ಆಗಸ್ಟ್ 18, 19ರಂದು ಭರಚುಕ್ಕಿ ಜಲಪಾತೋತ್ಸವ
ಮಂಡ್ಯ, ಜುಲೈ 27 : 10 ಕೋಟಿ ರೂ. ವೆಚ್ಚದಲ್ಲಿ ಭರಚುಕ್ಕಿ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ. ಆ.18 ಮತ್ತು 19ರಂದು ಭರಚುಕ್ಕಿ ಜಲಪಾತೋತ್ಸವ ಆಯೋಜಿಸಲು ನಿರ್ಧರಿಸಲಾಗಿದೆ.
ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭರಚುಕ್ಕಿ ಜಲಪಾತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, 'ಬಜೆಟ್‌ನಲ್ಲಿ ಜಲಪಾತದ ಸುತ್ತಮುತ್ತಲಿನ ಅಭಿವೃದ್ಧಿಗೆ 2.5 ಕೋಟಿ ಹಂಚಿಕೆ ಮಾಡಲಾಗಿದೆ' ಎಂದರು.
'ಸತ್ತೇಗಾಲ ಹ್ಯಾಂಡ್ ಪೋಸ್ಟ್‌ನಿಂದ ಜಲಪಾತದ ತನಕ 1.5 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರವಾಸಿಗರು ಜಲಪಾತ ವೀಕ್ಷಣೆಗೆ ಅನುಕೂಲವಾಗುವಂತೆ. ಮೇಲಂತಸ್ತುಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ' ಎಂದು ಸಚಿವರು ಹೇಳಿದರು.

ಜಲಪಾತೋತ್ಸವ : 'ಭರಚುಕ್ಕಿ ಜಲಪಾತೋತ್ಸವವನ್ನು ಆಸಗ್ಟ್ 18 ಮತ್ತು 19ರಂದು ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಉತ್ಸವಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ' ಎಂದು ಸಾ.ರಾ.ಮಹೇಶ್ ಹೇಳಿದರು.

ವೆಸ್ಲಿ ಸೇತುವೆ ಅಭಿವೃದ್ಧಿ : 'ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಹಾನಿಯಾಗಿರುವ ವೆಸ್ಲಿ ಸೇತುವೆಯನ್ನು ದುರಸ್ತಿ ಮಾಡುವುದಾಗಿ' ಸಾ.ರಾ.ಮಹೇಶ್ ಹೇಳಿದರು. 'ಸೇತುವೆ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿದೆ. ಸೇತುವೆ ದುರಸ್ತಿಗೆ ಸುಮಾರು 1 ಕೋಟಿ ವೆಚ್ಚವಾಗುವ ನಿರೀಕ್ಷೆ' ಇದೆ ಎಂದು ಸಚಿವರು ತಿಳಿಸಿದರು.












Click it and Unblock the Notifications