International Yoga Day 2023: ಮಂಡ್ಯ ಜಿಲ್ಲೆಯ KRS ಬಳಿ ವಿಶ್ವ ಯೋಗ ದಿನಾಚರಣೆಗೆ ಸಿದ್ಧತೆ ಹೇಗಿದೆ?, ಇಲ್ಲಿದೆ ವಿವರ
ಮಂಡ್ಯ, ಜೂನ್, 07: ಈ ಬಾರಿಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21ರಂದು ವಿಶ್ವವಿಖ್ಯಾತ ಕೃಷ್ಣರಾಜಸಾಗರದ ಬಳಿ ನಡೆಸಲು ನಿರ್ಧರಿಸಲಾಗಿದ್ದು, ಇಲ್ಲಿ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೂನ್ 21ರಂದು ಬೆಳಗ್ಗೆ 7ರಿಂದ 7:45ರವರೆಗೂ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

1,500 ಜನರು ಭಾಗವಹಿಸುವ ನಿರೀಕ್ಷೆಯಿದೆ
9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಯಲು ಅಧಿಕಾರಿಗಳು ತಮಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಜಿಲ್ಲೆಯಲ್ಲಿ 1,500 ಜನರು ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಗುರಿ ನಿಗದಿಪಡಿಸಲಾಗಿದ್ದು, ಪ್ರತಿ ತಾಲೂಕಿನಿಂದ 200 ರಿಂದ 300 ಜನರನ್ನು ಕರೆತರಬೇಕು. ಜೊತೆಗೆ ಎರಡು ದಿನದ ಪೂರ್ವ ಪ್ರದರ್ಶನ ನೀಡಬೇಕು. ಇದರಲ್ಲಿ ಯೋಗ ಶಿಕ್ಷಕರು ಭಾಗಿಯಾಗಲಿದ್ದಾರೆ ಎಂದರು.
ಇದಕ್ಕಾಗಿ ಪ್ರತಿ ಹಳ್ಳಿ, ನಗರ, ಪಟ್ಟಣ, ಜಿಲ್ಲೆ ಮುಂತಾದ ಎಲ್ಲಾ ಸ್ಥಳದಲ್ಲಿ ಯೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪ್ರಮುಖ ಸಾರ್ವಜನಿಕ ಸಂಸ್ಥೆಗಳಾದ ಆಸ್ಪತ್ರೆ, ಪೊಲೀಸ್ ಠಾಣೆ, ಬಸ್ ನಿಲ್ದಾಣ, ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಬ್ಯಾನರ್ ಮತ್ತು ಯೋಗ ಕುರಿತು ಮಾನ್ಯ ಪ್ರಧಾನ ಮಂತ್ರಿಯವರ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಬೇಕು ಎಂದರು.
ಅಲ್ಲದೆ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳು ಹಾಗೂ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದು ಹೇಳಿದರು.
ಜಿಲ್ಲೆಯ ಯೋಗ ಸಂಸ್ಥೆಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರುಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಇರುವ ಯೋಗ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.
ವಿಶೇಷ ಬಸ್ ವ್ಯವಸ್ಥೆ
ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಗಮಿಸುವ ಯೋಗಪಟುಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಗ್ಗೆ ಮಂಡ್ಯದಿಂದ ಕೆ.ಆರ್.ಎಸ್, ಕೆ.ಆರ್.ಎಸ್.ನಿಂದ ಮಂಡ್ಯದವರೆಗೆ ಬಸ್ ಸೌಲಭ್ಯದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್. ನಾಗಾರಾಜು ಅವರು ತಿಳಿಸಿದರು. ಇನ್ನು ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸಿಹಿ ಹಾಗೂ ತಿಂಡಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಮಂಡ್ಯ ಉಪವಿಭಾಗಾಧಿಕಾರಿ ಕೃಷ್ಣಕುಮಾರ್, ರೆಡ್‌ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಓಂಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್‌ಗಳಾದ ವಿಜಯ್ ಕುಮಾರ್, ಸೌಮ್ಯ, ಅಶ್ವಿನಿ, ನರಸಿಂಹಮೂರ್ತಿ, ಹಿರಿಯ ಯೋಗ ಶಿಕ್ಷಕರಾದ ಶಂಕರನಾರಾಯಣಶಾಸ್ತ್ರಿ , ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್ ಎಸ್.ಎನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗ ದಿನದಂದು ಮೈಸೂರಿಗೆ ಆಗಮಿಸಿದ್ದು, ಅರಮನೆಯ ಆವರಣದಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿತ್ತು. ಅದೇ ರೀತಿ ಈ ಬಾರಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಬಳಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications