ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಭಾರಿ ಮಳೆ: ಸಂಕಷ್ಟದಲ್ಲಿ ಬಡ ಕುಟುಂಬ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಅಕ್ಟೋಬರ್ 9: ಮಂಡ್ಯ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ವರುಣನ ಆರ್ಭಟಕ್ಕೆ ಜಿಲ್ಲೆಯ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಲಕ್ಷಾಂತರ ರುಪಾಯಿ ಮೌಲ್ಯದ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ಅಷ್ಟೇ ಅಲ್ಲದೇ ಭಾರೀ ಮಳೆಯಿಂದಾಗಿ ಬಡ ಕುಟುಂಬವೊಂದು ಪಕ್ಕದ ಮನೆಯ ಛಾವಣಿಯಲ್ಲಿ ಇಡೀ ರಾತ್ರಿ ಕಳೆದಿದೆ.

ಭದ್ರಾವತಿಯಲ್ಲಿ ಭಾರಿ ಮಳೆ; ಹಳೇನಗರದ ಮನೆಗಳಿಗೆ ನುಗ್ಗಿದ ನೀರುಭದ್ರಾವತಿಯಲ್ಲಿ ಭಾರಿ ಮಳೆ; ಹಳೇನಗರದ ಮನೆಗಳಿಗೆ ನುಗ್ಗಿದ ನೀರು

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಮಳೆಯಿಂದ ಬಡ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದ್ದು, ರಾತ್ರಿ ಏಕಾಏಕಿ ಸುರಿದ ಮಳೆಯಿಂದಾಗಿ ಮನೆಗೆ ನೀರು ನುಗ್ಗಿದೆ.

Heavy Rain In Mandya: Poor Family In Distress

ವರುಣ ಆರ್ಭಟಿಸಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಣ್ಣ ಮಕ್ಕಳೊಂದಿಗೆ ಚಳಿಯಲ್ಲಿ ಪಕ್ಕದ ಮನೆಯ ಛಾವಣಿ ಕೆಳಗೆ ರಾತ್ರಿಯೆಲ್ಲಾ ಕಾಲ ಕಳೆದಿದ್ದಾರೆ. ಅಷ್ಟೇ ಅಲ್ಲದೇ ಮನೆಗೆ ನೀರು ನುಗ್ಗಿದ್ದರಿಂದ ದವಸ, ಧಾನ್ಯಗಳು ಸೇರಿ ಮನೆಯಲ್ಲಿದ್ದ ಪದಾರ್ಥಗಳು, ವಸ್ತುಗಳು ನೀರು ಪಾಲಾಗಿದೆ.

ವೃದ್ಧ ಮಹಿಳೆ ನಾವು ಹೇಗೆ ಜೀವನ ಮಾಡುವುದು ಎಂದು ಕಂಗಾಲಾಗಿದ್ದಾರೆ. ಮಳೆಯಿಂದ ಹತ್ತಕ್ಕೂ ಹೆಚ್ಚು ಮರ, ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ. ಕಂಬಗಳು ಬಿದ್ದಿರುವುದರಿಂದ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.

ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಹಲವೆಡೆ ಭಾರಿ ಮಳೆಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಹಲವೆಡೆ ಭಾರಿ ಮಳೆ

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Recommended Video

IPL 2020 | Rajasthanಗೆ ಇದೇ Sharjah ಸ್ಟೇಡಿಯಂನಲ್ಲಿ ಕಡೇಪಂದ್ಯ | Oneindia Kannada

ಕಳೆದ 24 ಗಂಟೆಗಳ ಅವಧಿಯಲ್ಲಿ ಮೈಸೂರಿನ ಕೃಷ್ಣರಾಜಸಾಗರದ ಬಳಿ ಅತ್ಯಧಿಕ 84 ಮಿ.ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

English summary
Heavy rains in Mandya district on Thursday night have caused damage to the houses of in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X