ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಲೋಕಸಭೆ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಅಂತಿಮ

|
Google Oneindia Kannada News

ಮಂಡ್ಯ, ಅಕ್ಟೋಬರ್ 11 : ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಅಂತಿಮವಾಗಿದೆ. ನವೆಂಬರ್ 3ರಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ನ.6ರಂದು ಫಲಿತಾಂಶ ಪ್ರಕಟವಾಗಲಿದೆ.

ಡಾ.ಸಿದ್ದರಾಮಯ್ಯ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಸಮ್ಮುಖದಲ್ಲಿ ಡಾ.ಸಿದ್ದರಾಮಯ್ಯ ಅವರು ಗುರುವಾರ ಪಕ್ಷಕ್ಕೆ ಸೇರ್ಪಡೆಗೊಂಡರು.

ನಿಖಿಲ್, ಪ್ರಜ್ವಲ್ ಚುನಾವಣೆಗೆ ಸ್ಪರ್ಧೆ : ದೇವೇಗೌಡರು ಹೇಳಿದ್ದೇನು?ನಿಖಿಲ್, ಪ್ರಜ್ವಲ್ ಚುನಾವಣೆಗೆ ಸ್ಪರ್ಧೆ : ದೇವೇಗೌಡರು ಹೇಳಿದ್ದೇನು?

ಶಿಕಾರಿಪುರದಲ್ಲಿ ಇಂದು ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಮಂಡ್ಯದಿಂದ ಡಾ.ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ. ರಾಮನಗರ ಕ್ಷೇತ್ರಕ್ಕೂ ಶೀಘ್ರವೇ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ' ಎಂದು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಅಭ್ಯರ್ಥಿ ಆಯ್ಕೆ ಬಗ್ಗೆ ಗೌಡ್ರ ಗೊಂದಲಶಿವಮೊಗ್ಗ ಲೋಕಸಭಾ ಕ್ಷೇತ್ರ : ಅಭ್ಯರ್ಥಿ ಆಯ್ಕೆ ಬಗ್ಗೆ ಗೌಡ್ರ ಗೊಂದಲ

ಮಂಡ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷದ ಒಮ್ಮತ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. 'ಮಂಡ್ಯದವರೇ ಅಭ್ಯರ್ಥಿಯಾಗಲಿದ್ದಾರೆ' ಎಂದು ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಸಿದ್ದರಾಮಯ್ಯ ಹೆಸರು ಘೋಷಣೆ ಮಾಡುತ್ತಿದ್ದಂತೆ ಮಂಡ್ಯದಲ್ಲಿ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ.

ಉಪಚುನಾವಣೆ : ಜಮಖಂಡಿ ಟಿಕೆಟ್ ಘೋಷಣೆ, ಬಿಜೆಪಿಗೆ ಬಂಡಾಯದ ತಲೆನೋವುಉಪಚುನಾವಣೆ : ಜಮಖಂಡಿ ಟಿಕೆಟ್ ಘೋಷಣೆ, ಬಿಜೆಪಿಗೆ ಬಂಡಾಯದ ತಲೆನೋವು

ಯಾರು ಸಿದ್ದರಾಮಯ್ಯ?

ಯಾರು ಸಿದ್ದರಾಮಯ್ಯ?

ಡಾ.ಸಿದ್ದರಾಮಯ್ಯ ಬಿಜೆಪಿಯ ಮಾಜಿ ಶಾಸಕ ದೊಡ್ಡಬೋರೇಗೌಡ ಅವರ ಪುತ್ರ. ಹೆಚ್ಚುವರಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಕೆಲಸ ಮಾಡಿ ಜುಲೈನಲ್ಲಿ ನಿವೃತ್ತಿ ಹೊಂದಿದ್ದರು. ಕೆಇಆರ್‌ಸಿ ಕಾರ್ಯದರ್ಶಿಯಾಗಿಯೂ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ನಿವೃತ್ತಿ ಬಳಿಕ ರಾಜಕೀಯಕ್ಕೆ ಧುಮುಕಿದ್ದಾರೆ.

ಬಿಜೆಪಿ ಸೇರ್ಪಡೆ

ಬಿಜೆಪಿ ಸೇರ್ಪಡೆ

ಗುರುವಾರ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ನೇತೃತ್ವದಲ್ಲಿ ಡಾ.ಸಿದ್ದರಾಮಯ್ಯ ಅವರು ಬಿಜೆಪಿಗೆ ಸೇರಿದರು. ಡಾ. ಸಿದ್ದರಾಮಯ್ಯ ಸೇರ್ಪಡೆ ಬಳಿಕ ಮಾತನಾಡಿದ ಮಂಡ್ಯ ಲೋಕಸಭಾ ಉಪ ಚುನಾವಣೆ ಉಸ್ತುವಾರಿಯಾಗಿರುವ ಆರ್.ಅಶೋಕ ಅವರು, 'ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಂಡಿದೆ' ಎಂದು ಹೇಳಿದರು.

ಜೆಡಿಎಸ್ ಅಭ್ಯರ್ಥಿ ಯಾರು?

ಜೆಡಿಎಸ್ ಅಭ್ಯರ್ಥಿ ಯಾರು?

ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ. 'ಮೊಮ್ಮಕ್ಕಳನ್ನು ಕಣಕ್ಕಿಳಿಸುವುದಿಲ್ಲ. ಮಂಡ್ಯದವರೇ ಅಭ್ಯರ್ಥಿಯಾಗಲಿದ್ದಾರೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ?ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ?

ಸಿ.ಎಸ್.ಪುಟ್ಟರಾಜು ಗೆಲುವು

ಸಿ.ಎಸ್.ಪುಟ್ಟರಾಜು ಗೆಲುವು

2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಎಸ್.ಪುಟ್ಟರಾಜು ಅವರು 524370 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾದ ರಮ್ಯಾ ಅವರು 51882 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರೊ.ಬಿ.ಶಿವಲಿಂಗಯ್ಯ ಅವರು 86,993 ಮತ ಪಡೆದಿದ್ದರು.

ಸಿ.ಎಸ್.ಪುಟ್ಟರಾಜು ಅವರು 2018ರ ವಿಧಾನಸಭೆ ಚುನಾವಣೆಗೆ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ಆದ್ದರಿಂದ, ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

English summary
Retired assistant commissioner of commercial tax Dr.Siddaramaiah BJP candidate for Mandya Lok Sabha by election 2018. Election will be held on November 3, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X