HD Kumaraswamy: ನೀರಾವರಿ ಯೋಜನೆಗಳಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ; ಎಚ್‌ಡಿಕೆ
ಮಂಡ್ಯ: ರಾಜ್ಯದ ಕಾವೇರಿ ಸಮಸ್ಯೆ, ಮೇಕೆದಾಟು ಯೋಜನೆಗಿರುವ ತೊಡಕನ್ನು ನಿವಾರಿಸಿ, ಮಹದಾಯಿ, ಕೃಷ್ಣ ಮೇಲ್ದಂಡೆ ಯೋಜನೆಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ಮಂಡ್ಯ ಜಿಲ್ಲೆಯ ಜನರ ಪ್ರೀತಿ-ವಿಶ್ವಾಸವೇ ಕಾರಣ, ನನ್ನನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಬಹುಮತಗಳಿಂದ ಗೆಲ್ಲಿಸಿ, ನಿಮ್ಮ ನಂಬಿಕೆಗೆ ದ್ರೋಹ ಬಗೆಯದೆ ಲೋಕಸಭೆಯಲ್ಲಿ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಕಾವೇರಿ ಉಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಏನು ಎಂಬುದನ್ನು ಜನ ಕೇಳುತ್ತಿದ್ದಾರೆ, ಕೇವಲ ಗ್ಯಾರಂಟಿ ಹೆಸರಿನಲ್ಲಿ ಸೌಲಭ್ಯ ನೀಡಿ ಮತ್ತೆ ಮರಳಿ ಜನರಿಂದಲೇ ಸುಲಿಗೆ ಮಾಡುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.
ಲೋಕಸಭೆ ಚುನಾವಣೆಗೆ ಜಿಲ್ಲೆಯ ನಾಯಕರನ್ನೇ ನಿಲ್ಲಿಸಬೇಕೆಂದುಕೊಂಡಿದ್ದೆ. ಆದರೆ, ನೀವೇ ನಿಲ್ಲಬೇಕೆಂದು ಒತ್ತಡ ಹಾಕಿದರು. ನೀವು ಬರದಿದ್ದರೆ ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ನೇಣಿಗೆ ಶರಣಾಗುವುದಾಗಿ ಹೆದರಿಸಿದರು. ಇದರಿಂದಾಗಿ ಬೇರೆ ದಾರಿ ಕಾಣದೆ ನಾನೇ ನಿಲ್ಲಬೇಕಾಯಿತು ಎಂದರು.
ಸ್ವಾರ್ಥಕ್ಕಾಗಿ ಚುನಾವಣೆಗೆ ನಿಂತಿಲ್ಲ
ವಿರೋಧಿಗಳು ಆರೋಪಿಸುವಂತೆ ನನ್ನ ಕುಟುಂಬ ಅಥವಾ ವೈಯಕ್ತಿಕ ಸ್ವಾರ್ಥಕ್ಕಾಗಿ ನಾನು ಚುನಾವಣೆಗೆ ನಿಂತಿಲ್ಲ, ಬಡವರ ರೈತರ ಪರವಾಗಿ ಕೆಲಸ ಮಾಡಲು ಬಂದಿದ್ದೇನೆ ಎಂಬುದು ನನ್ನ ಜನರಿಗೆ ಗೊತ್ತಿದೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ನೀವು ಕೈಯೊಡ್ಡುವಂತೆ ಮಾಡಿದೆ. ಆದರೆ, ನೀವೇ ಅವರಿಗೆ ಕೊಡುವ ಹಾಗೆ ಮಾಡುವುದೇ ನನ್ನ ಗುರಿ ಎಂದು ಭರವಸೆ ನೀಡಿದರು.
ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ನಿಶ್ಚಿತ. ಅವರ ನೇತೃತ್ವದಲ್ಲಿ ಮಂತ್ರಿಯಾಗಿ, ರೈತರ ಬೆಳೆಗಳಿಗೆ ಸರಿಯಾದ ಬೆಲೆ ಕೊಡಿಸಿ, ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ, ನನ್ನ ಮೇಲೆ ವಿಶ್ವಾಸವಿಡಿ, ಒಂದು ಲಕ್ಷ ಕೋಟಿ ಸಾಲ ತಂದು, ಗ್ಯಾರಂಟಿಗೆ ಬಳಸುತ್ತಿದ್ದರೆ ಮತ್ತೊಂದೆಡೆ ಮದ್ಯದ ದರ ಹೆಚ್ಚಿಸಿ ಜನರಿಂದ ಮರಳಿ ವಸೂಲಿ ಮಾಡಿಕೊಳ್ಳುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ವೈಯಕ್ತಿಕ ಸ್ಥಾನಮಾನಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ. ರೈತರ ಸಮಸ್ಯೆಯನ್ನು ಬಗೆಹರಿಸುವುದಕ್ಕೋಸ್ಕರ ಮೈತ್ರಿ ಮಾಡಿಕೊಂಡಿದ್ದೇನೆ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜನರ ತೆರಿಗೆ ಹಣವನ್ನು ಲೂಟಿ ಮಾಡಿಲ್ಲ. ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳು, ಶಾಲಾ-ಕಾಲೇಜುಗಳನ್ನು ಕಟ್ಟಿಸಿಕೊಂಡು ವ್ಯಾಪಾರ ಮಾಡುತ್ತಿಲ್ಲ. ಚನ್ನಾಂಬಿಕಾ ಕಂಬೈನ್ಸ್ ಅಡಿ ಚಲನಚಿತ್ರಗಳನ್ನು ತಯಾರಿಸಿ, ಅದರಿಂದ ಬಂದ ಲಾಭದ ಹಣದಿಂದ ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಜಮೀನು ತೆಗೆದುಕೊಂಡಿದ್ದೇನೆಯೇ ಹೊರತು, ನಿಮ್ಮ ಹಾಗೆ ಜನರಿಂದ ಲೂಟಿ ಮಾಡಿ ಜನತೆಗೆ ಮೋಸ ಮಾಡಿದವನಲ್ಲ ಎಂದು ಡಿ.ಕೆ.ಶಿವಕುಮಾರ್ ಅವರ ಆರೋಪಗಳಿಗೆ ಉತ್ತರ ನೀಡಿದರು.
ನನ್ನ ಅವಧಿಯಲ್ಲಿ ರೈತರ 28 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೆ ಆದರೆ ನಾನು ಕೇಂದ್ರ ಸರ್ಕಾರದ ಬಳಿ ಕೈ ಚಾಚಿರಲಿಲ್ಲ, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ದೂಷಣೆ ಮಾಡುತ್ತಿರುವ ಕಾಂಗ್ರೆಸ್ಸಿಗರು ದೇಶದಲ್ಲಿ ಸುಮಾರು 40 ರಿಂದ 45 ವರ್ಷ ಆಳ್ವಿಕೆ ಮಾಡಿದಾಗ ಕರ್ನಾಟಕ ರಾಜ್ಯಕ್ಕೆ ಕಾಂಗ್ರೆಸ್ ಕೊಟ್ಟ ಕೊಡುಗೆ ಏನು ಮತ್ತು ಕಾವೇರಿ ಉಳಿವಿಗಾಗಿ ನೀಡಿದ ಕೊಡುಗೆ ಏನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications