ಮಂಡ್ಯದಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪವೋ? ಸ್ಪೋಟವೋ?
ಮಂಡ್ಯ, ಜನವರಿ 17: ಮಂಡ್ಯ ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಲವೆಡೆ ಭಾರಿ ಶಬ್ದ ಕೇಳಿಬಂದಿದ್ದು, ಭೂಮಿ ಕಂಪಿಸಿದ ಅನುಭವ ಆಗಿದೆ. ಜನರು ಮೆನಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಕೆಲವೆಡೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಉರುಳಿವೆ. ಇದು ಭೂಕಂಪವೋ ಅಥವಾ ಯಾವುದಾದರೂ ಸ್ಫೋಟವೋ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಭಾರಿ ದೊಡ್ಡ ಸದ್ದು ಆಗಿ ಭೂಮಿ ಕಂಪಿಸಿರುವ ಕಾರಣ ಯಾವುದೋ ಸ್ಪೋಟ ಸಂಭವಿಸಿರಬೇಕು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications