ಐತಿಹಾಸಿಕ ದಸರಾ ಶ್ರೀರಂಗಪಟ್ಟಣದಲ್ಲಿ ಭರದ ಸಿದ್ಧತೆ!

Posted By: ಮಂಡ್ಯ ಪ್ರತಿನಿಧಿ
Subscribe to Oneindia Kannada

ಮಂಡ್ಯ, ಸೆಪ್ಟೆಂಬರ್ 6: ಮೈಸೂರು ದಸರಾದ ಮೂಲ ಸ್ಥಾನವಾದ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವನ್ನು ನಡೆಸಲು ಬೇಕಾದ ಸಿದ್ಧತಾ ಕಾರ್ಯಕ್ಕೆ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.

ಸೆ. 21 ರಿಂದ ಮೈಸೂರಿನಲ್ಲಿ ದಸರಾ ಫಿಲಂ ಫೆಸ್ಟಿವಲ್

ಈ ಕುರಿತು ದಸರಾ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸೆ. 24 ರಿಂದ 27ರ ವರೆಗೆ ಅರ್ಥಪೂರ್ಣವಾಗಿ ದಸರಾ ಮಹೋತ್ಸವ ನಡೆಯಲಿದೆ.

Historical Dasara in Shrirangapatna from 24th

ಈಗಾಗಲೇ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ಕೈಗೊಂಡಿರುವ ಕೆಲಸಗಳನ್ನು ತ್ವರಿತವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು. ಜಂಬೂ ಸವಾರಿಗೆ ಗಣ್ಯರನ್ನು ಆಹ್ವಾನಿಸುವ ಬಗ್ಗೆ ಹಾಗೂ ಕಲಾತಂಡಗಳ ಮೆರವಣಿಗೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಪ್ರಮುಖ ಸ್ಥಳಗಳಲ್ಲಿ ದಸರಾ ಮಹೋತ್ಸವ ಕುರಿತು ಬ್ಯಾನರ್‍ಗಳನ್ನು ಅಳವಡಿಸಬೇಕು. ಶ್ರೀರಂಗಪಟ್ಟಣದ ಸರ್ಕಾರಿ ಕಚೇರಿಗಳನ್ನು ದೀಪಾಲಂಕಾರ ಮಾಡುವುದು, ರಾಜಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲು ಅಧಿಕಾರಿಗಳು ಕ್ರಮವಹಿಸಲು ಸೂಚಿಸಿದ ಡಿಸಿ ಮಂಜುಶ್ರೀ ಅವರು ಬಾಬುರಾಯನಕೊಪ್ಪಲಿನ ದಸರಾ ಬನ್ನಿಮಂಟವನ್ನು ಸ್ವಚ್ಛಗೊಳಿಸುವಂತೆ ಹಾಗೂ ಕ್ರೀಡಾ ದಸರಾ, ಮಕ್ಕಳ ದಸರಾ, ಮಹಿಳಾ ದಸರಾವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಮಿತಿಯ ಜವಾಬ್ದಾರಿ ಅರಿತು ಕೆಲಸ ಮಾಡುವಂತೆ ಕಿವಿಮಾತು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Historical Dasara mahotsav in Srirangapatna, Mandya will be taking place from Sep 24th to 27th. Mandya district administration eagerly preparing for that.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ