ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಲುಕೋಟೆ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಮುಖ್ಯಮಂತ್ರಿ ಸೂಚನೆ

|
Google Oneindia Kannada News

ಮಂಡ್ಯ, ನವೆಂಬರ್ 23: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ, ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀಲನಕ್ಷೆ ತಯಾರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಮೇಲುಕೋಟೆ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಮೇಲುಕೋಟೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇಲುಕೋಟೆಯ ಅಭಿವೃದ್ಧಿಯಿಂದ ಯುವಜನರಿಗೆ ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ. ಜತೆಗೆ ಮೇಲುಕೋಟೆಗೆ ಆರ್ಥಿಕ ಸಂಪನ್ಮೂಲ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ಆದ್ದರಿಂದ, ಈ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಿದರು.

ಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆ

ಮೇಲುಕೋಟೆ ವ್ಯಾಪ್ತಿಯಲ್ಲಿ ಹಲವು ಪ್ರವಾಸಿತಾಣ, ಪುರಾಣಪ್ರಸಿದ್ಧ ದೇವಾಲಯ, ಸ್ಮಾರಕಗಳಿವೆ. ಇವುಗಳನ್ನು ಅಭಿವೃದ್ಧಿಪಡಿಸಬೇಕಿದೆ.

ಜತೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಜತೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಜತೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ಅವರಿಗೆ ಮೂಲ ಸೌಲಭ್ಯ ಒದಗಿಸಿಕೊಡಬೇಕು.

ಈ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು, ವಾಸ್ತವ್ಯಕ್ಕೆ ವ್ಯವಸ್ಥೆ, ಶೌಚಗೃಹ ಸೇರಿದಂತೆ ಪ್ರಮುಖ ಸೌಲಭ್ಯ ಮಾಡಬೇಕೆಂದು ನಿರ್ದೇಶನ ನೀಡಿದರು.

ಅಪಪ್ರಚಾರಕ್ಕೆ ಕಿವಿಗೊಡಬೇಡಿ, ಸಾಲಮನ್ನಾ ಮಾಡೇ ಮಾಡ್ತೀನಿ: ಸಿಎಂಅಪಪ್ರಚಾರಕ್ಕೆ ಕಿವಿಗೊಡಬೇಡಿ, ಸಾಲಮನ್ನಾ ಮಾಡೇ ಮಾಡ್ತೀನಿ: ಸಿಎಂ

ಇನ್ನು ಪ್ರಮುಖವಾಗಿ ದೇವಾಲಯ

ಇನ್ನು ಪ್ರಮುಖವಾಗಿ ದೇವಾಲಯ

ಇನ್ನು ಪ್ರಮುಖವಾಗಿ ದೇವಾಲಯ, ಕಲ್ಯಾಣಿಗಳ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವಾಹನಗಳ ಪಾರ್ಕಿಂಗ್‍ಗೆ ವ್ಯವಸ್ಥೆ ಮಾಡಬೇಕು. ದೇವಾಲಯಕ್ಕೆ ತೆರಳಲು ಅನುಕೂಲವಾಗುವಂತೆ ಪಾದಚಾರಿ ಮಾರ್ಗವಿರುವಂತೆ ಮಾಡಬೇಕು.

ಸಾರ್ವಜನಿಕ ಸ್ಥಳದಲ್ಲಿ ಮಾಹಿತಿ ಫಲಕ ಅಳವಡಿಸುವುದರ ಜತೆಗೆ ಮಾಹಿತಿ ಕೇಂದ್ರ ತೆರೆಯಬೇಕು. ಯಾತ್ರಿ ನಿವಾಸದ ಪುನಶ್ಚೇತನ, ದೇವಾಲಯದ ಸಮೀಪ ಅನ್ನದಾಸೋಹಕ್ಕೆ ಅನುಕೂಲವಾಗುವಂತೆ ಕೇಂದ್ರ ತೆರೆಯುವ ಸಂಬಂಧ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೆ ಶೀಘ್ರ ಡೀಮ್ಡ್ ವಿವಿ ಮಾನ್ಯತೆ: ಸಿಎಂ ಭರವಸೆಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೆ ಶೀಘ್ರ ಡೀಮ್ಡ್ ವಿವಿ ಮಾನ್ಯತೆ: ಸಿಎಂ ಭರವಸೆ

ಮೇಲುಕೋಟೆ ವ್ಯಾಪ್ತಿಯಲ್ಲಿ 15 ರಾಜ್ಯ ಸಂರಕ್ಷಿತ ಸ್ಮಾರಕ

ಮೇಲುಕೋಟೆ ವ್ಯಾಪ್ತಿಯಲ್ಲಿ 15 ರಾಜ್ಯ ಸಂರಕ್ಷಿತ ಸ್ಮಾರಕ

ಮೇಲುಕೋಟೆ ವ್ಯಾಪ್ತಿಯಲ್ಲಿ 15 ರಾಜ್ಯ ಸಂರಕ್ಷಿತ ಸ್ಮಾರಕ, ಒಂದು ಕೇಂದ್ರ ಸಂರಕ್ಷಿತ ಸ್ಮಾರಕ, 105 ಆರಕ್ಷತಾ ಮಂಟಪ ಮತ್ತು ಕೊಳವೆ ಇದ್ದು, ಇವುಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು.

ಅಂತೆಯೇ, ಘನ ಮತ್ತು ದ್ರವ ತ್ಯಾಜ್ಯಗಳನ್ನು ಸೂಕ್ತ ವಿಲೇವಾರಿ ಮಾಡಲು ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಇತರೆ ಇಲಾಖೆಗಳು ಪ್ರವಾಸೋಧ್ಯಮ ಇಲಾಖೆಯೊಂದಿಗೆ ಸಹಕಾರ ನೀಡಬೇಕು. ಇನ್ನು ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಬೇಕು.

ಸಾಯುವ ಮುನ್ನಾ ಮುಖ್ಯಮಂತ್ರಿಗೆ ಮಂಡ್ಯದ ರೈತ ಬರೆದ ಭಾವುಕ ಪತ್ರಸಾಯುವ ಮುನ್ನಾ ಮುಖ್ಯಮಂತ್ರಿಗೆ ಮಂಡ್ಯದ ರೈತ ಬರೆದ ಭಾವುಕ ಪತ್ರ

ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನಿರ್ಮಾಣ ಮಾಡುವ

ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನಿರ್ಮಾಣ ಮಾಡುವ

ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನಿರ್ಮಾಣ ಮಾಡುವ ಸಂಬಂಧ ಕ್ರಮ ವಹಿಸುವಂತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್, ಶಾಸಕರುಗಳಾದ ಶ್ರೀನಿವಾಸ್, ನಾರಾಯಣ ಸ್ವಾಮಿ, ಸುರೇಶ್ ಗೌಡ, ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

English summary
Chief Minister HD Kumaraswamy directed officers to draft a blue print to comprehensive development of Melukote in Mandya district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X