ದೇಶದಲ್ಲಿ ಬಿಜೆಪಿ ಸರ್ಕಾರಗಳ ಸವಲತ್ತುಗಳನ್ನು ಪಡೆದುಕೊಳ್ಳದ ಮನೆಗಳಿಲ್ಲ- ಬಿ.ಎಸ್‌ ಯಡಿಯೂರಪ್ಪ

ಮಂಡ್ಯ, ಡಿಸೆಂಬರ್‌ 16: ದೇಶದ ಯಾವುದೇ ಮನೆಗೆ ಹೋದರು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಸವಲತ್ತುಗಳನ್ನು ಪಡೆದುಕೊಳ್ಳದ ಮನೆಗಳು ಸಿಗುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಪ್ರತಿನಿಧಿಗಳು ಎಲ್ಲಾ ವರ್ಗದ ಜನರು, ಮಹಿಳೆಯರು ಮತ್ತು ಯುವಕರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ವಾಲ್ಮೀಕಿ ಜಯಂತಿ ಜೊತೆಗೆ ಕನಕ ಪೀಠ ಸ್ಥಾಪನೆ ಮಾಡಿದ್ದು ಬಿಜೆಪಿ ಸರ್ಕಾರ ಎಂದರು.

ಕಾಂಗ್ರೆಸ್ ಹಣಬಲ, ತೋಳ್ಬಲ ಮತ್ತು ಜಾತಿಯ ವಿಷ ಬೀಜ ಬಿತ್ತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸುವುದು ಸೂರ್ಯ, ಚಂದ್ರರಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರು ನೆಮ್ಮದಿಯಿಂದ ಬದುಕುವಂತಾಗಿದೆ

ರೈತರು ನೆಮ್ಮದಿಯಿಂದ ಬದುಕುವಂತಾಗಿದೆ

ಮಾತು ಮುಂದುವರಿಸಿದ ಅವರ ಅನ್ನದಾತರಿಗೆ ಏನು ಮಾಡಿದರೂ ಕಡಿಮೆ. ನಮ್ಮ ಸರ್ಕಾರ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ವರುನ ಕೃಪೆಯಿಂದ ಈ ವರ್ಷ ರೈತರು ನೆಮ್ಮದಿಯಿಂದ ಬದುಕುವಂತಾಗಿದೆ. ಮುಂದಿನ ವರ್ಷವೂ ಸಮೃದ್ಧಿಯಾಗಿ ಮಳೆಯಾಗಿ ರೈತ ನೆಮ್ಮದಿಯಾಗಿ ಬಾಳಲಿ ಎಂದರು.

ಮಂಡ್ಯದ ಮೈಶುಗರ್ ಮತ್ತು ಪಿಎಸ್‌ಎಸ್‌ಕೆ ಕಾರ್ಖಾನೆಗಳ ಪ್ರಾರಂಭಕ್ಕೆ ನಾನು ಮತ್ತು ಬಸವರಾಜ ಬೊಮ್ಮಾಯಿ ಅನುದಾನ ನೀಡಿದ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಕಬ್ಬು ಅರೆಯುವಂತಾಗಿದೆ. ಕಬ್ಬಿಗೆ ಒಳ್ಳೆಯ ಬೆಲೆ ಸಿಗಬೇಕು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಮೇಲುಕೋಟೆ ವಿಧಾನಸಭಾ ವ್ಯಾಪ್ತಿಯಲ್ಲಿ ಕಾರ್ಖಾನೆಗಳು ಸ್ಥಾಪನೆಯಾಗಬೇಕು ಅದಕ್ಕೆ ಬೇಕಾದ ಹಣಕಾಸು ವ್ಯವಸ್ಥೆಯನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಇಂದ್ರೇಶ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು

ಇಂದ್ರೇಶ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು

ಸಮಾವೇಶದಲ್ಲಿ ಸೇರಿದ್ದ ದೊಡ್ಡ ಮಟ್ಟದ ಜನಸ್ತೋಮ ಕಂಡು ಆಚ್ಚರಿ ವ್ಯಕ್ತಪಡಿಸಿದ ಬಿ.ಎಸ್‌ಯಡಿಯೂರಪ್ಪ, ನಮ್ಮ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಜನ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ. ನನ್ನ ನಿರೀಕ್ಷೆಗೂ ಮೀರಿ ಜನ ಸೇರಿರುವುದು ತುಂಬ ಖುಷಿ ತಂದಿದೆ. ಇದೇ ರೀತಿ ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು ಎಂದು ಹೇಳುವ ಮೂಲಕ ಡಾ.ಇಂದ್ರೇಶ್ ಅವರೇ ಬಿಜೆಪಿ ಅಭ್ಯರ್ಥಿ ಎಂದು ಪರೋಕ್ಷವಾಗಿ ಘೋಷಣೆ ಮಾಡಿದರು.

ಮೇಲುಕೋಟೆ ಕ್ಷೇತ್ರದಿಂದ ಅಭ್ಯರ್ಥಿಯಾಗುತ್ತೇನೆ-ಡಾ.ಇಂದ್ರೇಶ್

ಮೇಲುಕೋಟೆ ಕ್ಷೇತ್ರದಿಂದ ಅಭ್ಯರ್ಥಿಯಾಗುತ್ತೇನೆ-ಡಾ.ಇಂದ್ರೇಶ್

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಮಂಡ್ಯ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಿಸಿ ಮಂಡ್ಯಕ್ಕೆ ಸಕ್ಕರೆ ನಾಡು ಎಂಬ ಪದಕ್ಕೆ ಅಪವಾದ ತಂದಿದ್ದರು. ಆದರೆ ಬಿಜೆಪಿ ಸರ್ಕಾರ ಎರಡು ಕಾರ್ಖಾನೆಗಳನ್ನು ಪ್ರಾರಂಭಿಸುವ ಮೂಲಕ ಆ ಹೆಸರಿಗೆ ಪುಷ್ಠಿ ತಂದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದನ್ನು ಯಾರಿಂದಲೂ ತಪ್ಪಿಸಲು. ಇದ್ಕಕಾಗಿ ಇಂದಿನಿಂದಲೇ ಸಂಕಲ್ಪ ಮಾಡೋಣ ಎಂದರು.

ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಕಲ್ಪಿಸಿದ್ದಕ್ಕಾಗಿ ಎಸ್‌ಸಿ ಮೋರ್ಚಾದ ವತಿಯಿಂದ, ಜಿಲ್ಲೆಯ ಎರಡು ಕಾರ್ಖಾನೆಗಳನ್ನು ಆರಂಭಿಸಿದ್ದಕ್ಕಾಗಿ ರೈತಮೋರ್ಚಾ ಹಾಗೂ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಸಹಕರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ಮೋರ್ಚಾ ಹಾಗೂ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಬೇಡಿಕೆ ಈಡೇರಿಸಿದ ಸರ್ಕಾರ ವಿರುದ್ಧ ರೈತರ ಕಿಡಿ

ಬೇಡಿಕೆ ಈಡೇರಿಸಿದ ಸರ್ಕಾರ ವಿರುದ್ಧ ರೈತರ ಕಿಡಿ

ಪ್ರತಿ ಟನ್ ಕಬ್ಬಿಗೆ 4500 ರೂ, ಹಾಲಿಗೆ 40 ರೂಪಾಯಿ ನಿಗದಿ ಸೇರಿದಂತೆ ರೈತರ ಹಲವು ಬೇಡಿಕೆಗಳನ್ನು ರಾಜ್ಯ ಸಕಾರ ವಿಫಲವಾಗಿದೆ ಎಂದು ರೈತಸಂಘ ಕಾರ್ಯಕರ್ತರು ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದರು. ಕಬ್ಬಿನ ಬೆಲೆ ನಿಗದಿಗಾಗಿ ರೈತಸಂಘ ನಿರಂತರ ಪ್ರತಿಭಟನೆ ನಡೆಸುತ್ತಿದೆ. ಹತ್ತು ಹಲವು ಬಾರಿ ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತಸಂಘ ಕಾರ್ಯಕರ್ತರು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+