ನಾಗಮಂಗಲದಲ್ಲಿ ಶಕ್ತಿ ಪ್ರದರ್ಶನ ಮಾಡಿದ ಜೆಡಿಎಸ್

ಮಂಡ್ಯ, ಮಾರ್ಚ್ 30 : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆಯಿತು. ಕುಮಾರಪರ್ವ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕ್ಷೇತ್ರದಿಂದ ಸುರೇಶ್ ಗೌಡ ಅವರು 2018ರ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಶುಕ್ರವಾರ ನಾಗಮಂಗಲದಲ್ಲಿ ನಡೆದ ಕುಮಾರ ಪರ್ವ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಎಲ್‌.ಆರ್.ಶಿವರಾಮೇಗೌಡ ಸೇರಿದಂತೆ ಹಲವು ಪಾಲ್ಗೊಂಡಿದ್ದರು.

2013ರ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಲ್ಲಿ ಎನ್.ಚೆಲುವರಾಯಸ್ವಾಮಿ ಗೆಲುವು ಸಾಧಿಸಿದ್ದರು. ಈ ಅವರು ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುರೇಶ್ ಗೌಡ ಅವರನ್ನು 2018ರ ಚುನಾವಣೆಗೆ ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ.

HD Kumaraswamy address Kumara Parva rally in Nagamangala

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ನಾನು ಮುಖ್ಯಮಂತ್ರಿಯಾಗಲು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡುತ್ತಿಲ್ಲ' ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಭಾಷಣದ ಮುಖ್ಯಾಂಶಗಳು

* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಸಾಲ ಮನ್ನಾ ಘೋಷಣೆ ಮಾಡಿದರು. ಆದರೆ, 8160 ಕೋಟಿ ಹಣವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಜೂನ್ 18ಕ್ಕೆ ಹಣ ಬಿಡುಗಡೆ ಮಾಡುವೆ ಎಂದು ಹೇಳುತ್ತಿದ್ದಾರೆ. ಆದರೆ, ಮೇ 15ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ

* ಸಿದ್ದರಾಮಯ್ಯ ಅವರ ನಾಟಕ ಎಲ್ಲರಿಗೂ ತಿಳಿದಿದೆ. ಪ್ರತಿ ಗ್ರಾಮದಲ್ಲಿಯೂ ಯುಕವರು, ಮಹಿಳೆಯರು ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಹೇಳುತ್ತಿದ್ದಾರೆ.

* ರೈತರಿಗೆ, ಬಡವರಿಗೆ, ಯುವಕರಿಗೆ ಯಾವ ಸೌಲಭ್ಯಗಳು ಬೇಕು ಎಂದು ಚರ್ಚೆ ನಡೆಯುತ್ತಿದೆ. ಗ್ರಾಮ ಗ್ರಾಮದಲ್ಲಿ ಜನರು ನನ್ನ ಕೈಗೆ ಚೀಟಿ ತಂದು ಕೊಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+