ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಮಳೆ ಅವಾಂತರ; ರಾತ್ರಿಪೂರ್ತಿ ನಿದ್ದೆಬಿಟ್ಟ ಜನ

|
Google Oneindia Kannada News

ಮಂಡ್ಯ, ನವೆಂಬರ್ 14; ಮಂಡ್ಯ, ಚಾಮರಾಜನಗರ, ಮೈಸೂರಿನಲ್ಲಿ ಸುರಿಯುತ್ತಿರುವ ಮಳೆ ಅವಾಂತರಗಳನ್ನು ಸೃಷ್ಟಿ ಮಾಡಿದೆ. ಪಾಂಡವಪುರ ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ತಡರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಗ್ರಾಮಸ್ಥರು ರಾತ್ರಿಪೂರ್ತಿ ನಿದ್ದೆಗೆಡುವಂತಾಯಿತು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲೂಕಿನಲ್ಲಿ ಶನಿವಾರ ಭಾರೀ ಮಳೆಯಾಗಿದೆ. ರಾತ್ರಿ 10 ರಿಂದ ಮುಂಜಾನೆ 3 ಗಂಟೆಯ ತನಕ ಭಾರೀ ಮಳೆ ಸುರಿದಿದೆ. ಶ್ರೀರಂಗಪಟ್ಟಣದಲ್ಲಿ ವಿವಿಧ ಗ್ರಾಮಗಳ ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದೆ.

ಕರ್ನಾಟಕ; ನವೆಂಬರ್ 16ರ ತನಕ ವಿವಿಧ ಜಿಲ್ಲೆಯಲ್ಲಿ ಮಳೆ, ಚಳಿಕರ್ನಾಟಕ; ನವೆಂಬರ್ 16ರ ತನಕ ವಿವಿಧ ಜಿಲ್ಲೆಯಲ್ಲಿ ಮಳೆ, ಚಳಿ

ಬಂಗಾಲಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಬಲ್ಲೇನಹಳ್ಳಿ, ಚಿಂದಗಿರಿಕೊಪ್ಪಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿವೆ. ಕಬ್ಬು, ಭತ್ತ, ಅಡಕೆ. ತೆಂಗು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿವೆ.

ಮಂಡ್ಯ ವಿಶೇಷ; ಹದ್ದಿನಕಲ್ಲಿನಲ್ಲಿ ಆಂಜನೇಯನ ಜೊತೆ ಇರುವುದು ರಾಮನಲ್ಲ! ಮಂಡ್ಯ ವಿಶೇಷ; ಹದ್ದಿನಕಲ್ಲಿನಲ್ಲಿ ಆಂಜನೇಯನ ಜೊತೆ ಇರುವುದು ರಾಮನಲ್ಲ!

ಭಾರತೀಯ ಹವಾಮಾನ ಇಲಾಖೆ ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ನವೆಂಬರ್ 16ರ ತನಕ ಮಳೆಯಾಗುವ ಮುನ್ಸೂಚನೆ ನೀಡಿದ್ದು 'ಯೆಲ್ಲೊ ಅಲರ್ಟ್' ಘೋಷಿಸಿದೆ.

ನವೆಂಬರ್ 17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆನವೆಂಬರ್ 17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಭಾರೀ ಮಳೆಗೆ ಕುಸಿದ ಮನೆಗಳು

ಭಾರೀ ಮಳೆಗೆ ಕುಸಿದ ಮನೆಗಳು

ಮಂಡ್ಯದ ಪಾಂಡವಪುರ ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ತಡರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಹಲವು ಮನೆಗಳು ಕುಸಿದು, ಜಲಾವೃತಗೊಂಡಿವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಶಾಸಕ ಸಿ. ಎಸ್.‌ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಯಾರೂ ಕೂಡ ಧೃತಿಗೇಡದೆ ಧೈರ್ಯದಿಂದ ಇರುವಂತೆ ಸೂಚಿಸಿದರು.

8 ಮನೆಗಳ ಗೋಡೆ ಕುಸಿತ

8 ಮನೆಗಳ ಗೋಡೆ ಕುಸಿತ

ಗ್ರಾಮಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ 8ಕ್ಕೂ ಹೆಚ್ಚು ಮನೆಗಳ ಗೋಡೆ ಕುಸಿತವಾಗಿದೆ. ಇದರಿಂದಾಗಿ ಅಗತ್ಯ ವಸ್ತುಗಳು ನೀರು ಪಾಲಾಗಿವೆ. ಮನೆ ಕಳೆದುಕೊಂಡ ಜನರು ಉಳಿದ ವಸ್ತುಗಳನ್ನು ಹೇರಿಕೊಂಡು ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದಾರೆ. ಸಿ. ಎಸ್.‌ ಪುಟ್ಟರಾಜಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆ ಸಂಪೂರ್ಣ ಭರ್ತಿ

ಕೆರೆ ಸಂಪೂರ್ಣ ಭರ್ತಿ

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪಾಂಡವಪುರದ ತಣ್ಣೂರು ಕೆರೆ ಸಂಪೂರ್ಣ ಭರ್ತಿಯಾಗಿದೆ. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲಕ್ಷ್ಮೀಸಾಗರ ಗ್ರಾಮಕ್ಕೂ ಭೇಟಿದರು. ಕೆರೆ ತುಂಬಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಕೆ. ಆರ್. ಪೇಟೆ ತಾಲೂಕಿನ ಹುಣಸನಹಳ್ಳಿಯಲ್ಲಿ ರಸ್ತೆ ಮಳೆ ನೀರಿನಿಂದ ಕೊಚ್ಚಿ ಹೋಗಿದೆ. ಹುಣಸನಹಳ್ಳಿ- ಹೆಚ್. ಬಳೇಕೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇಲ್ಲದಂತಾಗಿದೆ. ಮಳೆ ನೀರು ಅಕ್ಕ-ಪಕ್ಕದ ಜಮೀನುಗಳಿಗೆ ನುಗ್ಗಿದೆ.

ಮೆಟ್ಟೂರು ಜಲಾಶಯ ಭರ್ತಿಯಾಗಿದೆ

ಮೆಟ್ಟೂರು ಜಲಾಶಯ ಭರ್ತಿಯಾಗಿದೆ

ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಡ್ಯಾಂನಿಂದ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಮೆಟ್ಟೂರು ಜಲಾಶಯ ಭರ್ತಿಯಾಗಿದೆ. ಡ್ಯಾಂ ನೀರಿನ ಮಟ್ಟ 120 ಅಡಿ ತಲುಪಿದ್ದು, 93.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ವಾಯುಭಾರ ಕುಸಿತದ ಪರಿಣಾಮ ಸುರಿದ ಮಳೆಯಿಂದಾಗಿ ಈ ವರ್ಷದ ಕಾವೇರಿ ವಿವಾದ ತಣ್ಣಗಾಗಿದೆ.

ಕೆಆರ್‌ಎಸ್ ಜಲಾಶಯ ಭರ್ತಿ

ಕೆಆರ್‌ಎಸ್ ಜಲಾಶಯ ಭರ್ತಿ

ಅಕ್ಟೋಬರ್‌ನಲ್ಲಿ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ಬಾಗಿನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. "ಡ್ಯಾಂ ಸುರಕ್ಷಿತೆಯಾಗಬೇಕಾದರೇ ಗೇಟ್ ಸುರಕ್ಷತೆ ಮಾಡಬೇಕು. ಮಹಾರಾಜರ ಕಾಲದಲ್ಲಿ ಕಟ್ಟಿದ ಅಣೆಕಟ್ಟೆಗಳಲ್ಲಿ, 14 ಅಣೆಕಟ್ಟುಗಳು ನೆಲಸಮವಾಗಿವೆ. 11 ಅಣೆಕಟ್ಟುಗಳನ್ನು ಅಧುನೀಕರಣ ಮಾಡಲಾಗಿದೆ" ಎಂದು ಅವರು ಹೇಳಿದರು.

Recommended Video

ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada

English summary
Heavy rain in Mandya district Srirangapatna and Pandavapura taluk. 8 House damaged and crop destroyed due to rain water.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X