ಫೆಬ್ರವರಿ 28ರಿಂದ ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವ, ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 8ರವರೆಗೆ ಒಂಬತ್ತು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಹಾಗಾದರೆ ಜಾತ್ರೆಯಲ್ಲಿ ಯಾವೆಲ್ಲ ಕಾರ್ಯಕ್ರಮಗಳು ನಡೆಯಲಿವೆ ಎಂದು ಇಲ್ಲಿ ತಿಳಿಯಿರಿ.
ನಾಗಮಂಗಲ, ಫೆಬ್ರವರಿ, 26: ಪರಶಿವನ ತಪೋಭೂಮಿ, ದೇವಾನು ದೇವತೆಗಳು ನೆಲೆಸಿರುವ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 28ರಿಂದ ಮಾರ್ಚ್ 8ರ ವರೆಗೆ ಒಂಬತ್ತು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಫೆಬ್ರವರಿ 28ರ ಬೆಳಗ್ಗೆ 6ಗಂಟೆಗೆ ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾ ಪೂಜೆ ಆರಂಭವಾಗಲಿದೆ. ಬಳಿಕ ಬೆಳಗ್ಗೆ 8 ಗಂಟೆಗೆ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನಂದಿ ಪೂಜೆ ಹಾಗೂ ಧರ್ಮಧ್ವಜಾರೋಹಣ ಮಾಡಲಿದ್ದಾರೆ. ಈ ಮೂಲಕ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು. ಅದೇ ದಿನ ಬೆಳಗ್ಗೆ 10ಗಕ್ಕೆ ಸಭಾ ಕಾರ್ಯಕ್ರಮವೂ ನಡೆಯಲಿದೆ.
ಮಾರ್ಚ್ 1ರ ಮಧ್ಯಾಹ್ನ 3ಗಂಟೆಗೆ ಕಬ್ಬಡಿ ಪಂದ್ಯಾವಳಿಯ ಉದ್ಘಾಟನೆ ಆಗಲಿದೆ. ಸಂಜೆ6 ಗಂಟೆಗೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಇನ್ನು ಮಾರ್ಚ್ 2ರ ಮಧ್ಯಾಹ್ನ 3ಕ್ಕೆ ಕಬ್ಬಡಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಹಾಗೂ ಸಂಜೆ 6ಕ್ಕೆ ಸರ್ವಾಲಂಕೃತ ಶ್ರೀ ಮಲ್ಲೇಶ್ವರಸ್ವಾಮಿಯ ಉತ್ಸವ ನಡೆಯಲಿದೆ.

ಯಾವೆಲ್ಲ ಕಾರ್ಯಕ್ರಮಗಳು ನಡೆಯಲಿವೆ?
ಮಾರ್ಚ್ 3ರ ಬೆಳಗ್ಗೆ 9:30ಕ್ಕೆ ಸರಳ ಸಾಮೂಹಿಕ ವಿವಾಹ ಹಾಗೂ ವಿವಾಹವಾಗಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಹಿರಿಯ ದಂಪತಿಗಳಿಂದ ಆಶೀರ್ವಾದದ ವ್ಯವಸ್ಥೆಯನ್ನು ಮಾಡಲಾಗಿದೆ. 50 ವರ್ಷಗಳ ಕಾಲ ಜೀವನ ನಡೆಸಿ ಸತಿಪತಿಗಳಾಗಿ ಧನ್ಯೋಗೃಹಸ್ಥಾಶ್ರಮಃ ಎಂಬಂತೆ ಬದುಕಿದ ಆ ಎಲ್ಲ ಹಿರಿಯ ದಂಪತಿಗಳನ್ನೂ ಶ್ರೀಮಠದ ಪರವಾಗಿ ಸನ್ಮಾನಿಸಲಾಗುವುದು.

ವದು-ವರರಿಗೆ ವಸ್ತ್ರಗಳ ವ್ಯವಸ್ಥೆ
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 21 ವರ್ಷ ಮೇಲ್ಪಟ್ಟ ವರ ಹಾಗೂ 18 ವರ್ಷ ಮೇಲ್ಪಟ್ಟ ವಧುವಿಗೆ ಉಚಿತವಾಗಿ ತಾಳಿ, ಕಾಲುಂಗುರ, ಬಾಗಿನ ಮತ್ತು ವಧು-ವರರಿಗೆ ವಸ್ತ್ರಗಳನ್ನು ನೀಡಲಾಗುವುದು. ಜೊತೆಗೆ ಸಂಬಂಧಿಕರು ಹಾಗೂ ಹಿತೈಷಿಗಳಿಗೆ ಭೋಜನ ವ್ಯವಸ್ಥೆಯನ್ನು ಸಹ ಆಯೋಜಿಸಲಾಗಿದೆ. ಅಂದು ಸಂಜೆ 6ಕ್ಕೆ ಸರ್ವಾಲಂಕೃತ ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ನಡೆಯಲಿದೆ.

ಕಾರ್ಯಕ್ರಮಗಳ ವಿವರ ಇಲ್ಲಿದೆ
ಮಾರ್ಚ್ 4ರ ಬೆಳಗ್ಗೆ 7:30ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣಕವಚಾಲಂಕಾರ ಪೂಜೆ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಸಂಜೆ 6ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿ ಹೂವಿನ ಪಲಕ್ಕಿ ಉತ್ಸವ ಮತ್ತು ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಮಾರ್ಚ್ 5ರ ಬೆಳಗ್ಗೆ 10ಕ್ಕೆ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಉದ್ಘಾಟನೆ ಆಗಲಿದೆ. ಈ ಕಾರ್ಯಕ್ರಮಕ್ಕೆ ನಾಡಿನ ಹಲವು ಭಾಗಗಳಿಂದ ರೈತರು, ಕೈಗಾರಿಕೋದ್ಯಮಿಗಳು, ಕೃಷಿ ತಜ್ಞರು ಆಗಮಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ವಿವಿಧ ರೀತಿಯ ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಸಂಬಂಧಿಸಿದ ನೂರಾರು ಮಳಿಗೆಗಳನ್ನು ತೆರೆಯಲಾಗುವುದು. ಸಂಜೆ 6ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಜ್ವಾಲಾಪೀಠಾರೋಹಣ ಮತ್ತು ಸಿದ್ಧ ಸಿಂಹಾಸನ ಪೂಜೆ ನಡೆಯಲಿದೆ. ಹಾಗೂ ರಾತ್ರಿ 8ಕ್ಕೆ ಚಂದ್ರಮಂಡಲೋತ್ಸವ ಪೂಜೆ ನಡೆಯಲಿದೆ.
ಮಾರ್ಚ್ 6ರ ಬೆಳಗ್ಗೆ ದೇವತೆಗಳಿಗೆ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಸಂಜೆ 6:30ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಯ ತಿರುಗಣಿ ಉತ್ಸವ, ಪುಷ್ಕರಣಿಯಲ್ಲಿ ತೆಪ್ಪೋತ್ಸವ ಹಾಗೂ ಇಡೀ ರಾತ್ರಿ ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕೊನೆಯ ದಿನದ ಕಾರ್ಯಕ್ರಮಗಳ ವಿವರ
ಇನ್ನು ಮಾರ್ಚ್ 7ರ ಮುಂಜಾನೆ ನಡೆಯಲಿರುವ ಬ್ರಾಹ್ಮಿ ಮೂಹೂರ್ತದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ ಹಾಗೂ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಅಡ್ಡ ಪಲ್ಲಕ್ಕಿ ಉತ್ಸವು ಬಹಳ ವಿಜೃಂಭಣೆಯಿಂದ ಜರುಗಲಿದ್ದು, ನಾಡಿನಾದ್ಯಂತ ಸಾವಿರಾರು ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ. ಹಾಗೆಯೇ ಇದೇ ದಿನ ಸಂಜೆ 6ಕ್ಕೆ ವಿವಿಧ ಗ್ರಾಮಗಗಳ ನೂರಾರು ಗ್ರಾಮದೇವತೆಗಳ ಉತ್ಸವ ನಡೆಯಲಿದೆ. ಬಳಿಕ ಸಂಜೆ 6ಕ್ಕೆ ಶ್ರೀ ಸೋಮೇಶ್ವರ ಸ್ವಾಮಿಯ ಉತ್ಸವ ಜರುಗಲಿದೆ.
ಮಾರ್ಚ್ 8ರಂದು ಜಾತ್ರಾ ಮಹೋತ್ಸವದ ಕೊನೆಯ ದಿನವಾಗಿದೆ. ಅಂದು ಶ್ರೀಕ್ಷೇತ್ರದ ಬಿಂದು ಸರೋವರದಲ್ಲಿ ಗಂಗಾ ಪೂಜೆ, ಸ್ನಾನ ಇತ್ಯಾದಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದ ನಂತರ ಧರ್ಮಧ್ವಜಾವರೋಹಣ ಹಾಗೂ ಸಭಾ ಕಾರ್ಯಕ್ರಮದ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications