• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೇಲುಕೋಟೆ ವೈರಮುಡಿ ದರ್ಶನಕ್ಕೆ ಗುರುತಿನ ಚೀಟಿ ಕಡ್ಡಾಯ

|

ಮಂಡ್ಯ, ಮಾರ್ಚ್ 22: ಮೇಲುಕೋಟೆಯ ಚೆಲುವ ನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 19 ರಿಂದ ಆರಂಭಗೊಂಡಿದ್ದು, ಮಾ.30 ರವರೆಗೆ ನಡೆಯಲಿದೆ. ಈ ಜಾತ್ರೆಯಲ್ಲಿ ಭಾಗವಹಿಸಲು ಮೇಲುಕೋಟೆಯ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಆಗಮಿಸುವವರು ಸರ್ಕಾರ ನೀಡಿರುವ ಯಾವುದಾದರೊಂದು ಗುರುತಿನ ಚೀಟಿಯನ್ನು ತರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ತಿಳಿಸಿದ್ದಾರೆ.

ಸೋಮವಾರ (ಮಾ.22) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದು, ಸದರಿ ಆಚರಣೆಗೆ ಅಂತರ್ ರಾಜ್ಯ, ಅಂತರ್ ಜಿಲ್ಲೆ, ಮಂಡ್ಯದ ಇತರೆ ತಾಲ್ಲೂಕುಗಳಿಂದ ಬರುವ ಭಕ್ತಾಧಿಗಳಿಗೆ ಕಡ್ಡಾಯವಾಗಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದರು.

ಮಂಡ್ಯದಲ್ಲಿ ಹೊರ ರಾಜ್ಯದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಮಂಡ್ಯದಲ್ಲಿ ಹೊರ ರಾಜ್ಯದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಸೂಚಿಸಲಾಗಿದ್ದು, ಭಕ್ತಾಧಿಗಳಿಗೆ ಎರಡು ಕಡೆ ಚೆಕ್ ಪೋಸ್ಟ್ ಗಳನ್ನು ನಿಯೋಜಿಸಲಾಗಿದ್ದು, ಕೋವಿಡ್-19 ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗುವುದು ಹಾಗೂ ನೆಗೆಟಿವ್ ವರದಿ ಬಂದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ಸಾರ್ವಜನಿಕರು ಮತ್ತು ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಮತ್ತು ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನವನ್ನು ಪಡೆಯುವುದು. ದೇವಸ್ಥಾನದ ಪ್ರಾಂಗಣದೊಳಗೆ ಒಂದು ಬಾರಿಗೆ 50 ರಿಂದ 100 ಮಂದಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದರು.

ದೇವಾಲಯದ 200 ಮೀ. ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ. ಸುತ್ತಮುತ್ತಲಿನ ಹೊಟೇಲ್‍ಗಳಲ್ಲಿ ತಂಗುವಿಕೆಯನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಾ.24 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಾಲಯದಲ್ಲಿ ನಡೆಯುವ ಪೂಜಾ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಯೂಟ್ಯೂಬ್, ಫೇಸ್‍ಬುಕ್ ಮತ್ತು ಜಿಲ್ಲಾಧಿಕಾರಿಗಳ ವೆಬ್ ಸೈಟ್ ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಸಾರ್ವಜನಿಕರನ್ನು ಹೊರತುಪಡಿಸಿ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಮಾಧ್ಯಮದವರಿಗೆ ಹಾಗೂ ಅರ್ಚಕರು ಮತ್ತು ಸ್ವಯಂಸೇವಕರಿಗೆ ಪಾಸ್ ಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಮಾತನಾಡಿ, ""ಮಹೋತ್ಸವ ಸಂದರ್ಭದಲ್ಲಿ ಹೆಚ್ಚು ಜನ ಸೇರದಂತೆ ಬಿಗಿ ಬಂದೋಬಸ್ತ್‍ಗಾಗಿ 4 ಡಿಎಸ್‍ಪಿ, 16 ಸಿಪಿಐ, 31 ಪಿಎಸ್ಐ, 100 ಎಎಸ್ಐ, 432 ಹೆಡ್ ಕಾನ್‌ಸ್ಟೇಬಲ್ ಮತ್ತು ಪಿಸಿ, 2 ಕೆ.ಎಸ್.ಆರ್.ಪಿ, 9 ಡಿಎಆರ್ ಹಾಗೂ 2 ಕ್ಯೂಆರ್‍ಪಿ ಸೇರಿದಂತೆ ಒಟ್ಟು 650 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ'' ಎಂದರು.

ಸುದ್ದಿಗೋಷ್ಠಿಯಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ, ವಾರ್ತಾಧಿಕಾರಿ ಟಿ.ಕೆ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

   ಇಂದು ಕೂಡ ಸದನದಲ್ಲಿ ಸಿಡಿ ವಿಚಾರ ಚರ್ಚೆ ಆರಂಭಿಸಿದ ಕಾಂಗ್ರೆಸ್ | Oneindia Kannada
   English summary
   The Vairamudi Brahmotsava in Melukote will be held from 19th March till 30th May
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   loader
   X