ಸುಮಲತಾ ಪರ ನಿಂತ ಯುವ ಕಾಂಗ್ರೆಸ್ ನ 6 ಪದಾಧಿಕಾರಿಗಳ ಉಚ್ಛಾಟನೆ

ಮಂಡ್ಯ, ಮಾರ್ಚ್ 24: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾರ ಪರವಾಗಿ ನಿಂತಿದ್ದ ಯುವ ಕಾಂಗ್ರೆಸ್ಸಿಗರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.

ಇದೀಗ ಯುವ ಕಾಂಗ್ರೆಸ್ ನ 6 ಪದಾಧಿಕಾರಿಗಳ ಉಚ್ಛಾಟನೆ ಮಾಡಿ, ಯುವ ಕಾಂಗ್ರೆಸ್ಸಿನ ರಾಜ್ಯ ಕಾರ್ಯದರ್ಶಿ ಗೀತಾ ರಾಜಣ್ಣ ಆದೇಶ ಹೊರಡಿಸಿದ್ದಾರೆ.

ಯುವ ಕಾಂಗ್ರೆಸ್ ನ ಜಿಲ್ಲಾ ಉಪಾಧ್ಯಕ್ಷ ಅರವಿಂದ್ ಕುಮಾರ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್, ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಶರತ ರಾಮಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಜಯ್ ಕುಮಾರ್, ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಕೃಷ್ಣೇಗೌಡ, ಮಳವಳ್ಳಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.

Gita Rajanna has issued orders to suspended six office bearers in Mandya

ಶುಕ್ರವಾರ ಮುಖಂಡ ಸಚ್ಚಿದಾನಂದ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಉಚ್ಛಾಟನೆಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚ್ಚಿದಾನಂದ್, ನನ್ನಂತಹ ಲಕ್ಷಾಂತರ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುತ್ತಾರೆ. ಅವರನ್ನೂ ಉಚ್ಛಾಟನೆ ಮಾಡಿ ಪಕ್ಷಕ್ಕೆ ಬೀಗ ಜಡಿಯುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+