Get Updates
Get notified of breaking news, exclusive insights, and must-see stories!

ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಮೇಕೆದಾಟು ಅಸ್ತ್ರ

ಲೋಕಸಭಾ ಚುನಾವಣೆ 2024ರ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಬುಧವಾರದಂದು ಮಂಡ್ಯ ನಗರ ಹಾಗೂ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೃಹತ್ ರೋಡ್ ಶೋ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಚ್‌ಡಿಕೆ, ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರನ್ನು ಮಾರಿಕೊಂಡಿದೆ ಎಂದು ಆರೋಪಿಸಿದರು.

JDS-BJP Alliance Candidate HD Kumaraswamy Roadshow In Mandya

ರಾಜ್ಯದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡುತ್ತೇವೆ ಎನ್ನುತ್ತಾರೆ, ಕಾವೇರಿಯನ್ನು ಕಾಪಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡಿನಲ್ಲಿ ಮೇಕೆದಾಟು ವಿರೋಧಿ ಆಗಿರುವ ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ರಾಜಕೀಯ ಸ್ವಾರ್ಥಕ್ಕಾಗಿ ಸ್ಟಾಲಿನ್ ಅವರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಡಿಕೆ ಶಿವಕುಮಾರ್ ಮೌನ ಯಾಕೆ?

ಮೇಕೆದಾಟು ಯೋಜನೆಗೆ ಡಿಎಂಕೆ ತಕರಾರು ತೆಗೆದಿದೆ. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕರ್ನಾಟಕ ರಾಜ್ಯ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ. ಎಲ್ಲ ರೀತಿಯಲ್ಲಿಯೂ ಅಡ್ಡಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದರ ಬಗ್ಗೆ ಸಿದ್ದರಾಮಯ್ಯ ಅವರಾಗಲಿ, ಡಿ.ಕೆ.ಶಿವಕುಮಾರ್ ಅವರಾಗಲಿ ಚಕಾರ ಎತ್ತಿಲ್ಲ ಎಂದು ಕಿಡಿಕಾರಿದರು.

ಕೆಆರ್‌ಎಸ್‌ನಲ್ಲಿ 92 ಅಡಿ ನೀರಿದ್ದರೂ ಭತ್ತ ನಾಟಿ ಮಾಡಬೇಡಿ ಎಂದು ಸರ್ಕಾರ ಆದೇಶ ಹೊರಡಿಸಿತು. ಇಂದು 86 ಅಡಿ ನೀರಿದ್ದರೂ ನಾಲೆಗಳಿಗೆ ನೀರು ಹರಿಸದೆ ಮಂಡ್ಯ ಜಿಲ್ಲಾ ರೈತರು ಪರಿತಪಿಸುವಂತೆ ಮಾಡಿದೆ. ಮಂಡ್ಯ ನೆಲಕ್ಕೆ ಪ್ರವೇಶ ಮಾಡುವಾಗ 'ಸಕ್ಕರೆ ನಾಡಿಗೆ ಸ್ವಾಗತ' ಎಂದು ನಾಮಫಲಕ ಇರುತ್ತದೆ. ಆದರೆ, ಈ ಸರ್ಕಾರ ಮಂಡ್ಯವನ್ನು ಬರಡು ಜಿಲ್ಲೆ ಮಾಡಿದೆ. ಈ ಸರ್ಕಾರ ಬಂದ ಮೇಲೆ ಎಲ್ಲ ಕಡೆ ಕಬ್ಬು ಒಣಗಿದೆ. ಇನ್ನು ಅದಕ್ಕೆ ಬೆಂಕಿ ಹಾಕೋದು ಮಾತ್ರ ಬಾಕಿ ಇದೆ. ಕೋಟ್ಯಂತರ ರೂ. ಮೌಲ್ಯದ ಬೆಳೆ ನಾಶವಾಗಿದೆ. ಆದರೆ, ಕಾಂಗ್ರೆಸ್ 2 ಸಾವಿರ ಪರಿಹಾರ ಕೊಟ್ಟರೆ ಉಪಯೋಗ ಏನು ಎಂದು ಪ್ರಶ್ನಿಸಿದರು.

ದೇವೇಗೌಡರು ಈ ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಕೆಲವರು ಕೇಳಿದ್ದಾರೆ. ಅವರು ಕೊಟ್ಟಿರುವ ಕೊಡುಗೆ ಏನು ಎನ್ನುವುದು ಜನರಿಗೆ ಗೊತ್ತಿದೆ. ಗೊತ್ತಿಲ್ಲ ಎಂದರೆ ತಿಳಿದುಕೊಳ್ಳಿ. ಮೇಕೆದಾಟು, ಕಾವೇರಿ ನೀರಿನ ವಿಷಯದಲ್ಲಿ ರಾಜ್ಯಸಭೆಯಲ್ಲಿ ದೇವೇಗೌಡರು ಪರಿಪರಿಯಾಗಿ ಬೇಡಿಕೊಂಡರೂ ಸದನದಲ್ಲಿಯೇ ಕೂತಿದ್ದ ಮಲ್ಲಿಕಾರ್ಜುನ ಖರ್ಗೆ, ಇತರೆ ಕಾಂಗ್ರೆಸ್ ಸದಸ್ಯರು ಮೌನವಾಗಿ ಕೂತಿದ್ದರು. ಅವರು ಒಂದು ಮಾತನ್ನು ಆಡಲಿಲ್ಲ. ಯಾಕೆ? ಎಂದು ಪ್ರಶ್ನೆ ಮಾಡಿದರು.

ಮೊದಲು ಸ್ಟಾಲಿನ್ ಮನವೊಲಿಸಿ, ಅಥವಾ ಡಿಎಂಕೆ ಬೆದರಿಕೆಗೆ ಸೊಪ್ಪು ಹಾಕಲ್ಲ, ನಮಗೆ ಮೇಕೆದಾಟು ಬೇಕು ಎಂದು ಹೇಳಿ. ಮೇಕೆದಾಟು ಯೋಜನೆಗೆ ನಾವು ಐದು ನಿಮಿಷದಲ್ಲಿ ಅನುಮತಿ ಕೊಡಿಸುತ್ತೇವೆ. ನಿಮ್ಮ ಮಿತ್ರಪಕ್ಷ ಡಿಎಂಕೆ ಸರ್ಕಾರದ ಮನವೊಲಿಸಿ ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಗಳನ್ನು ಹಿಂಪಡೆಯುವಂತೆ ಮಾಡಿ ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+