ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಡಿಸಿ ಕಚೇರಿಗೆ ಮುತ್ತಿಗೆ ಹಾಕಿದ ರೈತರು

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ನವೆಂಬರ್ 16: ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಹತ್ತು ದಿನಗಳಿಂದ ನಗರದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜೆ.ಸಿ.ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ನಂತರ ಪ್ರತಿಕೃತಿಯನ್ನು ದಹಿಸಿ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ರೈತ ಸಂಘದ ಕಾರ್ಯಕರ್ತರ ಮುತ್ತಿಗೆ ವಿಚಾರ ತಿಳಿದ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾಕಾರಿ ಕಚೇರಿಯ ಸುತ್ತಲೂ ಬ್ಯಾರಿಕೇಡ್‌ಗಳಿಂದ ನಾಕಾ ಬಂದಿಯನ್ನು ನಿರ್ಮಿಸಿ ಸುತ್ತಲೂ ಪೊಲೀಸ್ ಪಹರೆಯನ್ನು ನಿಯೋಜಿಸಿತ್ತು.

ಮಂಡ್ಯ: ರೈತರ ಪ್ರತಿಭಟನೆಯಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಭಾಗಿ, ಬೆಂಬಲ ಘೋಷಣೆಮಂಡ್ಯ: ರೈತರ ಪ್ರತಿಭಟನೆಯಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಭಾಗಿ, ಬೆಂಬಲ ಘೋಷಣೆ

ಆದರೆ, ಇದನ್ನು ಲೆಕ್ಕಿಸದ ಕಾರ್ಯಕರ್ತರು, ಕಬ್ಬು ತುಂಬಿದ ಟ್ರಾಕ್ಟರ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಕಬ್ಬಿಗೆ 4500 ರೂ. ಹಾಗೂ ಲೀಟರ್ ಹಾಲಿಗೆ 40 ರೂ. ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಹತ್ತು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರು ಸರ್ಕಾರ ನಮ್ಮ ಧರಣಿಯನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Farmers Protested against Karnataka Government for Demand SAP for sugarcane

ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಕಬ್ಬಿನ ದರದ ಬಗ್ಗೆ ಈವರೆಗೂ ಮಾತನಾಡಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಇವರಿಗೆ ಅರಿವಿಲ್ಲವೇ ಎಂದು ಜನಪ್ರತಿನಿಧಗಳ ವಿರುದ್ಧ ಹರಿಹಾಯ್ದರು. ಮಾತೆತ್ತಿದರೆ ನಾವು ರೈತರ ಮಕ್ಕಳು ಎನ್ನುತ್ತಾರೆ. ರೈತರ ಮಕ್ಕಳ ಸಮಸ್ಯೆಗಳ ಬಗ್ಗೆ ಯಾಕೆ ಸರ್ಕಾರದ ಗಮನಕ್ಕೆ ತರುತ್ತಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಎಂದು ದೂರಿದರು.

ರಾಜಕೀಯ ಪಕ್ಷಗಳ ಬೆಂಬಲ

ರೈತರ ಪ್ರತಿಭಟನೆಗೆ ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಆಮ್‌ ಆದ್ಮಿ ಪಕ್ಷದ ನಾಯಕರು ಬೆಂಬಲ ಸೂಚಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಎಪಿ ರಾಜ್ಯದಾಧ್ಯಕ್ಷ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದರು. ಆದರೂ ಸಹ ಸರ್ಕಾರದ ಯಾವೊಬ್ಬ ಮಂತ್ರಿಯೂ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

Farmers Protested against Karnataka Government for Demand SAP for sugarcane

ಎಫ್‌ಆರ್‌ಪಿ ಪರಿಷ್ಕರಣೆ ಮಾಡಿ ರೈತರಿಗೆ ನೆರವಾಗಿ

ಕಳೆದ 16 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಬೇಸರ ಸರ್ಕಾರ. ಈ 40% ಸರ್ಕಾರಕ್ಕೆ ಭ್ರಷ್ಟಾಚಾರ ಮಾಡುವುದೊಂದೇ ಗುರಿಯಾಗಿದ್ದು, ರೈತರ ಹಿತ ಮುಖ್ಯವಾಗಿಲ್ಲ. ಪಂಜಾಬ್‌ನ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಕಬ್ಬಿನ ಎಫ್‌ಆರ್‌ಪಿಯನ್ನು 3,800 ರೂಪಾಯಿಗೆ ಏರಿಕೆ ಮಾಡಿದೆ. ಕರ್ನಾಟಕ ಸರ್ಕಾರ ಕೂಡ ಎಫ್‌ಆರ್‌ಪಿ ಪರಿಷ್ಕರಣೆ ಮಾಡಿ ರೈತರಿಗೆ ನೆರವಾಗಬೇಕು ಎಂದು ಪೃಥ್ವಿ ರೆಡ್ಡಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ , ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ. ಮಧುಚಂದನ್, ಮುಖಂಡರಾದ ಲಿಂಗಪ್ಪಾಜಿ, ವಿಜಯಕುಮಾರ್, ನಾಗರೇವಕ್ಕ , ಪ್ರಸನ್ನ ಎನ್. ಗೌಡ, ಕೆ.ಪಿ.ಗೋವಿಂದೇಗೌಡ, ಶಿವಳ್ಳಿ ಚಂದ್ರು, ಶೆಟ್ಟಹಳ್ಳಿ ರವಿಕುಮಾರ್, ಶಿವಳ್ಳಿ ಬೋರೇಗೌಡ, ರಘು, ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

English summary
Farmers protested against Karnataka government for Demand SAP for sugarcane continued in Mandya, o0n Tuesday outraged farmers besieging the district collector's office
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X