ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ: ಕಾಂಗ್ರೆಸ್‌ ವಿರುದ್ಧ ಸಿ.ಟಿ ರವಿ ಕಿಡಿ

ಮಂಡ್ಯ, ಆಗಸ್ಟ್‌ 22: ಚುನಾವಣೆಗೂ ಮುನ್ನ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರೆಲ್ಲ ಸೇರಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು. ಆದರೂ ನ್ಯಾಯಾಲಯ ಮತ್ತು ಪ್ರಾಧಿಕಾರ ಹೇಳುವ ಮುನ್ನವೇ ತಮಿಳುನಾಡಿಗೆ ನೀರು ಬಿಟ್ಟಿದ್ದಾದರೂ ಏಕೆ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು.

ಮಂಡ್ಯ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕಾರ್ಯಕರ್ತರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೂ ಮುಂಚೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ಸಿಗರು ಸೇರಿ ಮೇಕೆದಾಟು ಯೋಜನೆಗಾಗಿ 'ನಮ್ಮ ನೀರು, ನಮ್ಮ ಹಕ್ಕು' ಎಂದು ಪಾದಯಾತ್ರೆ ಮಾಡಿದರು. ಆದರೆ ಆದೇಶಕ್ಕೂ ಮುನ್ನ ನೀರು ಬಿಡುಗಡೆ ಮಾಡಿ ರಾಜ್ಯದ ಜನರಿಗೆ ದ್ರೋಹ ಎಸಗಿದರು ಎಂದು ಕಿಡಿಕಾರಿದರು.

Former MLA C.T Ravi Reaction About Cauvery Water Release To Tamil Nadu

ಕಾವೇರಿ ಕರ್ನಾಟಕದ ಸ್ವಾಭಿಮಾನದ ಪ್ರತೀಕ ಮಾತ್ರವಲ್ಲ, ನಮ್ಮ ಜೀವನಾಡಿ. ಮಂಡ್ಯ, ಮೈಸೂರು ಭಾಗದ ರೈತರ ಬದುಕನ್ನು ಹಸನು ಮಾಡಿದೆ. ಕಾವೇರಿ ಇಲ್ಲದೇ ಬೆಂಗಳೂರು ಮಹಾನಗರ ಉಳಿಯೋಕು ಆಗಲ್ಲ . ಕಾವೇರಿ ವಿವಾದ ಇವತ್ತು ನಿನ್ನೆಯದಲ್ಲ. ಅದಕ್ಕೆ ಶತಮಾನದ ಇತಿಹಾಸವಿದೆ. ಕಾವೇರಿ ನದಿ ನೀರನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಉಳಿಸಿಕೊಳ್ಳಬೇಕಾದದ್ದು ಆಳುವ ಸರ್ಕಾರಗಳ ಹೊಣೆ ಎಂದರು.

ರೈತರು ಎಂದರೆ ಎಲ್ಲರೂ ಒಂದೇ

ರೈತರು ಎಂದರೆ ಎಲ್ಲರೂ ಒಂದೇ, ಕರ್ನಾಟಕ-ತಮಿಳುನಾಡು ಎನ್ನುವ ಬೇಧ-ಭಾವವಿಲ್ಲ. ಆದರೆ ಸಂಕಷ್ಟ ಇದ್ದಾಗ ಸೂತ್ರದ ಅನುಗುಣವಾಗಿ ನೀರಿನ ವಿಚಾರ ವ್ಯವಹಾರ ಮಾಡಬೇಕು. ಈಗ ಮಳೆ ಇಲ್ಲ, ಸಂಕಷ್ಟ ಇದೆ. ಇಂತಹ ಪರಿಸ್ಥಿತಿಯಲ್ಲಿ ಅಳೋಕು ಮುಂಚೆ ನೀರು ಕೊಟ್ಟಿದ್ದಾರೆ. ಮಕ್ಕಳು ಅತ್ತಾಗ ಮಾತ್ರ ತಾಯಿ ಹಾಲು ಕೊಡೋದು. ಆದರೆ, ತಮಿಳುನಾಡು ಕೇಳೋಕೆ ಮುಂಚೆ ನೀರು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ

'ಇಂಡಿಯ'ಗೋಸ್ಕರ ನೀರು ಬಿಡಲಾಗಿದೆ. ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿಯಾಗಿದ್ದು, ಕಾಂಗ್ರೆಸ್ ಮಂಡ್ಯ ಜನರಿಗೆ ಶಾಪ, ತಮಿಳುನಾಡಿಗೆ ವರ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ. ಸಂಕಷ್ಟದ ಸೂತ್ರ ಮರೆತು ನೀರು ಬಿಟ್ಟಿದ್ದೀರಿ. ಸಂಕಷ್ಟದ ಸೂತ್ರ ಬದಿಗೊತ್ತಿ ರಾಜಕೀಯ ಮಾಡ್ತಿದ್ದೀರಿ. ನಿಮ್ಮ ಪಾಪಕ್ಕೆ ಸೀಲ್ ಹಾಕಿಸಿಕೊಳ್ಳಲು ನಾಳೆ (ಬುಧವಾರ) ಸರ್ವಪಕ್ಷಗಳ ಸಭೆ ಮಾಡ್ತಿದ್ದೀರಿ ಎಂದು ಟೀಕಿಸಿದರು.

ಹೇಗೋ ಒಂದಷ್ಟು ಜನ ಹೊಗಳು ಭಟ್ಟರನ್ನ ಇಟ್ಕೊಂಡಿದ್ದೀರಿ. ಅವರ ಬಳಿ ಸೀಲ್ ಹಾಕೊಸಿಕೊಳ್ಳೋಕೆ ಸಭೆ ಮಾಡ್ತಿದ್ದೀರಿ. ಈಗಾಗಲೇ ತಮಿಳುನಾಡಿಗೆ ನೀರು ಬಿಟ್ಟು ಈಗ ಸಭೆ ಮಾಡಿದರೆ ಏನು ಪ್ರಯೋಜನ? ನೀರು ಬಿಡುವ ಮೊದಲೇ ಸಭೆ ಮಾಡಬೇಕಿತ್ತು. ಇದು ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ. ರಾಜ್ಯದಲ್ಲಿ ಉತ್ತಮ ಮಳೆ ಅಗಿದ್ದರೆ ತಮಿಳುನಾಡಿಗೆ ನೀರು ಬಿಡಿ. ಆದರೆ, ಬರಗಾಲದಲ್ಲೂ ನೀರು ಬಿಡುವ ಅವಶ್ಯಕತೆ ಏನಿತ್ತು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯ ಜನ ನಿಮಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚು ಸ್ಥಾನ ಕೊಟ್ಟಿದ್ದಾರೆ. ಈಗ ಮಂಡ್ಯದ ಜನರಿಗೆ ನೀವು ಮಾಡ್ತಿರೋದು ಏನು. ಇಲ್ಲಿಯವರಿಗೆ ನೀರು ಕೊಡದೆ, ನೆರೆಯವರಿಗೆ ನೀರು ಕೊಟ್ಟು ಇಲ್ಲಿಯ ರೈತರು ಹುರುಳಿ ಬೆಳೆಯುವಂತೆ ಮಾಡಿದ್ದೀರಿ ಎಂದು ಕಿಡಿಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+