ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗಸ್ಟ್ 18, 19ರಂದು ಭರಚುಕ್ಕಿ ಜಲಪಾತೋತ್ಸವ

By Gururaj
|
Google Oneindia Kannada News

ಮಂಡ್ಯ, ಜುಲೈ 27 : 10 ಕೋಟಿ ರೂ. ವೆಚ್ಚದಲ್ಲಿ ಭರಚುಕ್ಕಿ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ. ಆ.18 ಮತ್ತು 19ರಂದು ಭರಚುಕ್ಕಿ ಜಲಪಾತೋತ್ಸವ ಆಯೋಜಿಸಲು ನಿರ್ಧರಿಸಲಾಗಿದೆ.

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭರಚುಕ್ಕಿ ಜಲಪಾತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, 'ಬಜೆಟ್‌ನಲ್ಲಿ ಜಲಪಾತದ ಸುತ್ತಮುತ್ತಲಿನ ಅಭಿವೃದ್ಧಿಗೆ 2.5 ಕೋಟಿ ಹಂಚಿಕೆ ಮಾಡಲಾಗಿದೆ' ಎಂದರು.

ಹಸಿರು ಸಿರಿಯ ನಡುವೆ ಕಂಗೊಳಿಸುತ್ತಿದೆ ಅಡ್ಯಾರ್ ಜಲಪಾತ ಹಸಿರು ಸಿರಿಯ ನಡುವೆ ಕಂಗೊಳಿಸುತ್ತಿದೆ ಅಡ್ಯಾರ್ ಜಲಪಾತ

'ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ನಿಂದ ಜಲಪಾತದ ತನಕ 1.5 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರವಾಸಿಗರು ಜಲಪಾತ ವೀಕ್ಷಣೆಗೆ ಅನುಕೂಲವಾಗುವಂತೆ. ಮೇಲಂತಸ್ತುಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ' ಎಂದು ಸಚಿವರು ಹೇಳಿದರು.

Gaganachukki Jalapatha Utsava on August 18, 19

ಜಲಪಾತೋತ್ಸವ : 'ಭರಚುಕ್ಕಿ ಜಲಪಾತೋತ್ಸವವನ್ನು ಆಸಗ್ಟ್ 18 ಮತ್ತು 19ರಂದು ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಉತ್ಸವಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ' ಎಂದು ಸಾ.ರಾ.ಮಹೇಶ್ ಹೇಳಿದರು.

ಪ್ರವಾಸಿಗರನ್ನು ಕೈ ಬೀಸಿ ಕರೆಯುತಿದೆ ಹಾಲ್ನೊರೆಯ ಅರ್ಬಿಫಾಲ್ಸ್ ಪ್ರವಾಸಿಗರನ್ನು ಕೈ ಬೀಸಿ ಕರೆಯುತಿದೆ ಹಾಲ್ನೊರೆಯ ಅರ್ಬಿಫಾಲ್ಸ್

Gaganachukki Jalapatha Utsava on August 18, 19

ವೆಸ್ಲಿ ಸೇತುವೆ ಅಭಿವೃದ್ಧಿ : 'ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಹಾನಿಯಾಗಿರುವ ವೆಸ್ಲಿ ಸೇತುವೆಯನ್ನು ದುರಸ್ತಿ ಮಾಡುವುದಾಗಿ' ಸಾ.ರಾ.ಮಹೇಶ್ ಹೇಳಿದರು. 'ಸೇತುವೆ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿದೆ. ಸೇತುವೆ ದುರಸ್ತಿಗೆ ಸುಮಾರು 1 ಕೋಟಿ ವೆಚ್ಚವಾಗುವ ನಿರೀಕ್ಷೆ' ಇದೆ ಎಂದು ಸಚಿವರು ತಿಳಿಸಿದರು.

English summary
The two-day Jalapatha Utsava will be held on Barachukki and Gaganachukki falls near Malavalli in Mandya district on August 18 and 19, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X