HD Kumaraswamy: ಮಗನನ್ನು ಸೋಲಿಸಿದ ಸೇಡು ತೀರಿಸಿಕೊಂಡ ಅಪ್ಪ- ಮಂಡ್ಯದಲ್ಲಿ ಗೆದ್ದ ತೆನೆ ಹೊತ್ತ ಮಹಿಳೆ
ಮಂಡ್ಯ ಜೂನ್ 5: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ 2.82 ಲಕ್ಷ ಮತಗಳಿಂದ ಜಯ ಸಾಧಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಮಗನ ಸೋಲಿನ ಸೇಡು ತೀರಿಸಿಕೊಳ್ಳುವಲ್ಲಿ ಹೆಚ್‌ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.
ಅಲ್ಲದೆ ಮಂಡ್ಯದಲ್ಲಿ ನಟ ಅಂಬರೀಷ್ ಅವರ ದಾಖಲೆಯನ್ನು ಭಗ್ನ ಮಾಡಿದ್ದಾರೆ. 2024ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ 2.82 ಲಕ್ಷ ಮತಗಳ ಆಂತರದಿಂದ ಜಯಭೇರಿ ಬಾರಿಸಿದ್ದಾರೆ. ಕುಮಾರಸ್ವಾಮಿ ಒಟ್ಟು 8,15,881 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು 5,67,261 ಮತಗಳನ್ನು ಗಳಿಸಿ ಪರಾಭವಗೊಂಡರು.

ಮಂಡ್ಯದಲ್ಲಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಹೆಚ್‌ಡಿ ಕುಮಾರಸ್ವಾಮಿ, 2019ರಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಜೊತೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅನ್ನು ಹೀನಾಯವಾಗಿ ಸೋಲಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಇಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ಇದರಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ರಾಜ್ಯದ ಸಿರಿವಂತ ಅಭ್ಯರ್ಥಿಗಳಾದ ಸ್ಟಾರ್ ಚಂದ್ರು ನಡುವೆಯೇ ನೇರ ಹಣಾಹಣಿ ಏರ್ಪಟ್ಟಿತ್ತು.
ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಮೊದಲ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಗೆಲುವಿನ ಪಣ ತೊಟ್ಟಿದ್ದರು. ಅವರ ಪರ ಕಾಂಗ್ರೆಸ್ ಅಬ್ಬರದ ಪ್ರಚಾರವನ್ನೂ ನಡೆಸಿತ್ತು. ಸುಮಲತಾ ಜೊತೆಗಿದ್ದ ನಟ ದರ್ಶನ್ ಸಹ ಚಂದ್ರು ಪರವಾಗಿ ಪ್ರಚಾರ ಮಾಡಿದ್ದರು.
ಮಂಡ್ಯ ಜಿದ್ದಾಜಿದ್ದಿನ ಕಣ
ಹಾಗೆ ನೋಡಿದರೆ ಕಳೆದ ಚುನಾವಣೆಯಲ್ಲಿಯೂ ಮಂಡ್ಯ ಜಿದ್ದಾಜಿದ್ದಿನ ಕಣವಾಗಿತ್ತು. 2019ರಲ್ಲಿ ಇಲ್ಲಿ ನಟ, ದಿವಂಗತ ಅಂಬರೀಶ್ ಪತ್ನಿ, ಸ್ಟಾರ್ ನಟಿ ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರು. ಆದರೆ, ಇದರಲ್ಲಿ ಸುಮಲತಾ ಜಯಭೇರಿ ಬಾರಿಸಿದ್ದರು.ಈ ಚುನಾವಣೆಯಲ್ಲಿ 7,03,660 ಮತಗಳನ್ನು ಪಡೆದಿದ್ದ ಸುಮಲತಾ ಅಂಬರೀಶ್ 1,25,876 ಮತಗಳ ಭಾರೀ ಅಂತರದಿಂದ ನಿಖಿಲ್ ಕುಮಾರಸ್ವಾಮಿಗೆ ಸೋಲುಣಿಸಿದ್ದರು.

ಇದೇ ಕಾರಣಕ್ಕೆ ಈ ಬಾರಿ ಸ್ವತ: ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿದಿದ್ದರು. ಅನಾರೋಗ್ಯದ ನಡುವೆಯೂ ಅವರು ಪ್ರಚಾರದಲ್ಲಿ ಭಾಗವಹಿಸಿ ಮತದಾರರ ಮನದ ಬಾಗಿಲು ತಟ್ಟಿದ್ದರು. ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಕೂಡ ಸಾಕಷ್ಟು ಪ್ರಚಾರ ಮಾಡಿದ್ದರು. ಸ್ಟಾರ್ ಚಂದ್ರು ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಸಾಥ್ ನೀಡಿದ್ದರು. ಆದರೆ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ಮಾಡಿದ್ದರೂ ಮತದಾರರನ್ನು ಸೆಳೆಯಲು ಸಾಧ್ಯವಾಗಲಿಲ್ಲ.
ಇತ್ತ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೂಡ ಹೆಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸಲೇ ಇಲ್ಲ. ಬಿಜೆಪಿಯಿಂದಿಗೆ ಮೈತ್ರಿ ಮಾಡಿಕೊಂಡಿದ್ದ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿಗೆ ಮತ ನೀಡಿ ಎಂದು ಮಂಡ್ಯದಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ್ದರು.
ಮಂಡ್ಯದಲ್ಲಿ ಸವಾಲಾಗಿದ್ದ ಸುಮಲತಾ- ದರ್ಶನ್
ಆದರೆ ಕುಮಾರಸ್ವಾಮಿಗೆ ಮತ ಚಲಾಯಿಸಿ ಎಂದು ಎಲ್ಲೂ ಹೇಳಿಕೊಂಡಿರಲಿಲ್ಲ. ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಸಮುಲತಾ ಅವರಿಗೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಮತ ನೀಡಿ ಎಂದು ಹೇಳುವುದು ಅನಿವಾರ್ಯವಾಗಿತ್ತು. ಅದರೆ ಅವರು ಬಹಿರಂಗವಾಗಿ ನೇರವಾಗಿ ಹೆಚ್‌ಡಿ ಕುಮಾರಸ್ವಾಮಿ ಮತ ನೀಡಿ ಎಮದು ಕೇಳುವ ಬದಲಾಗಿ ಬಿಜೆಪಿಗೆ (ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ) ಮತ ನೀಡಿ ಎಂದು ಮತದಾರರಿಗೆ ಮನವಿ ಮಾಡಿದ್ದರು.
ಇತ್ತ ಸುಮಲತಾ ಪ್ರಚಾರದಲ್ಲಿ ಭಾಗವಹಿಸದೇ ಇರುವುದು, ನಟ ದರ್ಶನ್ ಕೂಡ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗವಹಿಸಿರುವುದು ಎಲ್ಲವೂ ಕುಮಾರಸ್ವಾಮಿಗೆ ಸಾವಾಲಾಗಿತ್ತು. ಇದೆಲ್ಲದರ ನಡುವೆ ಕುಮಾರಸ್ವಾಮಿ ಬಹುಮತದಿಂದ ಗೆದ್ದು ಬೀಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications