• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವೈರಸ್‌ ಭೀತಿಗೆ ಮಂಡ್ಯ ವೃದ್ಧ ಆತ್ಮಹತ್ಯೆ

|
Google Oneindia Kannada News

ಮಂಡ್ಯ, ಜುಲೈ 4: ಕೊರೊನಾ ವೈರಸ್‌ ಭೀತಿಯಿಂದ ಮಂಡ್ಯ ವೃದ್ಧ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮದ್ದೂರು ತಾಲೂಕಿನ ಮಹರ್ನವಮಿದೊಡ್ಡಿ ಗ್ರಾಮದಲ್ಲಿ ಈ ದುರ್ಘಟನೆ‌ ನಡೆದಿದೆ. ಗ್ರಾಮದ ದೊಡ್ಡನೀಲ ಹೆಗ್ಗಡೆ ಮೃತ ದುರ್ದೈವಿಯಾಗಿದ್ದಾರೆ. ಇವರಿಗೆ 70 ವರ್ಷ ವಯಸ್ಸಾಗಿತ್ತು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋವಿಡ್-19 ನಿರ್ಲಕ್ಷ: ಮೂವರು ವೈದ್ಯಾಧಿಕಾರಿಗಳಿಗೆ ಶೋಕಾಸ್ ನೋಟಿಸ್ಕೋವಿಡ್-19 ನಿರ್ಲಕ್ಷ: ಮೂವರು ವೈದ್ಯಾಧಿಕಾರಿಗಳಿಗೆ ಶೋಕಾಸ್ ನೋಟಿಸ್

ತಮ್ಮೂರಿನ ಕೊರೊನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಮೃತ ವೃದ್ಧ ಸಂಪರ್ಕ ಹೊಂದಿದ್ದರು. ಇದರಿಂದ ತನಗೂ ಕೊರೊನಾ ಬಂದಿರುವ ಭೀತಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವವನ್ನು ಕೋವಿಡ್ ಪರೀಕ್ಷೆಗಾಗಿ ಪೊಲೀಸರು ಮಂಡ್ಯ ಕೊವಿಡ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಬೆಸಗರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 1694 ಮಂದಿಗೆ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 19910ಕ್ಕೆ ಏರಿಕೆಯಾಗಿದೆ.

English summary
Coronavirus in Mandya: 70 years old man committed suicide in Mandya because fear of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X