ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೆಲುವರಾಯಸ್ವಾಮಿ ಬಿಜೆಪಿ ಸೇರೋದು ಪಕ್ಕಾ: ಸುರೇಶ್ ಗೌಡ ಹೇಳಿಕೆ

|
Google Oneindia Kannada News

ಮಂಡ್ಯ, ಜೂನ್ 10: ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದ ನಂತರ 'ಸತ್ತ ಕುದುರೆಗಳು ಮಾತನಾಡುತ್ತಿವೆ' ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ವಿರುದ್ದ ಟೀಕಾ ಪ್ರಹಾರ ನಡೆಸಿದ್ದ ನಾಗಮಂಗಲ ಶಾಸಕ ಸುರೇಶ್ ಗೌಡ, ಸೋಮವಾರ ಮತ್ತೆ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಪಕ್ಷವನ್ನು ಟೀಕಿಸುವುದೇ ಅವರ ಕಾಯಕ, ಕಾಂಗ್ರೆಸ್ ನಲ್ಲಿದ್ದು ಕೊಂಡು ಆ ಪಕ್ಷಕ್ಕೇ ದ್ರೋಹ ಬಗೆಯುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಚೆಲುವರಾಯಸ್ವಾಮಿ ಬಿಜೆಪಿ ಸೇರಲು ಸರ್ವಸಿದ್ದತೆ ಮಾಡಿಕೊಂಡಿದ್ದು, ಈಗಾಗಲೇ ಒಂದು ಕಾಲನ್ನು ಹೊರಗಿಟ್ಟಾಗಿದೆ ಎಂದು ಸುರೇಶ್ ಗೌಡ ಹೇಳಿದ್ದಾರೆ.

ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ : ಚಲುವರಾಯಸ್ವಾಮಿಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ : ಚಲುವರಾಯಸ್ವಾಮಿ

ಈ ಹಿಂದೆ, ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡಿದ್ದಾಗ, ಅದನ್ನು ಹಾಡಿಹೊಗಳಿದ್ದ ಚೆಲುವರಾಯಸ್ವಾಮಿಗೆ ಈಗ ಅದು ನಾಟಕ ಎನಿಸುತ್ತಿದೆ ಎಂದು ಸುರೇಶ್ ಗೌಡ ತಿರುಗೇಟು ನೀಡಿದ್ದಾರೆ.

Former Nagamangala MLA Cheluvarayaswamy soon will join BJP: Suresh Gowda statement

ಕಾಂಗ್ರೆಸ್ ಪಕ್ಷದ ನೆಮ್ಮದಿಯನ್ನು ಹಾಳು ಮಾಡಿದ ಅಪಕೀರ್ತಿ ಚೆಲುವರಾಯಸ್ವಾಮಿಗೆ ಸಲ್ಲಬೇಕು. ಕುಮಾರಣ್ಣ ಅಥವಾ ಅಪ್ಪಾಜಿ (ದೇವೇಗೌಡ್ರು) ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದು ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದರೆ 10 ಸೀಟು ಗೆಲ್ಲುತ್ತಿತ್ತು : ಚಲುವರಾಯಸ್ವಾಮಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದರೆ 10 ಸೀಟು ಗೆಲ್ಲುತ್ತಿತ್ತು : ಚಲುವರಾಯಸ್ವಾಮಿ

ಕಾಂಗ್ರೆಸ್‌-ಜೆಡಿಎಸ್ ಹಾರ್ಟ್ ಟು ಹಾರ್ಟ್ ಸೇರಿ ಜನಪರವಾದ ಕೆಲಸ ಮಾಡಿಕೊಂಡು ಹೋಗಿದ್ದರೆ ಸರಿ ಆಗುತ್ತಿತ್ತು. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂತಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ 8 ರಿಂದ 10 ಸೀಟು ನಾವು ಗೆಲ್ಲಬಹುದಿತ್ತು ಎಂದು ಚೆಲುವರಾಯಸ್ವಾಮಿ ಹೇಳಿದ್ದರು.

ಗ್ರಾಮ ವಾಸ್ತವ್ಯದಿಂದ ಯಾವುದೇ ಬದಲಾವಣೆಗಳೂ ಆಗದು. ಸಂಕಷ್ಟದಲ್ಲಿ ಇರುವವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮ ಮಾಡಬೇಕು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ರಾಜಕೀಯ ಸ್ಟಂಟ್ ಎಂದು ಇತ್ತೀಚೆಗೆ ಚೆಲುವರಾಯಸ್ವಾಮಿ ಲೇವಡಿ ಮಾಡಿದ್ದರು.

English summary
Former Nagamangala MLA Cheluvarayaswamy soon will join BJP: Present MLA Suresh Gowda statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X