• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವೇಗೌಡರ ಹುಟ್ಟುಹಬ್ಬ: ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ

|

ಮಂಡ್ಯ, ಮೇ 18: ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಹಿನ್ನಲೆ ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಕೆ ರಾಧಾಕೃಷ್ಣರ ನೇತೃತ್ವದಲ್ಲಿ ಗೌರವ ಸಮರ್ಪಿಸಲಾಗಿದೆ.

ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ಗೌರವ ಸಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ರಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಕೊರೊನಾ ವಿರುದ್ದ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಗೌರವ ಸಮರ್ಪಣೆ ಮಾಡಲಾಗಿದೆ.

ದೇವೇಗೌಡರ ಜನ್ಮದಿನ: ದೀರ್ಘಾಯುಷ್ಯಕ್ಕಾಗಿ ಗಣ್ಯರ ಪ್ರಾರ್ಥನೆ

ಕೆ.ಕೆ.ರಾಧಾಕೃಷ್ಣ ರಿಂದ ಜಿಲ್ಲಾಧಿಕಾರಿ ಪರಿಹಾರ ನಿಧಿಗೆ 1 ಲಕ್ಷ ಚೆಕ್ ವಿತರಣೆ ಮಾಡಲಾಗಿದೆ. ಆಶಾ ಕಾರ್ಯಕರ್ತರು ಹಾಗೂ ನರ್ಸ್‌ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಂಡ್ಯ ಡಿಸಿ ಡಾ.ವೆಂಕಟೇಶ್, ಡಿಎಚ್ಒ ಮಂಚೇಗೌಡ ಇತರರು ಭಾಗಿಯಾಗಿದ್ದರು.

ಬೆಂಗಳೂರಿನಲ್ಲಿ ಜೆಡಿಎಸ್‌ ಕಾರ್ಯಕರ್ತರು ರಕ್ತದಾನ ಶಿಬಿರ ನಡೆಸಿದ್ದಾರೆ. ಕೊರೊನಾ ವೈರಸ್‌ ಭೀತಿಯಿಂದ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಮನೆ ಬಳಿ ಬಾರದಂತೆ ಮನವಿ ದೇವೇಗೌಡರು ಮನವಿ ಮಾಡಿದ್ದಾರೆ.

ಅಂದಹಾಗೆ, ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಟ್ವಿಟ್ಟರ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ.

English summary
EX PM HD Devegowd's birthday celebrated in mandya. Mask and sanitizer distributed to Asha workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X