ಸರ್ಕಾರಿ ನೌಕರರ ಅಕ್ರಮ ಪಿಯು ಪರೀಕ್ಷೆ: ಸಹಶಿಕ್ಷಕ ಕೆ.ಎನ್.ರಮೇಶ್ ಅಮಾನತು
ನಾಗಮಂಗಲ, ಜನವರಿ 04: ತಾಲೂಕಿನ ಅದ್ದೀಹಳ್ಳಿ ಸರ್ಕಲ್ ಬಳಿಯಿರುವ ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ ಕಾಲ ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.
ಶಿಕ್ಷಕ ಕೆ.ಎನ್.ರಮೇಶ್ ಅವರು ಬೆಂಗಳೂರಿನ ಭಾರತ್ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ಎಜುಕೇಷನ್ ಸಂಸ್ಥೆ ಕೈಜೋಡಿಸಿ ಕಳೆದ ಡಿ.18ರಿಂದ 23ರ ವರೆಗೆ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪಿಯು ಪರೀಕ್ಷೆ ಬರೆಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಶಾಂತಿನಿಕೇತನ ಪ್ರೌಢಶಾಲೆ ಮತ್ತು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಜಂಟಿಯಾಗಿ ಭೇಟಿಕೊಟ್ಟು ಸಮಗ್ರ ತನಿಖೆ ನಡೆಸಿದ್ದರು.

ಅಕ್ರಮ ಪಿಯು ಪರೀಕ್ಷೆಗೆ ಶಿಕ್ಷಕ ಕೆ.ಎನ್.ರಮೇಶ್ ಹಲವರನ್ನು ಸೇರ್ಪಡೆ ಮಾಡಿಸಿ ದಿನನಿತ್ಯ ಕರೆದುಕೊಂಡು ಬರುತ್ತಿದ್ದರೆಂದು ತನಿಖೆ ವೇಳೆ ದೃಢಪಟ್ಟಿದೆ. ಅಲ್ಲದೆ ಪರೀಕ್ಷಾ ಸಮಯದಲ್ಲಿ ಖುದ್ದು ಹಾಜರಿದ್ದು ಪರೀಕ್ಷೆಗೆ ಪೂರಕವಾದ ಮಾರ್ಗದರ್ಶನ ನೀಡಿರುವುದಾಗಿಯೂ ಸ್ವತಃ ಶಿಕ್ಷಕ ಕೆ.ಎನ್.ರಮೇಶ್ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರಿ ನೌಕರರು ಅನಾವಶ್ಯಕವಾಗಿ ಖಾಸಗಿ ಸಂಸ್ಥೆಯಾದ ಭಾರತ್ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ಎಜುಕೇಷನ್ ವತಿಯಿಂದ ನಡೆಸಲಾಗುತ್ತಿದ್ದ ಪರೀಕ್ಷಾ ಕೇಂದ್ರಕ್ಕೆ ಅತಿಕ್ರಮ ಪ್ರವೇಶ ಮಾಡಿರುವುದು ನಿಯಮ ಉಲ್ಲಂಘನೆ ಹಾಗೂ ಕರ್ನಾಟಕ ನಾಗರೀಕ ಸೇವಾ ನಿಯಮ ವರ್ಗೀಕರಣ ನಿಯಂತ್ರಣ ಅಪೀಲು ನಿಯಮಗಳು 1957 ಮತ್ತು ಕರ್ನಾಟಕ ಸರ್ಕಾರಿ ನೌಕರರ ನಡತೆ ನಿಯಮ 2020ರ ನಿಯಮ ಮೂರು ಉಪನಿಯಮ ವಿರುದ್ಧವಾಗಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಶಿಸ್ತುಪಾಲನಾ ಸಮಿತಿಯು ವರದಿ ನೀಡಿರುವ ಹಿನ್ನಲೆಯಲ್ಲಿ ನಾಗಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications