ಸಾಲಬಾಧೆ: ಮಂಡ್ಯದಲ್ಲಿ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ
ಮಂಡ್ಯ, ಸೆಪ್ಟೆಂಬರ್ 22: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಸಾಲಬಾಧೆ ಕಿರುಕುಳ ತಾಳಲಾರದೆ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ನಂದೀಶ್ ಎಂಬಾತನ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಕ್ಕಳಿಗೆ ವಿಷಯ ಉಣಿಸಿ ಬಳಿಕ ತಾವು ವಿಷ ಕುಡಿದು ಸಾವಿಗೆ ಶರಣಾಗಿದ್ದಾರೆ. ನಂದೀಶ್ (35) ಪತ್ನಿ ಕೋಮಲಾ (28) ಚಂದನ್ (10) ಮನು(13) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 5 ಲಕ್ಷ ಸಾಲ ಮಾಡಿದ್ದ ಎನ್ನಲಾಗಿದೆ.

ಎರಡು ಬಾರಿ ಜನತಾ ದರ್ಶನದಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಮನನೊಂದು ತಮ್ಮ ತೋಟದಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications