ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂಗಾರು ಮಳೆ; ಕೆಆರ್‌ಎಸ್‌ಗೆ 6 ಸಾವಿರ ಕ್ಯುಸೆಕ್ ಒಳಹರಿವು

|
Google Oneindia Kannada News

ಮಂಡ್ಯ, ಜೂನ್ 16; ಕೇರಳ ಮತ್ತು ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಲ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮಂಗಳವಾರ 1,228 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಬುಧವಾರ 6,379 ಕ್ಯುಸೆಕ್ ಒಳಹರಿವು ದಾಖಲಾಗಿದೆ.

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ; ತಗ್ಗು ಪ್ರದೇಶ ಜಲಾವೃತ ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ; ತಗ್ಗು ಪ್ರದೇಶ ಜಲಾವೃತ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಗರಿಷ್ಠ 124.80 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 82.50 ಅಡಿ ನೀರಿನ ಸಂಗ್ರಹವಿದೆ. ಹೊರಹರಿವು 361 ಕ್ಯುಸೆಕ್.

ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ

Heavy Rain KRS Dam Inflow Raises To 6379 Cusecs

ಪ್ರಸ್ತುತ ಡ್ಯಾಂನಲ್ಲಿ 12.146 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಗರಿಷ್ಠ 49.452 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದಾಗಿದೆ. ಕೆಆರ್‌ಎಸ್ ಜಲಾಶಯದ ನೀರನ್ನು ಕುಡಿಯುವ ನೀರು, ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗಾಗಿ ಬಳಸಿಕೊಳ್ಳಲಾಗುತ್ತದೆ.

ಜೂನ್ 17ರ ತನಕ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಜೂನ್ 17ರ ತನಕ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ

ಮಂಡ್ಯ, ಮೈಸೂರು ಮತ್ತು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಕೆಆರ್‌ಎಸ್ ಜಲಾಶಯದ ಪಾತ್ರ ಮಹತ್ವದ್ದು. ಕರ್ನಾಟಕ ತಮಿಳುನಾಡಿಗೆ ಕೆಆರ್‌ಎಸ್ ಮೂಲಕವೇ ನೀರನ್ನು ಹಂಚಿಕೆ ಮಾಡುತ್ತದೆ.

Recommended Video

ಕೊರೊನಾ ಲಸಿಕೆಯಿಂದ ವ್ಯಕ್ತಿಯ ಸಾವಾಗಿದೆ ಅನ್ನೋದನ್ನ ಒಪ್ಪಿಕೊಂಡ ಕೇಂದ್ರ ಸರ್ಕಾರ | Oneindia Kannada

ಕಾವೇರಿ ನದಿಗೆ ಅಡ್ಡವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೆಆರ್‌ಎಸ್ ಜಲಾಶಯ ನಿರ್ಮಾಣ ಮಾಡಲಾಗಿದೆ. ಅನೆಕಟ್ಟು 42.67 ಮೀಟರ್ ಎತ್ತರವಿದ್ದು, 49.50 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದಾಗಿದೆ.

English summary
Mandya district Krishna Raja Sagara (KRS) dam inflow raised to 6,379 cusecs after heavy rain witnessed in catchment area of Cauvery river.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X