾಮಾಣಿಕವಾಗಿ ಆಸ್ತಿ ದುರ್ಬಳಕೆ, 406-ಅಪರಾಧಿಕ ನಂಬಿಕೆ ದ್ರೋಹ (3 ವರ್ಷ ಜೈಲು ಶಿಕ್ಷೆ ಅಥವಾ ದಂಡ), 420-ವಂಚನೆ (ಮೋಸದಿಂದ ಲಾಭ ಪಡೆಯುವುದು), 426-ಕಿಡಿಗೇಡಿತನಕ್ಕೆ ಶಿಕ್ಷೆ (3 ತಿಂಗಳ ಶಿಕ್ಷೆ ಅಥವಾ ದಂಡ), 465-ಪೋರ್ಜರಿ, 468 ಪೋರ್ಜರಿ ಮಾಡಿದ್ದಕ್ಕೆ ಶಿಕ್ಷೆ (5 ವರ್ಷ ಜೈಲು & ದಂಡ), 340-ಅಕ್ರಮ ಬಂಧನ, 351-ಇತರರಿಗೆ ಹಾನಿ ಮಾಡುವುದು.

ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಿಆರ್‌ಪಿಸಿ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲೋಕಾಯುಕ್ತ ಎಡಿಜಿಪಿ ಮನೀಷ್‌ಕರ್ಬೀಕರ್ ಸೂಚಿಸಿದ್ದು, ಇದರಿಂದ ಯಾವ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಬೇಕು ಎಂಬ ಗೊಂದಲಗಳು ನಿವಾರಣೆಯಾಗಿದೆ.

ನ್ಯಾಯಾಲಯದ ಆದೇಶದಂತೆ ಎಫ್‌ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಭೀಕರ್ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿದ್ದರು. ಕಾಯ್ದೆಗಳ ವಿಚಾರದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮೈಸೂರು ಲೋಕಾಯುಕ್ತ ಪೊಲೀಸರು ಯಾವ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಬೇಕು ಎಂಬ ಗೊಂದಲದಲ್ಲಿ ಸಿಲುಕಿದ್ದರು. ಇದರಿಂದ ಎಫ್‌ಐಆರ್‌ ದಾಖಲು ವಿಳಂಬವಾಗಿತ್ತು. ಈಗ ಲೋಕಾಯುಕ್ತ ಎಡಿಜಿಪಿ ಅವರೇ ಸಿಆರ್‌ಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚಿಸಿರುವುದರಿಂದ ಅದರಂತೆಯೇ ಎಫ್‌ಐಆರ್ ದಾಖಲಾಗಿದೆ.

ಮೈಸೂರು ಲೋಕಾಯುಕ್ತ ಎಸ್ಪಿ ಉಮೇಶ್ ರಾಜ್ಯ ಲೋಕಾಯುಕ್ತರಿಗೆ ಪತ್ರ ಬರೆದು, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ಅನ್ನು ಪಿಎನ್‌ಎಸ್‌ ಕಾಯ್ದೆಯಡಿ ದಾಖಲಿಸಬೇಕಾ ಅಥವಾ ಸಿಆರ್‌ಪಿಸಿ ಅಥವಾ ಐಪಿಸಿ ಸೆಕ್ಷನ್‌ನಡಿ ಎಫ್‌ಐಆರ್‌ ದಾಖಲಿಸಬೇಕಾ ಎಂಬ ಬಗ್ಗೆ ಸ್ಪಷ್ಟತೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಲೋಕಾಯುಕ್ತ ಪ್ರಧಾನ ಕಚೇರಿಯಿಂದ ಉತ್ತರ ಬಂದಿದ್ದು ಸಿಆರ್‌ಪಿಡಿ ಅಡಿ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+