Get Updates
Get notified of breaking news, exclusive insights, and must-see stories!

ಆದೇಶ ಉಲ್ಲಂಘನೆ: ಮುಜುಗರ ತಪ್ಪಿಸಿಕೊಳ್ಳಲು ಸಭೆ ರದ್ದುಪಡಿಸಿದ ಮಂಡ್ಯ ಸಂಸದೆ ಸುಮಲತಾ

ಮಂಡ್ಯ, ನವೆಂಬರ್‌, 19: ದಿಶಾ ಸಭೆಯನ್ನು ಹೊರತುಪಡಿಸಿ ಇತರೆ ಸರ್ಕಾರದ ಅಧಿಕಾರಿಗಳ ಸಭೆ ನಡೆಸಲು ಸಂಸದರಿಗೆ ಅಧಿಕಾರವಿಲ್ಲ. ಸರ್ಕಾರಿ ಆದೇಶ ಉಲ್ಲಂಘನೆ ಆಗುವುದನ್ನು ಮನಗಂಡ ಸಂಸದೆ ಸುಮಲತಾ ಅಂಬರೀಶ್ ಅವರು ಕೊನೇ ಗಳಿಗೆಯಲ್ಲಿ ನರೇಗಾ ಅನುಷ್ಠಾನಾಧಿಕಾರಿಗಳ ಸಭೆಯನ್ನು ರದ್ದುಪಡಿಸಿ ಮುಜುಗರಕ್ಕೀಡಾದರು.

ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ ನರೇಗಾ ಅನುಷ್ಠಾನಾಧಿಕಾರಿಗಳ ಸಭೆಯನ್ನು ಕರೆದಿದ್ದರು. ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊರತುಪಡಿಸಿ ಉಳಿದ ಯಾವ ಜನಪ್ರತಿನಿಧಿಗಳಿಗೂ ಅಧಿಕಾರವಿರಲಿಲ್ಲ. ಇದನ್ನು ಅರಿತ ಸಂಸದೆ ಸುಮಲತಾ ಸಭೆಯನ್ನು ರದ್ದುಪಡಿಸಿದರು. ವಾಸ್ತವದಲ್ಲಿ ನರೇಗಾ ಯೋಜನೆಯ ಅನುಷ್ಠಾನ ಕುರಿತಂತೆ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸುವುದಕ್ಕೆ ಸಂಸದರಿಗೆ ಅಧಿಕಾರವೇ ಇಲ್ಲ. ಸಂಸದರ ಅಧ್ಯಕ್ಷತೆಯಲ್ಲಿ ನಡೆಯುವ ಕೇಂದ್ರ ಪುರಸ್ಕೃತ ಯೋಜನೆಗಳ ಸಭೆಯಲ್ಲೇ ನರೇಗಾ, ಜಲಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ಅನುಷ್ಠಾನ, ಪ್ರಗತಿಯ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಸಂಸದರಿಗೆ ಅವಕಾಶವಿದೆ.

ಸರ್ಕಾರದ ಆದೇಶವನ್ನೇ ತಿಳಿಯದೆ ಸಂಸದೆ ಸುಮಲತಾ ಅಂಬರೀಶ್ ಶುಕ್ರವಾರ ನರೇಗಾ ಯೋಜನೆ ಅನುಷ್ಠಾನಾಧಿಕಾರಿಗಳ ಸಭೆಯನ್ನು ಕರೆದಿದ್ದರು. ಶಿಷ್ಠಾಚಾರದ ಬಗ್ಗೆ ಸೂಚನೆ ನೀಡಬೇಕಾದ ಮೇಲಾಧಿಕಾರಿಗಳು ನಿಯವನ್ನು ಮರೆತಿದ್ದರು. ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸಂಜೀವಪ್ಪ ಅವರು ಶಿಷ್ಠಾಚಾರ ಮರೆತು ಅಧಿಕಾರಿಗಳ ಸಭೆ ಕರೆದು ಸಂಸದರಿಗೆ ಪರೋಕ್ಷ ಬೆಂಬಲ ಸೂಚಿಸಿದ್ದರು.

ಸುತ್ತೋಲೆಯಲ್ಲಿರುವ ಪ್ರಮುಖ ಅಂಶಗಳೇನು?

ಸುತ್ತೋಲೆಯಲ್ಲಿರುವ ಪ್ರಮುಖ ಅಂಶಗಳೇನು?

ಏಪ್ರಿಲ್ 16, 2019ರಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಶಾಸಕರು, ಖಾಸಗಿ ಪ್ರಮುಖರ ಅಧ್ಯಕ್ಷತೆಯಲ್ಲಿ ಹಲವು ಸಮಿತಿಗಳನ್ನು ನೇಮಕ ಮಾಡಲಾಗಿದೆ. ಆಯಾ ಸಮಿತಿಯ ಕಾರ್ಯವ್ಯಾಪ್ತಿಗೆ ಒಳಪಟ್ಟು ಸಮೀಕ್ಷಾ ಸಭೆಗಳನ್ನು ನಡೆಸಬಹುದು. ಇದನ್ನು ಹೊರತುಪಡಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮೀಕ್ಷಾ ಸಭೆಗಳನ್ನು ನಡೆಸುವಂತಿಲ್ಲ. ವಿರೋಧಪಕ್ಷದ ನಾಯಕರಿಗೂ ಸಹ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಅವಕಾಶವಿಲ್ಲ. ಆದರೆ, ಅಗತ್ಯ ಮಾಹಿತಿಯನ್ನು ಮಾತ್ರ ಒದಗಿಸಬಹುದು. ಅಂತಹ ಸಭೆಗಳನ್ನು ನಡೆಸಲು ಸಚಿವರು ಮತ್ತು ಅಧಿಕಾರಿಗಳಿಗೆ ಮಾತ್ರ ಅವಕಾಶವಿದೆ ಎಂದು ಹೇಳಿದೆ.

ಸಭೆ ಕರೆಯಲು ಅವಕಾಶ ಮಾಡಿಕೊಟ್ಟಿದ್ದೇಕೆ?

ಸಭೆ ಕರೆಯಲು ಅವಕಾಶ ಮಾಡಿಕೊಟ್ಟಿದ್ದೇಕೆ?

ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಹಂತದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಶಿಷ್ಠಾಚಾರದ ಪೂರ್ಣ ತರಬೇತಿ ನೀಡಬೇಕು. ಅಲ್ಲದೇ ಶಿಷ್ಠಾಚಾರ ಲೋಪವಾದ ಪ್ರಕರಣಗಳಲ್ಲಿ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದೆ. ಆದರೂ ಅಧಿಕಾರಿಗಳು ಸಭೆ ಕರೆಯಲು ಅವಕಾಶ ಮಾಡಿಕೊಟ್ಟಿದ್ದು ಏಕೆ? ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಸಂಸದರು ಶಿಷ್ಠಾಚಾರ ಉಲ್ಲಂಘನೆ ಮಾಡುತ್ತಿದ್ದರೂ ಅದನ್ನು ಮನವರಿಕೆ ಮಾಡಿಕೊಡುವ ಕೆಲಸವೂ ಅಧಿಕಾರಿಗಳಿಂದ ನಡೆದಿಲ್ಲ. ಇದೀಗ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದರೂ ಅಧಿಕಾರಿಗಳು ಅದನ್ನು ತಿದ್ದುವ ಪ್ರಯತ್ನವನ್ನೂ ಮಾಡದಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ.

ಸಂಸದೆಯ ಅಧ್ಯಕ್ಷತೆಯಲ್ಲಿ ಸಭೆ

ಸಂಸದೆಯ ಅಧ್ಯಕ್ಷತೆಯಲ್ಲಿ ಸಭೆ

ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ ಅವರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸಂಸದರ ಅಧ್ಯಕ್ಷತೆಯಲ್ಲಿ ಸಭೆ ಕರೆದಿದ್ದಾರೆ. ಇದನ್ನು ಗಮನಿಸಿದರೆ ಸಂಸದರು ಅಧಿಕಾರಿಗಳ ಹಕ್ಕನ್ನು ಮೊಟಕುಗೊಳಿಸಿದ್ದಾರೆಯೇ ಎನ್ನುವ ಅನುಮಾನಗಳು ಕಾಡುತ್ತಿವೆ. ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಹೊರಡಿಸಿರುವ ಸೂಚನಾ ಪತ್ರದಲ್ಲಿ ಈ ಸಭೆ ಸಂಸದರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲರೂ ತಪ್ಪದೇ ಹಾಜರಾಗಬೇಕು ಎಂದು ತಿಳಿಸಿರುವುದು ಸರ್ಕಾರದ ಶಿಷ್ಠಾಚಾರದ ಉಲ್ಲಂಘನೆ ಎಂದೇ ಹೇಳಲಾಗುತ್ತಿದೆ.

ಶಿಷ್ಠಾಚಾರ ಉಲ್ಲಂಘನೆ ಬಗ್ಗೆ ಸಿಇಓ ಮಾಹಿತಿ

ಶಿಷ್ಠಾಚಾರ ಉಲ್ಲಂಘನೆ ಬಗ್ಗೆ ಸಿಇಓ ಮಾಹಿತಿ

ಕೊನೆಗೆ ಸಭೆ ನಡೆಸಲು ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸಿದ ಸಂಸದರಿಗೆ ಶಿಷ್ಠಾಚಾರ ಉಲ್ಲಂಘನೆ ಆಗುತ್ತಿರುವ ಕುರಿತು ಸಿಇಓ ಮನದಟ್ಟು ಮಾಡಿಕೊಟ್ಟಿದ್ದು, ಬಳಿಕ ಸಭೆಯನ್ನು ರದ್ದುಗೊಳಿಸಿದರು. ಸಿಇಓ ಕಚೇರಿಯಲ್ಲೇ ಕುಳಿತು ಸಂಸದೆ ಸುಮಲತಾ ಅಂಬರೀಶ್ ಮಾಹಿತಿ ಪಡೆದುಕೊಂಡು ಹೋಗಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+