ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ರೈತರಿಗೆ ಶುಭ ಸುದ್ದಿ : ಮಂಗಳವಾರದಿಂದ ಬೆಳೆಗಳಿಗೆ ನೀರು

|
Google Oneindia Kannada News

ಮಂಡ್ಯ, ಜುಲೈ 15 : ಮಂಡ್ಯ ರೈತರ ಅಹೋರಾತ್ರಿ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ಕೆಆರ್‌ಎಸ್‌ನಿಂದ ನಾಲೆಗಳಿಗೆ ಒಂದು ಕಟ್ಟು ನೀರು ಹರಿಸಲು ತೀರ್ಮಾನಿಸಲಾಗಿದೆ. ಕೆಆರ್‌ಎಸ್ ಜಲಾಶಯದ ಸೋಮವಾರದ ನೀರಿನ ಮಟ್ಟ 90.50 ಅಡಿ.

ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾವೇರಿ ಸಲಹಾ ಸಮಿತಿ ಸಭೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ. ಮಂಗಳವಾರ ರಾತ್ರಿಯಿಂದ ಒಂದು ಕಟ್ಟು (10 ದಿನಗಳು) ನೀರು ಹರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಶಾಸಕ ನಾರಾಯಣಗೌಡರ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆಶಾಸಕ ನಾರಾಯಣಗೌಡರ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ರಾಜಕೀಯದ ಬೆಳವಣಿಗೆ ನಡುವೆಯೇ ಸೋಮವಾರ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೀರು ಹರಿಸಲು ಒಪ್ಪಿಗೆ ಕೊಡಲಾಗಿದೆ.

ಉತ್ತಮ ಮಳೆಯಾಗಲೆಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ದರ್ಶನ್ ಪುಟ್ಟಣ್ಣಯ್ಯಉತ್ತಮ ಮಳೆಯಾಗಲೆಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ದರ್ಶನ್ ಪುಟ್ಟಣ್ಣಯ್ಯ

krs

ಮಂಡ್ಯದಲ್ಲಿ ಬೆಳೆದು ನಿಂತಿರುವ ಕಬ್ಬು, ಭತ್ತದ ಬೆಳೆಗಳು ಒಣಗುತ್ತಿವೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಬೇಕು ಎಂದು ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಈಗ ರೈತರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದಂತಾಗಿದೆ.

ಗಂಭೀರ ಸ್ವರೂಪ ಪಡೆದ ಮಂಡ್ಯ ರೈತರ ಪ್ರತಿಭಟನೆ: ಕೆಆರ್‌ಎಸ್‌ಗೆ ಮುತ್ತಿಗೆಗಂಭೀರ ಸ್ವರೂಪ ಪಡೆದ ಮಂಡ್ಯ ರೈತರ ಪ್ರತಿಭಟನೆ: ಕೆಆರ್‌ಎಸ್‌ಗೆ ಮುತ್ತಿಗೆ

ಸೋಮವಾರ ಸಂಜೆಯ ಹೊತ್ತಿಗೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 90.50 ಅಡಿಗಳು. ಕೊಡಗು ಜಿಲ್ಲೆಯಲ್ಲಿ ಸಾಧಾರಣವಾಗಿ ಮಳೆಯಾಗುತ್ತಿದ್ದು, 3641 ಕ್ಯುಸೆಕ್ ಒಳಹರಿವು ದಾಖಲಾಗಿದೆ.

English summary
Good news for farmers of Mandya who are on an indefinite strike demanding to release water for irrigation. From July 16 water will release from KRS for irrigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X