ಮಂಡ್ಯ : ಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿ

ಮಂಡ್ಯ, ಏಪ್ರಿಲ್ 03 : ಕರ್ನಾಟಕದಲ್ಲಿ ಮತ್ತೆ ಐಟಿ ದಾಳಿ ನಡೆದಿದೆ. ಮಾಜಿ ಸಚಿವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ ಅವರ ಮಂಡ್ಯದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದ ಸುಭಾಷ್ ನಗರದ 1ನೇ ತಿರುವಿನಲ್ಲಿ ಎಂ.ಎಸ್.ಆತ್ಮಾನಂದ ಅವರ ಮನೆಯಿದೆ. ಬುಧವಾರ 5 ಅಧಿಕಾರಿಗಳು ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದಲ್ಲಿ ಐಟಿ ದಾಳಿಯ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಳೆದ ವಾರ ಜೆಡಿಎಸ್ ನಾಯಕರ ಮೇಲೆ ಮೇಲೆ ದಾಳಿ ಮಾಡಿದಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

IT raid on Mandya Congress leader MS Atmananda house

ಕಾಂಗ್ರೆಸ್ ಮತ್ತು ಜೆಡಿಎಸ್‌ ನಾಯಕರು ಆದಾಯ ತೆರಿಗೆ ಇಲಾಖೆ ಕಚೇರಿಯ ಮುಂದೆ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮಂಡ್ಯ ಲೋಕಸಭಾ ಕ್ಷೇತ್ರದ ಪರಿಚಯ

ಮಾರ್ಚ್ 30ರಂದು ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸಕ್ಕರೆ ಕಾರ್ಖನೆ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+