• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾರಕ ಕೊರೊನಾ ವೈರಸ್‌ಗೆ ವೈದ್ಯ ಡಾ. ನವೀನ್ ಬಲಿ!

|

ಬೆಂಗಳೂರು, ಅ. 09: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೊರೊನಾ ವಾರಿಯರ್ ಒಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಮಾರಕ ಕೊರೊನಾ ರೋಗಕ್ಕೆ ವೈದ್ಯರು ಬಲಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯ ಡಾ. ವಿನಯ್ ಕೊರೊನಾ ವೈರಸ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಕೆ.ಆರ್. ಪೇಟೆ. ತಾಲೂಕಿನ ಬಳ್ಳೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಡಾ‌. ವಿನಯ್(58) ಅವರು ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೈಸೂರಿನ ಕೊವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊವಿಡ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಡಾ. ವಿನಯ್ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 69,06,152

ಕೊರೊನಾ ವೈರಸ್‌ಗೆ ಈ ವರೆಗೆ ರಾಜ್ಯದಲ್ಲಿ 9,675 ಜನರು ಕೊರೊನಾ ವೈರಸ್‌ಗೆ ತುತ್ತಾಗಿ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 117 ಜನರು ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 1,17,143 ಸಕ್ರಿಯ ಸೋಂಕಿತರಿದ್ದಾರೆ.

English summary
Dr. Vinay (58) who working as a doctor at Bellakere Primary Health Center in KR Pete Taluk in Mandya district has died of coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X