ಕೆಆರ್ಎಸ್ ಡ್ಯಾಂ ಮೇಲೆ ಜೀಪಿನಲ್ಲಿ ಮೋಜಿನ ಸವಾರಿ: ಪೊಲೀಸ್ ಅಧಿಕಾರಿ ಅಮಾನತು
ಮಂಡ್ಯ, ಮಾರ್ಚ್ 2: ಮಂಡ್ಯ ಸಮೀಪದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಆಣೆಕಟ್ಟೆಯ ಮೇಲೆ ಯುವಕನೊಬ್ಬ ಸರ್ಕಾರಿ ಪೊಲೀಸ್ ಜೀಪಿನಲ್ಲಿ ಮೋಜಿನ ಸವಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀಪ್ ನೀಡಿದ್ದ ಪೊಲೀಸ್ ಅಧಿಕಾರಿಯನ್ನು ಇದೀಗ ಅಮಾನತು ಮಾಡಲಾಗಿದೆ.
ಕೆಆರ್ಎಸ್ ಅಣೆಕಟ್ಟಿನ ಮೇಲೆ ಪೊಲೀಸ್ ಜೀಪ್ ಚಲಾಯಿಸುವುದಕ್ಕೆ ಅನುವು ಮಾಡಿ ಕೊಟ್ಟಿದ್ದು, ಜೀಪ್ನ ದುರ್ಬಳಕೆ ಆರೋಪದಡಿಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಬಿ ಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.
ಫೆ.9 ರಂದು ಸಂಜೆ 4 ಗಂಟೆ ಸುಮಾರಿಗೆ ಯುವಕ ಸರ್ಕಾರಿ ಜೀಪ್ ಚಲಾಯಿಸುತ್ತಿದ್ದರೆ ಪೊಲೀಸ್ ಅಧಿಕಾರಿ ಪಕ್ಕದಲ್ಲಿ ಕೂತು ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿದಿದ್ದರು. ಈ ದೃಶ್ಯಾವಳಿ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಮಾಧ್ಯಮಗಳೂ ವರದಿ ಮಾಡಿದ್ದವು.

ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಆಣೆಕಟ್ಟೆಯ ಮೇಲೆ ಸಾರ್ವಜನಿಕರಿಗೆ ಸಂಚಾರ ನಿರ್ಬಂಧ ವಿಧಿಸಿದರೂ ಯುವಕ ಮೋಜಿನ ಸವಾರಿ ಮಾಡಲು ಅವಕಾಶ ನೀಡಲಾಗಿರುವುದರಿಂದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications