• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡ್ಯದ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ

|

ಮಂಡ್ಯ, ಮಾರ್ಚ್ 6: ಸಿಲಿಂಡರ್ ಸ್ಫೋಟಗೊಂಡು ಮನೆಯೇ ಹೊತ್ತಿ ಉರಿದಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಬಡಾವಣೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಗು ಸಾವು

ಬಡಾವಣೆಯ ನಿವಾಸಿ ಅರ್ಜುನ್ ಕುಮಾರ್ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ವೃತ್ತಿಯಲ್ಲಿ ಅರ್ಜುನ್ ಅವರು ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಗರದಲ್ಲಿ ಸಿಲಿಂಡರ್ ಸಾಗಣೆ ಲಾರಿ ಸ್ಫೋಟ, ಚಾಲಕ ಸಜೀವ ದಹನ

ಮನೆಯಲ್ಲಿ ಸಿಲಿಂಡರ್ ಇಟ್ಟಿರುವ ಜಾಗ, ಅಡುಗೆ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಸಿಲಿಂಡರ್ ಸ್ಫೋಟದ ಶಬ್ದ ಕೇಳುತ್ತಿದ್ದಂತೆಯೇ ಎಲ್ಲರೂ ಮನೆಯಿಂದ ಹೊರಗೆ ಬಂದಿದ್ದಾರೆ ಹಾಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮುಂಜಾನೆ ಸುಮಾರು 4 ಗಂಟೆ ಹೊತ್ತಿಗೆ ಮನೆಯಲ್ಲಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಅಗ್ನಿ ಶಮನ ಕಾರ್ಯಾಚರಣೆ ನಡೆಸುತ್ತಿದ್ದಾರೆ ಸದ್ಯ ಘಟನೆ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Gas Cylinder blast in Srirangapattana layout of Mandya district, family members are safe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X