ಮಂಡ್ಯದಲ್ಲಿ 12.25 ಲಕ್ಷ ರೂ. ವೆಚ್ಚದಲ್ಲಿ ಇಂಗ್ಲೀಷ್ ಲ್ಯಾಬ್ ಸ್ಥಾಪನೆ: ಸಚಿವ ಆರ್‌. ಅಶೋಕ್

ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾಗಿರುವ ಇಂಗ್ಲೀಷ್ ಲ್ಯಾಬ್‌ಗೆ ತಗುಲಿದ ವೆಚ್ಚವನ್ನು ತಿಳಿಯಿರಿ.

ಮಂಡ್ಯ, ಜನವರಿ, 26: ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷಾ ಕಲಿಕೆ ಉತ್ತೇಜಿಸಲು "ಸಂಕಲ್ಪ" ಯೋಜನೆಯಡಿಯಲ್ಲಿ ಪ್ರಾಯೋಗಿಕವಾಗಿ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ 12.25 ಲಕ್ಷ ರೂಪಾಯಿ ವೆಚ್ಚದಲ್ಲಿ ಇಂಗ್ಲೀಷ್ ಲ್ಯಾಬ್‌ನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ತಿಳಿಸಿದರು.

ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಸ್ಪರ್ಧೆಗೆ ಅನುಗುಣವಾಗಿ ಕಲಿಕೆ ಅಗತ್ಯವೆಂಬ ಕಾರಣಕ್ಕೆ ಇಂಗ್ಲೀಷ್ ಲ್ಯಾಬ್‌ನ್ನು ಸ್ಥಾಪಿಸಲಾಗಿದೆ. ಈವರೆಗೆ 34519 ವಿದ್ಯಾರ್ಥಿಗಳಿಗೆ 15.95 ಕೋಟಿ ರೂ.ಪಾಯಿ ಶಿಷ್ಯವೇತನವನ್ನು ನೀಡಲಾಗಿದೆ. ಹಿಂದುಳಿದ ವರ್ಗಗಳ 109 ವಿದ್ಯಾರ್ಥಿನಿಲಯಗಳಲ್ಲಿ ಒಟ್ಟು 8535 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿ ವಿದ್ಯಾಭ್ಯಾಸಕ್ಕಾಗಿ ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದರು.

ಶುಲ್ಕ ವಿನಾಯಿತಿ ಕಾರ್ಯಕ್ರಮದಡಿ 15.93 ಕೋಟಿ ರೂಪಾಯಿ ಅನುದಾನದಲ್ಲಿ ಒಟ್ಟು 22,000 ಫಲಾನುಭವಿಗಳಿಗೆ ಶುಲ್ಕ ವಿನಾಯಿತಿ ಪಾವತಿಸಲಾಗಿದೆ. 2.47ಕೋಟಿ ರೂಪಾಯಿ ವೆಚ್ಚದಲ್ಲಿ 25,750ಫಲಾನುಭವಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ. ಹಾಗೆಯೇ ಮೀನುಗಾರರು, ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರು, ಭೂರಹಿತ ಕೃಷಿ ಕಾರ್ಮಿಕರು ಹಾಗೂ ನೇಕಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

 ಪೂರ್ಣಗೊಂಡ ಮನೆಗಳೆಷ್ಟು?

ಪೂರ್ಣಗೊಂಡ ಮನೆಗಳೆಷ್ಟು?

ಗ್ರಾಮೀಣ ವಸತಿ ಮತ್ತು ನಿವೇಶನ ಯೋಜನೆಯಡಿ ಜಿಲ್ಲೆಗೆ 6743 ಮನೆಗಳನ್ನು ಪೂರ್ಣಗೊಳಿಸಲು ಪ್ರಸಕ್ತ ಸಾಲಿನಲ್ಲಿ ಗುರಿಯನ್ನು ನಿಗದಿಪಡಿಸಿದ್ದು, ಈಗಾಗಲೇ 3444 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದ 3299 ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತದೆ ಎಂದರು.

 ಫಲಾನುಭವಿಗಳಿಗೆ ಪ್ರೋತ್ಸಾಹ

ಫಲಾನುಭವಿಗಳಿಗೆ ಪ್ರೋತ್ಸಾಹ

ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ರೈತರು ಇತ್ತೀಚಿನ ವರ್ಷಗಳಲ್ಲಿ ತೋಟಗಾರಿಕೆಯತ್ತ ಆಸಕ್ತಿ ವಹಿಸಿರುವ ಕಾರಣ 721 ಫಲಾನುಭವಿಗಳಿಗೆ ಪ್ರೋತ್ಸಾಹ ನೀಡಿ 668.19 ಲಕ್ಷ ರೂಪಾಯಿ ಸಹಾಯಧನ ವಿತರಿಸಲಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ನೀಡಲು ಯೋಜನೆ ರೂಪಿಸಿದ್ದೇವೆ. ಸಾಯಿಲ್ ಟು ಸಿಲ್ಕ್‌ ಪರಿಕಲ್ಪನೆಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಆರ್.ಪೇಟೆ ತಾಲೂಕಿನಲ್ಲಿ ರೇಷ್ಮೆ ತರಬೇತಿ ಕೇಂದ್ರ ತೆರೆಯಲು ಸಿದ್ಧತೆ ನಡೆದಿದೆ.

ಜಿಲ್ಲೆಯಲ್ಲಿ 44750.28 ಹೆಕ್ಟೇರ್‌ಗಳಲ್ಲಿ ಹಿಪ್ಪುನೇರಳೆ ಬೆಳೆ ಬೆಳೆಯುತ್ತಿದ್ದು, ರೇಷ್ಮೆ ಕೃಷಿಯಲ್ಲಿ ತೊಡಗಿರುವ ಸುಮಾರು 31703 ಕುಟುಂಬಗಳಿಗೆ 45.68 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಇದರಿಂದ 24760 ರೈತ ಫಲಾನುಭವಿಗಳು ಅನುಕೂಲ ಪಡೆದಂತಾಗಿದೆ ಎಂದು ತಿಳಿಸಿದರು.

 ಭೂಪರಿವರ್ತನೆ ಮಾಡಲು ಪ್ಲಾನ್

ಭೂಪರಿವರ್ತನೆ ಮಾಡಲು ಪ್ಲಾನ್

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಮಾಡಲು ಮಾಸ್ಟರ್ ಪ್ಲಾನ್ ಆಧಾರಿತ ಭೂಪರಿವರ್ತನೆಯನ್ನು 07 ದಿನಗಳಿಗೆ ಇಳಿಸಲು ಕ್ರಮವಹಿಸಲಾಗಿದೆ. ಹಾಗೆಯೇ "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಎಂಬ ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಈ ಕಾರ್ಯಕ್ರಮದಡಿ ಈವರೆಗೆ ಸುಮಾರು 4,29,790 ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ವಿತರಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ (ಬಗರ್‌ಹುಕುಂ) ರೈತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತಿರುವುದನ್ನು ತಪ್ಪಿಸಲು ಕರ್ನಾಟಕ ಭೂಕಬಳಿಕೆ ನಿಷೇಧ ಅಧಿನಿಯಮ 2011ಕ್ಕೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಜಿಲ್ಲೆಯಲ್ಲಿ 147 ದಾಖಲೆರಹಿತ ಜನವಸತಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 139 ಕಂದಾಯ ಗ್ರಾಮಗಳನ್ನು ರಚಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಹಾಗೂ 112 ಗ್ರಾಮಗಳ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. 744 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದರು. ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಯೋಜನೆಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 3,60,381 ಮಂದಿ ಫಲಾನುಭವಿಗಳು ಮಾಸಿಕ ಪಿಂಚಣಿಯನ್ನು ಪಡೆಯಲಿದ್ದಾರೆ ಎಂದು ವಿವರಿಸಿದರು.

 16 ಕೆರೆಗಳನ್ನು ತುಂಬಿಸುವ ಪ್ಲಾನ್‌

16 ಕೆರೆಗಳನ್ನು ತುಂಬಿಸುವ ಪ್ಲಾನ್‌

ಜಿಲ್ಲೆಯಲ್ಲಿ ಇದುವರೆಗೂ 100 ರೈತ ಉದ್ದಿಮೆದಾರರಿಗೆ, 32.99 ಕೋಟಿ ರೂಪಾಯಿ ಮೊತ್ತದ ಸಾಲ ಮಂಜೂರು ಮಾಡಲಾಗಿದ್ದು, 14.05 ಕೋಟಿ ರೂಪಾಯಿ ಸಹಾಯಧನವನ್ನು ಮಂಜೂರು ಮಾಡಲಾಗಿದೆ. ಈ ಕಾರ್ಯಕ್ರಮ ಅನುಷ್ಟಾನ ಮಾಡುವಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಮತ್ತು ಮಳವಳ್ಳಿ ತಾಲೂಕಿನ 51 ಗ್ರಾಮಗಳ 25,000 ಹೆಕ್ಟೇರ್‌ ಪ್ರದೇಶಕ್ಕೆ ಹನಿ ನೀರನ್ನು ಒದಗಿಸಲು ಹಾಗೂ 16 ಕೆರೆಗಳನ್ನು ತುಂಬಿಸಲು ಈ ಯೋಜನೆಯನ್ನು ರೂಪಿಸಲಾಗಿರುತ್ತದೆ. 300 ಕೋಟಿ ರೂಪಾಯಿ ವೆಚ್ಚದಲ್ಲಿ ವಿ.ಸಿ. ನಾಲಾ ಎರಡನೇ ಹಂತದ ಆಧುನೀಕರಣ ಕಾಮಗಾರಿ ಕೈಗೊಂಡಿದ್ದು, ನಾಲೆಯ ಸರಪಳಿ 0 ಕಿ.ಮೀ ಯಿಂದ 46.25 ಕಿ.ಮೀ ವರೆಗೆ ಆಧುನೀಕರಣಗೊಳಿಸಲು ಉದ್ದೇಶಿಸಲಾಗಿದೆ. 78.13 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರೇಕುರ ಸೇತುವೆ ಕಾಮಗಾರಿ ಆರಂಭಿಸಲಾಗಿದೆ. 58.46 ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಆರ್.ಎಸ್. ಜಲಾಶಯದ ಪ್ರವಾಹ ನಿಯಂತ್ರಣ ಗೇಟ್‌ಗಳನ್ನು ಅಳವಡಿಸುವ ಕಾಮಗಾರಿ, 80 ಕೋಟಿ ರೂ.ಗಳಲ್ಲಿ ಕೆ.ಆರ್.ಎಸ್. ಜಲಾಶಯದ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕೆ.ಆರ್.ಪೇಟೆ, ನಾಗಮಂಗಲ ಮತ್ತು ಪಾಂಡವಪುರ ತಾಲೂಕಿನ ಎಲ್ಲಾ ಗ್ರಾಮಗಳಿಗೂ ನೀರು ಒದಗಿಸಲು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು 943 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಮಂಡ್ಯ, ಮದ್ದೂರು, ಮಳವಳ್ಳಿ ಮತ್ತು ಶ್ರೀರಂಗಪಟ್ಟಣ ತಾಲೂಕುಗಳಿಗೆ 802 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಂ. ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ, ಜಿಲ್ಲಾ ಪಂಚಾಯತ್‌ ಸಿಇಓ ಶಾಂತಾ ಹುಲ್ಮನಿ, ಪೊಲೀಸ್ ಅಧೀಕ್ಷಕ ಎನ್. ಯತೀಶ್, ನಗರಸಭಾಧ್ಯಕ್ಷ ಎಚ್.ಎಸ್.ಮಂಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ನಗರಸಭಾ ಸದಸ್ಯರು ಭಾಗವಹಿಸಿದ್ದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+