ಅಪಘಾತವಾದ ವ್ಯಕ್ತಿಗೆ ನೆರವಾದ ದರ್ಶನ್ ಪುಟ್ಟಣ್ಣಯ್ಯ
ಮೇಲುಕೋಟೆ, ಮೇ 01: ಅಪಘಾತಕ್ಕೀಡಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಗೆ ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು ನೆರವಾಗಿದ್ದಾರೆ. ದರ್ಶನ್ ಅವರ ಮಾನವೀಯತೆಗೆ ಎಲ್ಲೆಡೆಯಿಂದ ಪ್ರಶಂಸೆ ಕೇಳಿ ಬಂದಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಡ್ಯ ತಾಲೂಕು ಬಿ.ಹಟ್ನ ಗ್ರಾಮದ ಶಂಕರ್ (32) ಎಂದು ಗುರುತಿಸಲಾಗಿದೆ.

ತಮ್ಮ ಗದ್ದೆಯಲ್ಲಿ ಕೆಲ್ಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಶಂಕರ್ ಅವರಿಗೆ ಸೋಮವಾರ ರಾತ್ರಿ ವೇಳೆ ಸಾರಿಗೆ ಬಸ್ ಡಿಕ್ಕಿ ಹೊಡೆದಿತ್ತು. ರಸ್ತೆ ಮಧ್ಯೆ ಬಿದ್ದಿದ್ದ ಶಂಕರ್ ಅವರನ್ನು ಕಂಡ ದರ್ಶನ್ ಅವರು ತಕ್ಷಣವೇ ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ.
ದಿವಂಗತ ರೈತನಾಯಕ ಕೆ.ಎಸ್ .ಪುಟ್ಟಣ್ಣಯ್ಯನವರ ಮಗ ದರ್ಶನ್ ಪುಟ್ಟಣ್ಣಯ್ಯ ಅವರು ಮಂಡ್ಯದಿಂದ ದುದ್ದ ಹೋಬಳಿಯ ಬೇವುಕಲ್ಲು ಗ್ರಾಮಕ್ಕೆ ಪ್ರಚಾರ ಕಾರ್ಯಕ್ಕೆ ತೆರಳುತ್ತಿದ್ದರು.
ಈ ಸಂದರ್ಭದಲ್ಲಿ ಭಾರಿ ಮಳೆ, ಗಾಳಿಯ ನಡುವೆ ಸಾಗುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯಾರು ಸಹಾಯಕ್ಕೆ ಬಾರದೆ ಶಂಕರ್ ರಸ್ತೆಯ ಪಕ್ಕ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದನ್ನು ಕಂಡು ದರ್ಶನ್ ನೆರವಿಗೆ ಧಾವಿಸಿದ್ದಾರೆ. ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಅಲ್ಲದೆ ವೈದ್ಯರ ಜೊತೆ ಮಾತನಾಡಿ ಸೂಕ್ತ ಚಿಕಿತ್ಸೆಗೆ ನೆರವಾಗಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications