ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ
Recommended Video

ಬೆಂಗಳೂರು, ಜನವರಿ 11: ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಕುಮಾರಸ್ವಾಮಿ ಅವರ ಮಾತುಗಳು ಈ ಅನುಮಾನ ಮೂಡಲು ಕಾರಣವಾಗಿವೆ.
ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂಬ ಒತ್ತಡ ಇದೆ ಎಂದು ಸ್ವತಃ ಕುಮಾರಸ್ವಾಮಿ ಅವರೇ ಮಾಧ್ಯಮಗಳಿಗೆ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆ ಬೇಡವೇ ಎಂಬುದನ್ನು ದೇವೇಗೌಡ ಅವರು ನಿರ್ಣಯಿಸುತ್ತಾರೆ ಆದರೆ ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸಬೇಕು ಎಂಬ ಒತ್ತಡ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ದೇವೇಗೌಡ ಅವರು ತಮ್ಮ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಡುವುದಾಗಿ ಈಗಾಗಲೇ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಈಗಾಗಲೇ ಕ್ಷೇತ್ರದಲ್ಲಿ ಓಡಾಟವನ್ನೂ ಪ್ರಾರಂಭಿಸಿದ್ದಾರೆ.
ರೇವಣ್ಣ ಮಗನಿಗೆ ಟಿಕೆಟ್ ಪಕ್ಕಾ ಆಗುತ್ತಿದ್ದಂತೆ ಇತ್ತ ಕುಮಾರಸ್ವಾಮಿ ಮಗ ನಿಖಿಲ್ ಸಹ ಚುನಾವಣೆ ರಾಜಕೀಯಕ್ಕೆ ಧುಮುಕುವ ಸಾಧ್ಯತೆ ದಟ್ಟವಾಗಿದೆ. ನಿಖಿಲ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಪಕ್ಕಾ ಆದಲ್ಲಿ ದೇವೇಗೌಡರ ಕುಟುಂಬದಲ್ಲಿ ಒಟ್ಟು ಐದು ಮಂದಿ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾದಂತಾಗುತ್ತದೆ.
ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದಲ್ಲಿ ಪ್ರಸ್ತುತ ಜೆಡಿಎಸ್ ಸಂಸದ ಶಿವರಾಮೇಗೌಡ ಅವರಿಗೆ ಟಿಕೆಟ್ ಇಲ್ಲದಾಗುತ್ತದೆ. ಇದಕ್ಕೆ ಅವರು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ.












Click it and Unblock the Notifications